Andolana originals

ದಸರಾ: ಪ್ರವಾಸೋದ್ಯಮಕ್ಕೆ ಭಾರೀ ವರಮಾನ

ಚಿರಂಜೀವಿ ಸಿ.ಹುಲ್ಲಹಳ್ಳಿ
ಹೋಟೆಲ್ ಉದ್ಯಮಕ್ಕೆ 100 ಕೋಟಿ ರೂ. ವಹಿವಾಟು

ಮೈಸೂರು: ದಸರಾ ಹಬ್ಬ ಶನಿವಾರ ಸಂಪನ್ನಗೊಂಡಿದೆ. 10 ದಿನಗಳ ಈ ಉತ್ಸವದ ಕೂನೆಯ ನಾಲ್ಕು ದಿನಗಳಲ್ಲಿ ನಿರೀಕ್ಷೆ ಮೀರಿ ಪ್ರವಾಸೋದ್ಯದು ವರಮಾನ ಹರಿದುಬಂದಿದೆ. ನವರಾತ್ರಿಯ ಸಂದರ್ಭದಲ್ಲಿ ಲಕ್ಷಾಂತರ ಜನರು ಆಗಮಿಸಿರುವ ಕಾರಣ ಪ್ರವಾಸೋದ್ಯಮಕ್ಕೆ ದೊಡ್ಡ ಬೂಸ್ಟರ್ ಡೋಸ್ ಸಿಕ್ಕಿದ್ದು, ಹೋಟೆಲ್ ಉದ್ಯಮಕ್ಕೆ ಕೊನೆಯ ನಾಲ್ಕು ದಿನಗಳಲ್ಲಿ ಬರೋಬ್ಬರಿ ನೂರು ಕೋಟಿ ರೂ ವಹಿವಾಟು ನಡೆದಿದೆ.

ಕಳೆದ ವರ್ಷ ಬರದ ಹಿನ್ನೆಲೆಯಲ್ಲಿ ದಸರಾವನ್ನು ಸಾಂಪ್ರದಾಯಿಕವಾಗಿ ಆಚರಿಸಿದ್ದರಿಂದ ಪ್ರವಾಸೋದ್ಯಮ ವಲಯಕ್ಕೆ ಸ್ವಲ್ಪ ಪೆಟ್ಟುಬಿದ್ದಿತ್ತು. ಆದರೆ, ಈ ಬಾರಿಯ ದಸರೆಗೆ ಪ್ರವಾಸಿಗರು ಪ್ರವಾಹದೋಪಾದಿಯಲ್ಲಿ ಆಗಮಿಸಿದ್ದರಿಂದ ದೊಡ್ಡ ಪ್ರಮಾಣದ ವಹಿದಾಟು ನಡೆದು ಆದಾಯವೂ ಬಂದಿದೆ.

ಕಳೆದ ಎರಡು-ಮೂರು ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ಬಾರಿ ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡಿದ್ದಾರೆ. ಅರಮನೆ, ಶ್ರೀಚಾಮರಾಜೇಂದ್ರ ಮೃಗಾಲಯ, ಚಾಮುಂಡಿಬೆಟ್ಟ ಸೇರಿದಂತೆ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸಿಗರು ಬಗ್ಗೆ ಇಟ್ಟಿದ್ದಾರೆ.

ನವರಾತ್ರಿ ಹಬ್ಬಕ್ಕೆ ಅ.3ರಂದು ಚಾಮುಂಡಿ ಬೆಟ್ಟದಲ್ಲಿ ಚಾಲನೆ ಲಭಿಸಿತ್ತು. ಅಂದಿನಿಂದಲು ದಸರಾ ಉತ್ಸವ ವೈವಿಧ್ಯಮಯ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ವಿವಿಧ ಜಿಲ್ಲೆಗಳಿಂದಷ್ಟೇ ಅಲ್ಲದೇ ನೆರೆ ರಾಜ್ಯ, ವಿದೇಶಗಳಿಂದಲೂ ಲಕ್ಷಾಂತರ ಮಂದಿ ಪ್ರವಾಸಿಗರು ಮೈಸೂರಿಗೆ ಬಂದಿದ್ದು, ಪ್ರವಾಸಿ ತಾಣಗಳ ವೀಕ್ಷಣೆಗೆ ಮುಗಿಬಿದ್ದಿದ್ದರು.

ಕಳೆದ ಬಾರಿ ಒಟ್ಟಾರೆ 5 ಲಕ್ಷ ಮಂದಿ ಮೈಸೂರಿಗೆ ಭೇಟಿ ನೀಡಿದ್ದರು. ಆದರೆ, ಈ ಬಾರಿ 6 ಲಕ್ಷಕ್ಕೂ ಅಧಿಕ ಮಂದಿ ಮೈಸೂರಿಗೆ ಆಗಮಿಸಿದರು ಎಂದು ಆಂದಾಜಿಸಲಾಗಿದೆ. ಹೋಟೆಲ್ ಉದ್ಯಮ, ವ್ಯಾಪಾರ ವಹಿವಾಟು, ಸಿಹಿ, ಖಾರ ತಿನಿಸುಗಳು ಮತ್ತಿತರ ವ್ಯಾಪಾರಗಳಿಂದ 100 ಕೋಟಿ ರೂ.ಗಳಿಗೂ ಹೆಚ್ಚು ವಹಿವಾಟು ನಡೆದಿದೆ.

ಈ ಬಾರಿ ಗರಿಷ್ಠ ಪ್ರಮಾಣದಲ್ಲಿ ಪ್ರವಾಸಿಗರು ಭೇಟಿ ನೀಡಿದ್ದಾರೆ. 2020 ಮತ್ತು 2021ರಲ್ಲಿ ಕೊರೊನಾ ಸಾಂಕ್ರಾಮಿಕ ಪಿಡುಗಿನಿಂದ ದಸರಾ ಅರಮನೆಗಷ್ಟೆ ಸೀಮಿತವಾಗಿತ್ತು, ಬರಗಾಲದ ಪರಿಣಾಮ 2023ರಲ್ಲಿ ರಾಜ್ಯ ಸರ್ಕಾರ ಸರಳ ದಸರಾ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರವಾಸಿಗರು ಮೈಸೂರಿನತ್ತ ಮುಖ ಮಾಡಿರಲಿಲ್ಲ. ಆದರೆ, ಈ ವರ್ಷ ನಿರೀಕ್ಷೆ ಮೀರಿ ಪ್ರವಾಸಿಗರು ನಗರಕ್ಕೆ ಲಗ್ಗೆ ಇಟ್ಟಿದ್ದಾರೆ.

ನಗರದ 415 ಹೋಟೆಲ್‌ನಲ್ಲಿರುವ ಎಲ್ಲ ಮಾದರಿಯ 10,500 ಕೊಠಡಿಗಳು ಸಂಪೂರ್ಣ ಭರ್ತಿಯಾಗಿ ಹೊರವಲಯದಲ್ಲಿನ ರೆಸಾರ್ಟ್ ರಾಷ್ಟ್ರಗಳಲ್ಲಿ ಉಳಿದುಕೊಂಡಿದ್ದಾರೆ. ನಂಜನಗೂಡು, ಹುಣಸೂರು, ಶ್ರೀರಂಗಪಟ್ಟಣದಲ್ಲಿಯೂ ರೂಂಗಳನ್ನು ಬಾಡಿಗೆ ಪಡೆದಿದ್ದಾರೆ. ಹೀಗಾಗಿ ಹೋಟೆಲ್ ಉದ್ಯಮದಲ್ಲಿ 100 ಕೋಟಿ ರೂ. ವಹಿವಾಟು ನಡೆದಿದ್ದು, ಹೋಟೆಲ್ ಉದ್ಯಮವೂ ಸುಧಾರಿಸುವಂತಾಯಿತು.

2022ರ ನವರಾತ್ರಿಯ ದಿನಗಳಲ್ಲಿ 16,09,993 ಮಂದಿ ಮೃಗಾಲಯದಲ್ಲಿ ವನ್ಯಜೀವಿಗಳನ್ನು ಕಣ್ಣುಂಬಿಕೊಂಡಿದ್ದರು. 2023ರಲ್ಲಿ 18,09,002 ಮಂದಿ ಬಂದಿದ್ದರು. ಆದರೆ, ಈ ಬಾರಿ 17,09,400 ಮೃಗಾಲಯದಲ್ಲಿ ಪ್ರಾಣಿಗಳನ್ನು ವೀಕ್ಷಿಸಿದ್ದಾರೆ. ಕಾರಂಜಿಕೆರೆಗೂ ಹೆಚ್ಚ ಕಡಿಮೆ ಅಷ್ಟೇ ಸಂಖ್ಯೆಯ ಜನರು ಭೇಟಿ ನೀಡಿದ್ದಾರೆ ಎಂದು ಶ್ರೀ ಚಾಮರಾಜೇಂದ್ರ ಮೃಗಾಲಯದ ನಿರ್ದೇಶಕ ಮಹೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ದಸರಾ ಹಬ್ಬದ ಮೊದಲ 6 ದಿನಗಳಲ್ಲಿ ಕೇವಲ 50ರಷ್ಟು ಹೋಟೆಲ್ ತೊಂಡಿಗಳನ್ನೇ ಭರ್ಸಿಯಾಗಿದ್ದವು. ಕೊನೆಯ 4 ದಿನಗಳಲ್ಲಿ ಶೇ.100ರಷ್ಟು ಕೊಠಡಿಗಳು ಭರ್ತಿಯಾದವು. ಇದರಿಂದ 100 ಕೋಟಿ ರೂ ವಹಿವಾಟು ನಡೆದಿದ್ದು, ಹೋಟೆಲ್‌ ಉದ್ಯಮವು ಸುಧಾರಿಸುವಂತಾಯಿ.
– ಸಿ.ನಾರಾಯಣಗೌಡ, ಅಧ್ಯಕ್ಷರು, ಹೋಟೆಲ್ ಮಾಲೀಕರ ಸಂಘ, ಮೈಸೂರು.

ಮೃಗಾಲಯಕ್ಕೆ ಕಳೆದ ವರ್ಷಕ್ಕಿಂತ ಕಡಿಮೆ ಪ್ರವಾಸಿಗರು!
ಮೈಸೂರು ದಸರಾ ಮಹೋತ್ಸವದಲ್ಲಿ ಮೈಸೂರಿಗೆ ಆಗಮಿಸುವ ಪ್ರವಾಸಿಗರು ಅರಮನೆ ಹಾಗೂ ಮೃಗಾಲಯಕ್ಕೆ ಭೇಟಿ ನೀಡುವುದು ಖಚಿತ, ಆದರೆ, ಮೃಗಾಲಯಕ್ಕೆ ಕಳೆದ ವರ್ಷಕ್ಕಿಂತ ಕಡಿಮೆ ಜನರು ಮೃಗಾಲಯಕ್ಕೆ ಭೇಟಿ ನೀಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

9 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

15 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

19 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

22 hours ago