ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ರೈತ ದಸರಾದಲ್ಲಿ ಗ್ರಾಮೀಣ ಪ್ರದೇಶದ ರೈತರ ಪ್ರಮುಖ ಕಾರ್ಯಕ್ರಮವಾಗಿರುವ ಹಾಲು ಕರೆಯುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನೀಡುವ ಬಹುಮಾನವನ್ನು ದ್ವಿಗುಣಗೊಳಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಹೇಳಿದರು.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ರೈತ ದಸರಾ ಕಾರ್ಯಕ್ರಮದ ಅಽಕ ಹಾಲು ಕರೆಯುವ ಸ್ಪರ್ಧೆ ಹಾಗೂ ಶ್ವಾನ ಪ್ರದರ್ಶನ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಅ. ೬ ಮತ್ತು ೭ರಂದು ಜೆ. ಕೆ. ಮೈದಾನದಲ್ಲಿ ನಡೆಯುವ ಹಾಲು ಕರೆಯುವ ಸ್ಪರ್ಧೆಗೆ ಬಹುಮಾನಗಳ ಮೊತ್ತವನ್ನು ಈ ಹಿಂದಿನ ವರ್ಷಗಳಿಗಿಂತ ದ್ವಿಗುಣಗೊಳಿಸಲಾಗಿದೆ ಎಂದರು. ಅ. ೬ರಂದು ನಡೆಯುವ ಶ್ವಾನ ಪ್ರದರ್ಶನದಲ್ಲಿ ನಾಗರಿಕರು ತಮ್ಮ ಶ್ವಾನಗಳೊಂದಿಗೆ ಭಾಗವಹಿಸ ಬೇಕು ಎಂದು ಮನವಿ ಮಾಡಿದರು. ರೈತ ದಸರಾ ಉಪ ಸಮಿತಿ ಉಪ ವಿಶೇಷಾಧಿಕಾರಿ ಡಾ. ಎಂ. ಕೃಷ್ಣರಾಜು, ಕಾರ್ಯಾಧ್ಯಕ್ಷ ಕೆ. ಜಿ. ರವಿ, ಸಹ ಕಾರ್ಯದರ್ಶಿ ಡಾ. ನಾಗರಾಜು, ಜಿ. ಎಚ್. ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಥಮ ಬಹುಮಾನವಾಗಿ ೧ ಲಕ್ಷ ರೂ., ದ್ವಿತೀಯ ಬಹುಮಾನವಾಗಿ ೮೦ ಸಾವಿರ ರೂ. , ತೃತೀಯ ೬೦ ಸಾವಿರ ರೂ. , ನಾಲ್ಕನೇ ಬಹುಮಾನವಾಗಿ ೪೦ ಸಾವಿರ ರೂ. ಗೆ ನಿಗದಿಪಡಿಸಲಾಗಿದೆ. ಈ ಸ್ಪರ್ಧೆಗೆ ರಾಜ್ಯದಾದ್ಯಂತ ಅತಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಹೈನುಗಾರರು ಉತ್ತಮ ತಳಿಯ ರಾಸುಗಳೊಂದಿಗೆ ಭಾಗವಹಿಸಲು ಮತ್ತು ಬಹುಮಾನ ಗೆಲ್ಲುವುದಕ್ಕೆ ಉತ್ತೇಜಿಸಲು ಇಂತಹ ನಿರ್ಧಾರ ಮಾಡಲಾಗಿದೆ. – ಕೆ. ವೆಂಕಟೇಶ್, ಪಶು ಸಂಗೋಪನಾ ಸಚಿವ
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…
ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಪ್ರಕರಣ ರದ್ದು…
ಹಾಸನ: ಮನೆ ಸೀಜ್ ಮಾಡುವುದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ…
ರಾಮನಗರ: ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಹೊರವಲಯದ…
ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ…