Andolana originals

ಮೈಸೂರು: ಸುಗಮ ಸಂಚಾರಕ್ಕೆ 50 ಹೊಸ ಸಿಗ ಲ್ ಲೈಟ್ ಅಳವಡಿಕೆ

ಎಚ್. ಎಸ್. ದಿನೇಶ್ ಕುಮಾರ್

ಮೈಸೂರು: ಸುಗಮ ಸಂಚಾರ ವ್ಯವಸ್ಥೆಗಾಗಿ ನಗರದಾದ್ಯಂತ ಸುಮಾರು 9 ಕೋಟಿ ರೂ. ವೆಚ್ಚದಲ್ಲಿ ವಿವಿಧ ವೃತ್ತ ಗಳು ಹಾಗೂ ಜಂಕ್ಷನ್‌ಗಳಲ್ಲಿ 50 ಹೊಸ ಸಿಗ್ನಲ್ ಲೈಟ್ ಗಳನ್ನು ಅಳವಡಿಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ.

ವಾಹನ ಚಾಲನೆ ಮಾಡಲು ಅನುಮತಿ ಇದೆ ಅಥವಾ ಇಲ್ಲ ಎಂಬುದನ್ನು ಸೂಚಿಸುವ ಉದ್ದೇಶಕ್ಕಾಗಿ ರಸ್ತೆ ಬದಿಯಲ್ಲಿ ಟ್ರಾಫಿಕ್ ಲೈಟ್ ಅಥವಾ ಟ್ರಾಫಿಕ್ ಸಿಗ್ನಲ್ ಅಥವಾ ಸ್ಟಾಪ್ ಲೈಟ್ ಅಳವಡಿಸಲು ತೀರ್ಮಾನಿಸಲಾಗಿದೆ.

ಮೋಟಾರು ವಾಹನವನ್ನು ಚಾಲನೆ ಮಾಡುವ ಪ್ರತಿಯೊಬ್ಬರೂ ಟ್ರಾಫಿಕ್ ಸಿಗ್ನಲ್‌ಗಳನ್ನು ಪಾಲನೆ ಮಾಡುವುದು ಕಡ್ಡಾಯ. ಸಿಗ್ನಲ್‌ಗಳನ್ನು ಉಲ್ಲಂಘಿಸಿದವರಿಗೆ ಪೊಲೀಸ್ ಇಲಾಖೆ ವತಿಯಿಂದ ದಂಡ ವಿಽಸಲಾಗುತ್ತದೆ. ಇಲ್ಲಿ ದಂಡ ಎಂಬುದು ನೆಪಮಾತ್ರ. ಟ್ರಾಫಿಕ್ ಸಂಕೇತ ಗಳನ್ನು, ವಾಹನ ಚಾಲನೆಯ ನಿಬಂಧನೆಗಳನ್ನು ಮತ್ತು ಟ್ರಾಫಿಕ್ ಅಥವಾ ಪೊಲೀಸ್ ಅಧಿಕಾರಿಗಳು ನೀಡುವ ನಿರ್ದೇಶನಗಳನ್ನು ಪಾಲಿಸುವುದು ಮೋಟಾರು ವಾಹನ ವನ್ನು ಚಾಲನೆ ಮಾಡುವ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯ.

ವಾಹನ ಚಾಲಕರ ಸುರಕ್ಷತೆಗಾಗಿ, ವಾಹನಗಳ ಸುಗಮ ಸಂಚಾರಕ್ಕಾಗಿ ಹಾಗೂ ಪಾದಚಾರಿಗಳ ಅನುಕೂಲಕ್ಕಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿರುತ್ತದೆ. ಈ ನಿಯಮವನ್ನು ವಾಹನ ಚಾಲಕರು ಪಾಲಿಸುವುದರಿಂದ ಅಪಘಾತಗಳಿಗೆ ಕಡಿವಾಣ ಹಾಕಬಹುದು.

ವಾಹನಗಳು ಹಾಗೂ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಟ್ರಾಫಿಕ್ ಸಿಗ್ನಲ್‌ಗಳ ಅವಶ್ಯವೂ ಹೆಚ್ಚಿದೆ. ಇದನ್ನು ಮನಗಂಡ ಪೊಲೀಸ್ ಇಲಾಖೆ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳು, ತಾಲ್ಲೂಕು ಕೇಂದ್ರಗಳು, ಹೋಬಳಿ ಮಟ್ಟದ ವೃತ್ತಗಳು ಹಾಗೂ ಪ್ರಮುಖ ವೃತ್ತಗಳಲ್ಲಿ ಸಿಗ್ನಲ್‌ಗಳನ್ನು ಅಳವಡಿಸಲು ಮುಂದಾಗಿದೆ.

ಎರಡನೇ ದೊಡ್ಡ ನಗರವಾಗಿ ಬೆಳೆಯುತ್ತಿರುವ ಮೈಸೂರು, ಸುಮಾರು ೧೦-೧೫ ಕಿ. ಮೀ. ವ್ಯಾಪ್ತಿಯನ್ನು ಹೊಂದಿದೆ. ಇಲ್ಲಿ ವಾಹನಗಳ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳ ಬಳಿ ಟ್ರಾಫಿಕ್ ಸಿಗ್ನಲ್‌ಗಳ ಅವಶ್ಯಕತೆ ಇದೆ.

ಈಗಾಗಲೇ ಮೈಸೂರಲ್ಲಿ ೬೫ ವಾರ್ಡ್‌ಗಳ ವಿವಿಧ ರಸ್ತೆ ಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿದೆ. ಇದೀಗ ವಾಹನಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ನಗರದಾದ್ಯಂತ ಪ್ರಮುಖ ಹಾಗೂ ಹೆಚ್ಚು ವಾಹನಗಳ ಸಂಚಾರವಿರುವ ೫೦ ರಸ್ತೆ ಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗುತ್ತಿದೆ.

ಪೊಲೀಸ್ ಇಲಾಖೆಯಿಂದ ಬೆಂಗಳೂರಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣ; 60 ದಿನಗಳೊಳಗೆ ಕಾಮಗಾರಿ ಪೂರ್ಣಗೊಳಿಸಲು ಷರತ್ತು: ರಾಜ್ಯಾದ್ಯಂತ ಜಿಲ್ಲಾ, ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ಸಿಗ್ನಲ್‌ಗೆ ಚಿಂತನೆ ಮುಂದಿನ ದಿನಗಳಲ್ಲಿ ಮೈಸೂರಿನ ಗಾಯತ್ರಿ ಭವನ ಜಂಕ್ಷನ್, ಸಿಲ್ಕ್ ಫ್ಯಾಕ್ಟರಿ ವೃತ್ತ, ಅಶೋಕ ವೃತ್ತ, ಸದ್ವಿದ್ಯಾ ಶಾಲೆ ವೃತ್ತ, ಆಯುರ್ವೇದ ಆಸ್ಪತ್ರೆ ವೃತ್ತ, ದಿವಾನ್ಸ್ ರಸ್ತೆ ಜಂಕ್ಷನ್, ತ್ರಿವೇಣಿ ವೃತ್ತ, ಚಿಕ್ಕಬೋರಯ್ಯ ಜಂಕ್ಷನ್ ಸೇರಿದಂತೆ ನಗರದ ವಿವಿಧ ೫೦ ರಸ್ತೆಗಳು ಹಾಗೂ ಜಂಕ್ಷನ್‌ಗಳಲ್ಲಿ ಸಿಗ್ನಲ್ ಲೈಟ್ ಅಳವಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ನಗರಪಾಲಿಕೆಯಿಂದ 10 ಸಿಗ್ನಲ್ ಲೈಟ್: ಇದೇ ವೇಳೆ ನಗರಪಾಲಿಕೆಯಿಂದ ಕೂಡ ನಗರದ ವಿವಿಧೆಡೆ 10 ಸಿಗ್ನಲ್ ಲೈಟ್ ಅಳವಡಿಸಲು ಮುಂದಾಗಿದ್ದು, ನಗರದ ಆರ್‌ಟಿಒ ವೃತ್ತ, ದೇವೇಗೌಡ ವೃತ್ತ, ಕಾಯಿಮಟ್ಟೆ ವೃತ್ತ ಸೇರಿದಂತೆ ಐದು ರಸ್ತೆಗಳಲ್ಲಿ ಈಗಾಗಲೇ ಸಿಗ್ನಲ್ ಲೈಟ್ ಅಳವಡಿಸಲಾಗಿದೆ. ಉಳಿದ ಐದು ಸಿಗ್ನಲ್ ಲೈಟ್‌ಗಳನ್ನು ಸಂಚಾರ ಪೊಲೀಸ್ ಅಧಿಕಾರಿಗಳ ಉಸ್ತುವಾರಿಯಲ್ಲಿ ಅಳವಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

4 mins ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

26 mins ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

40 mins ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

1 hour ago

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

5 hours ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

9 hours ago