Andolana originals

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ

ಎಚ್. ಎಸ್. ದಿನೇಶ್‌ಕುಮಾರ್

ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ ಕಸದ ರಾಶಿ.., ಮುರಿದು ಬಿದ್ದಿರುವ ಆಸನಗಳು… ಇದು ನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಮಂಚೇಗೌಡನಕೊಪ್ಪಲು ಸ್ಮಶಾನದ ದುಸ್ಥಿತಿ. ಇಲ್ಲಿನ ಎಲ್ಲ ವ್ಯವಸ್ಥೆಗಳೂ ಅಧ್ವಾನಗೊಂಡಿವೆ. ಜನರು ಸ್ಮಶಾನವನ್ನು ಕಸವನ್ನು ಸುರಿಯುವ ತಾಣವಾಗಿಸಿಕೊಂಡಿದ್ದಾರೆ.

ನಗರ ವ್ಯಾಪ್ತಿಯಲ್ಲಿ ಇರುವ ಸ್ಮಶಾನಗಳು ಉತ್ತಮ ಸ್ಥಿತಿಯಲ್ಲಿ ಇರಬೇಕು. ತಮ್ಮ ಬಂಧು, ಬಳಗದಲ್ಲಿ ಯಾರಾದರೂ ಮೃತಪಟ್ಟಲ್ಲಿ ಅಂತ್ಯಸಂಸ್ಕಾರಕ್ಕೆ ಬರುವವರಿಗೆ ಸ್ಮಶಾನದ ಆವರಣದಲ್ಲಿ ಉತ್ತಮ ವಾತಾವರಣವಿರಬೇಕು ಎಂದು ಎಲ್ಲರೂ ಬಯಸುತ್ತಾರೆ. ಇದಕ್ಕೆ ಪೂರಕವಾಗಿ ಅಧಿಕಾರಿಗಳು ಕೂಡ ಕೆಲಸ ನಿರ್ವಹಿಸಬೇಕು. ಸ್ಮಶಾನಗಳ ನಿರ್ವಹಣೆಗೆಂದು ಜನರು ಕಟ್ಟುವ ತೆರಿಗೆಯಲ್ಲಿ ಪ್ರತ್ಯೇಕ ಹಣವನ್ನು ಪಡೆಯಲಾಗುತ್ತದೆ. ಈ ಹಣ ಯಾವುದಕ್ಕೆ ಬಳಕೆಯಾಗುತ್ತದೆ ಎಂಬುದು ಗೊತ್ತಾಗುತ್ತಿಲ್ಲ.

ಮೃತರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವವರು ಇಲ್ಲಿ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಶೌಚಾಲಯಕ್ಕೆ ತೆರಳಿದರಂತೂ ಜನರು ವಾಂತಿ ಮಾಡುವುದು ಗ್ಯಾರಂಟಿ ಎಂಬ ಸ್ಥಿತಿ ಇದೆ. ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿರುವ ಈ ಸ್ಮಶಾನ ಬಡಾವಣೆಯ ಮಧ್ಯಭಾಗದಲ್ಲಿದೆ. ಇದನ್ನು ಜನಸ್ನೇಹಿಯಾಗಿ ಹಾಗೂ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂಬುದು ಸ್ಥಳೀಯರ ಆಶಯ. ಆದರೆ, ಅಧಿಕಾರಿ ಗಳದ್ದು ಮಾತ್ರ ಜಾಣ ಕುರುಡುತನವಾಗಿದೆ.

ಸ್ಮಶಾನ ತ್ಯಾಜ್ಯ ಸುರಿಯುವ ತಾಣ
ರಾತ್ರಿಯಾದರೆ ಸಾಕು ಇಲ್ಲಿ ಕಸ ಸುರಿಯುವವರ ಕಾಟ ಹೆಚ್ಚುತ್ತದೆ. ಆಟೋ, ಮಿನಿ ಗೂಡ್ಸ್ ವಾಹನಗಳಲ್ಲಿ ತ್ಯಾಜ್ಯವನ್ನು ತಂದು ಇಲ್ಲಿ ಸುರಿಯಲಾಗುತ್ತದೆ. ಕಾವಲುಗಾರರು ಇಲ್ಲದ ಕಾರಣ ಇಲ್ಲಿ ಹೇಳುವವರು, ಕೇಳುವವರು ಯಾರೂ ಇಲ್ಲದಂತಾಗಿದ್ದಾರೆ ಎಂದು ನಿವಾಸಿಗಳು ಆರೋಪಿಸುತ್ತಾರೆ.

ಶುಚಿತ್ವವಿಲ್ಲದ ಶೌಚಾಲಯ
ಇನ್ನು ಇಲ್ಲಿ ನೀರಿನ ಟ್ಯಾಂಕ್ ಸಮೇತ ಉತ್ತಮ ಶೌಚಾಲಯವಿದೆ. ಆದರೆ, ಸೂಕ್ತ ನಿರ್ವಹಣೆ ಇಲ್ಲದ ಕಾರಣ ಜನರು ಅಲ್ಲಿಗೆ ಹೋಗದ ಸ್ಥಿತಿ ನಿರ್ಮಾಣವಾಗಿದೆ. ಶೌಚಾಲಯಗಳನ್ನು ಸ್ವಚ್ಛಗೊಳಿಸಿ ವರ್ಷಗಳೇ ಕಳೆದಿವೆ.

 

ಮುರಿದು ಬಿದ್ದಿರುವ ಆಸನಗಳು

ಅಂತ್ಯಸಂಸ್ಕಾರಕ್ಕೆಂದು ಬಂದವರು ಕುಳಿತುಕೊಳ್ಳಲು ಆಸನಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ, ಅವುಗಳಲ್ಲಿ ಬಹುತೇಕ ಮುರಿದು ಬಿದ್ದಿವೆ. ಇನ್ನು ಶವ ಸಾಗಿಸಲು ಬಳಸಿದ ಹಾಸಿಗೆ, ತಂದು ಹಾಕಿರುವ ಕುಷನ್ ಕುರ್ಚಿಗಳು ಎಲ್ಲೆಂದರಲ್ಲಿ ಬಿದ್ದಿವೆ. ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ಅಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಬೇಕಿದೆ ಎಂಬುದು ಪ್ರಜ್ಞಾವಂತ ಜನರ ಆಗ್ರಹವಾಗಿದೆ.

ಸ್ಮಶಾನ ದುಸ್ಥಿತಿಯ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇಲ್ಲಿ ಅಧಿಕಾರಿಗಳನ್ನು ನಿಯಂತ್ರಿಸಲು ಯಾರಿಂದಲೂ ಆಗುವುದಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಬಡಾವಣೆಗಳಲ್ಲಿ ಸಂಗ್ರಹ ವಾಗುವ ಕಸದ ಮೂಲಕ ಅನಿಲ ಉತ್ಪಾದನೆ ಮಾಡುವ ಜೈವಿಕ ಅನಿಲ ಸ್ಥಾವರ ಯೋಜನೆ ನನೆಗುದಿಗೆ ಬಿದ್ದಿದೆ. ಆರಂಭವಾದಲ್ಲಿ ಇಲ್ಲಿಯೇ ಅನಿಲ ಹಾಗೂ ವಿದ್ಯುತ್‌ ಉತ್ಪಾದನೆ ಮಾಡಿದರೆ ಮೃತದೇಹಗಳ ಅಂತ್ಯಕ್ರಿಯೆಗೆ ಬಳಕೆ ಮಾಡಬಹುದು. ಇಂತಹ ತಂತ್ರಜ್ಞಾನ ಮುಂದಿನ ದಿನಗಳಲ್ಲಿ ಜನಸ್ನೇಹಿಯಾಗಲಿದೆ. ಅಧಿಕಾರಿಗಳು ಇತ್ತ ಗಮನಹರಿಸಬೇಕು.

– ಪ್ರೇಮಾ ಶಂಕರೇಗೌಡ, ನಗರಪಾಲಿಕೆ ಮಾಜಿ ಸದಸ್ಯರು

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

4 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

10 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

11 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

11 hours ago