ಸುಣ್ಣ-ಬಣ್ಣ ಬಳಿಯುವ ಕೆಲಸ ಬಿರುಸು; ಸಸ್ಯಕಾಶಿಗೂ ಸಿದ್ಧತೆ
ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ಸಿದ್ಧತಾ ಕಾರ್ಯ ಚುರುಕುಗೊಂಡಿದ್ದು, ಸುಣ್ಣ-ಬಣ್ಣ ಬಳಿಯುವ ಕೆಲಸ ಶುರುವಾಗಿದೆ.
ಅರಮನೆ ಮುಂಭಾಗದ ಕೆಲವು ಪ್ರದೇಶಗಳಲ್ಲಿ ಇಂಟರ್ ಲಾಕ್ ಬದಲಿಸುವ ಕಾರ್ಯಕ್ಕೂ ಕೈ ಹಾಕಲಾಗಿದೆ. ಆರಂಭಿಕ ಹಂತದಲ್ಲಿಯೇ ಅರಮನೆ ಸುತ್ತಲೂ ಇರುವ ಕಾಂಪೌಂಡ್, ದ್ವಾರದ ಗೋಡೆಗಳಿಗೆ ಬಣ್ಣ ಬಳಿಯುವ ಕಾರ್ಯ ಬಿರುಸಿನಿಂದ ಸಾಗಿದೆ. ಅ.3ರಿಂದ 12ರವರೆಗೆ ನವರಾತ್ರಿ ಮಹೋತ್ಸವ ಜರುಗಲಿದ್ದು, ಅಷ್ಟರೊಳಗೆ ಅರಮನೆಯಲ್ಲಿ ಸಿದ್ಧತಾ ಕಾರ್ಯ ಪೂರ್ಣಗೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಕಾರ್ಯಗಳನ್ನು ತ್ವರಿತಗತಿಯಲ್ಲಿ ನಡೆಸಲಾಗುತ್ತಿದೆ.
ಸಸ್ಯಕಾಶಿಗೂ ಸಿದ್ಧತೆ: ನವರಾತ್ರಿ ಸಂದರ್ಭದಲ್ಲಿ ಅರಮನೆ ಆವರಣದಲ್ಲಿ ಸಂಭ್ರಮ ಮನೆ ಮಾಡಲಿದ್ದು, ಅರಮನೆ ಆವರಣದಲ್ಲಿರುವ ವಿವಿಧ ಪಾರ್ಕ್‌ಗಳಲ್ಲೂ ಬಣ್ಣ-ಬಣ್ಣದ ಹೂವಿನ ಗಿಡಗಳು ತಲೆ ಎತ್ತಲಿವೆ. ಈಗಾಗಲೇ ಅರಮನೆಯ ತೋಟಗಾರಿಕಾ ಸಿಬ್ಬಂದಿ ನೂರಾರು ಗಿಡಗಳನ್ನು ಬೆಳೆಸಿದ್ದು, ಅವುಗಳನ್ನು ಪಾಲನೆ ಮಾಡುತ್ತಿದ್ದಾರೆ.
ವಿವಿಧ ತಳಿಯ, ಬಣ್ಣ-ಬಣ್ಣದ ಆಕರ್ಷಕ ಹೂವಿನ ಗಿಡ ಗಳನ್ನು ಹೂಕುಂಡ ಗಳಲ್ಲಿ ಬೆಳೆಸಲಾಗಿದೆ. ಹೂವಿನ ಗಿಡಗಳಿಗೆ ಅಂತಿಮ ಹಂತದ ಪಾಲನೆ ಮಾಡಲಾಗುತ್ತಿದ್ದು, 15 ದಿನಗಳ ನಂತರ ಹೂಕುಂಡಗಳನ್ನು ಅರಮನೆ ಆವರಣದ ಪಾಕ್ ೯ಗಳಲ್ಲಿ ವಿವಿಧ ಆಕಾರದಲ್ಲಿ ಜೋಡಣೆ ಮಾಡಲಾಗುತ್ತದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…