ಎಚ್. ಎಸ್. ದಿನೇಶ್ ಕುಮಾರ್
ಮೈಸೂರು: ಸುಗಮ ಸಂಚಾರ ವ್ಯವಸ್ಥೆಗಾಗಿ ನಗರದಾದ್ಯಂತ ಸುಮಾರು 9 ಕೋಟಿ ರೂ. ವೆಚ್ಚದಲ್ಲಿ ವಿವಿಧ ವೃತ್ತ ಗಳು ಹಾಗೂ ಜಂಕ್ಷನ್‌ಗಳಲ್ಲಿ 50 ಹೊಸ ಸಿಗ್ನಲ್ ಲೈಟ್ ಗಳನ್ನು ಅಳವಡಿಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ.
ವಾಹನ ಚಾಲನೆ ಮಾಡಲು ಅನುಮತಿ ಇದೆ ಅಥವಾ ಇಲ್ಲ ಎಂಬುದನ್ನು ಸೂಚಿಸುವ ಉದ್ದೇಶಕ್ಕಾಗಿ ರಸ್ತೆ ಬದಿಯಲ್ಲಿ ಟ್ರಾಫಿಕ್ ಲೈಟ್ ಅಥವಾ ಟ್ರಾಫಿಕ್ ಸಿಗ್ನಲ್ ಅಥವಾ ಸ್ಟಾಪ್ ಲೈಟ್ ಅಳವಡಿಸಲು ತೀರ್ಮಾನಿಸಲಾಗಿದೆ.
ಮೋಟಾರು ವಾಹನವನ್ನು ಚಾಲನೆ ಮಾಡುವ ಪ್ರತಿಯೊಬ್ಬರೂ ಟ್ರಾಫಿಕ್ ಸಿಗ್ನಲ್‌ಗಳನ್ನು ಪಾಲನೆ ಮಾಡುವುದು ಕಡ್ಡಾಯ. ಸಿಗ್ನಲ್‌ಗಳನ್ನು ಉಲ್ಲಂಘಿಸಿದವರಿಗೆ ಪೊಲೀಸ್ ಇಲಾಖೆ ವತಿಯಿಂದ ದಂಡ ವಿಽಸಲಾಗುತ್ತದೆ. ಇಲ್ಲಿ ದಂಡ ಎಂಬುದು ನೆಪಮಾತ್ರ. ಟ್ರಾಫಿಕ್ ಸಂಕೇತ ಗಳನ್ನು, ವಾಹನ ಚಾಲನೆಯ ನಿಬಂಧನೆಗಳನ್ನು ಮತ್ತು ಟ್ರಾಫಿಕ್ ಅಥವಾ ಪೊಲೀಸ್ ಅಧಿಕಾರಿಗಳು ನೀಡುವ ನಿರ್ದೇಶನಗಳನ್ನು ಪಾಲಿಸುವುದು ಮೋಟಾರು ವಾಹನ ವನ್ನು ಚಾಲನೆ ಮಾಡುವ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯ.
ವಾಹನ ಚಾಲಕರ ಸುರಕ್ಷತೆಗಾಗಿ, ವಾಹನಗಳ ಸುಗಮ ಸಂಚಾರಕ್ಕಾಗಿ ಹಾಗೂ ಪಾದಚಾರಿಗಳ ಅನುಕೂಲಕ್ಕಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿರುತ್ತದೆ. ಈ ನಿಯಮವನ್ನು ವಾಹನ ಚಾಲಕರು ಪಾಲಿಸುವುದರಿಂದ ಅಪಘಾತಗಳಿಗೆ ಕಡಿವಾಣ ಹಾಕಬಹುದು.
ವಾಹನಗಳು ಹಾಗೂ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಟ್ರಾಫಿಕ್ ಸಿಗ್ನಲ್‌ಗಳ ಅವಶ್ಯವೂ ಹೆಚ್ಚಿದೆ. ಇದನ್ನು ಮನಗಂಡ ಪೊಲೀಸ್ ಇಲಾಖೆ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳು, ತಾಲ್ಲೂಕು ಕೇಂದ್ರಗಳು, ಹೋಬಳಿ ಮಟ್ಟದ ವೃತ್ತಗಳು ಹಾಗೂ ಪ್ರಮುಖ ವೃತ್ತಗಳಲ್ಲಿ ಸಿಗ್ನಲ್‌ಗಳನ್ನು ಅಳವಡಿಸಲು ಮುಂದಾಗಿದೆ.
ಎರಡನೇ ದೊಡ್ಡ ನಗರವಾಗಿ ಬೆಳೆಯುತ್ತಿರುವ ಮೈಸೂರು, ಸುಮಾರು ೧೦-೧೫ ಕಿ. ಮೀ. ವ್ಯಾಪ್ತಿಯನ್ನು ಹೊಂದಿದೆ. ಇಲ್ಲಿ ವಾಹನಗಳ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳ ಬಳಿ ಟ್ರಾಫಿಕ್ ಸಿಗ್ನಲ್‌ಗಳ ಅವಶ್ಯಕತೆ ಇದೆ.
ಈಗಾಗಲೇ ಮೈಸೂರಲ್ಲಿ ೬೫ ವಾರ್ಡ್‌ಗಳ ವಿವಿಧ ರಸ್ತೆ ಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿದೆ. ಇದೀಗ ವಾಹನಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ನಗರದಾದ್ಯಂತ ಪ್ರಮುಖ ಹಾಗೂ ಹೆಚ್ಚು ವಾಹನಗಳ ಸಂಚಾರವಿರುವ ೫೦ ರಸ್ತೆ ಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗುತ್ತಿದೆ.
ಪೊಲೀಸ್ ಇಲಾಖೆಯಿಂದ ಬೆಂಗಳೂರಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣ; 60 ದಿನಗಳೊಳಗೆ ಕಾಮಗಾರಿ ಪೂರ್ಣಗೊಳಿಸಲು ಷರತ್ತು: ರಾಜ್ಯಾದ್ಯಂತ ಜಿಲ್ಲಾ, ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ಸಿಗ್ನಲ್‌ಗೆ ಚಿಂತನೆ ಮುಂದಿನ ದಿನಗಳಲ್ಲಿ ಮೈಸೂರಿನ ಗಾಯತ್ರಿ ಭವನ ಜಂಕ್ಷನ್, ಸಿಲ್ಕ್ ಫ್ಯಾಕ್ಟರಿ ವೃತ್ತ, ಅಶೋಕ ವೃತ್ತ, ಸದ್ವಿದ್ಯಾ ಶಾಲೆ ವೃತ್ತ, ಆಯುರ್ವೇದ ಆಸ್ಪತ್ರೆ ವೃತ್ತ, ದಿವಾನ್ಸ್ ರಸ್ತೆ ಜಂಕ್ಷನ್, ತ್ರಿವೇಣಿ ವೃತ್ತ, ಚಿಕ್ಕಬೋರಯ್ಯ ಜಂಕ್ಷನ್ ಸೇರಿದಂತೆ ನಗರದ ವಿವಿಧ ೫೦ ರಸ್ತೆಗಳು ಹಾಗೂ ಜಂಕ್ಷನ್‌ಗಳಲ್ಲಿ ಸಿಗ್ನಲ್ ಲೈಟ್ ಅಳವಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ನಗರಪಾಲಿಕೆಯಿಂದ 10 ಸಿಗ್ನಲ್ ಲೈಟ್: ಇದೇ ವೇಳೆ ನಗರಪಾಲಿಕೆಯಿಂದ ಕೂಡ ನಗರದ ವಿವಿಧೆಡೆ 10 ಸಿಗ್ನಲ್ ಲೈಟ್ ಅಳವಡಿಸಲು ಮುಂದಾಗಿದ್ದು, ನಗರದ ಆರ್‌ಟಿಒ ವೃತ್ತ, ದೇವೇಗೌಡ ವೃತ್ತ, ಕಾಯಿಮಟ್ಟೆ ವೃತ್ತ ಸೇರಿದಂತೆ ಐದು ರಸ್ತೆಗಳಲ್ಲಿ ಈಗಾಗಲೇ ಸಿಗ್ನಲ್ ಲೈಟ್ ಅಳವಡಿಸಲಾಗಿದೆ. ಉಳಿದ ಐದು ಸಿಗ್ನಲ್ ಲೈಟ್‌ಗಳನ್ನು ಸಂಚಾರ ಪೊಲೀಸ್ ಅಧಿಕಾರಿಗಳ ಉಸ್ತುವಾರಿಯಲ್ಲಿ ಅಳವಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು 2025ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ…
* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…
ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…
ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…
ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…
ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…