Andolana originals

ನಾಗರಹೊಳೆ: ಫೈರ್‌ಲೇನ್‌ ನಿರ್ಮಾಣ ಕಾರ್ಯಚುರುಕು

ಪ್ರಶಾಂತ್‌ ಎಸ್‌
ಮೈಸೂರು: ಈ ಬಾರಿ ಉತ್ತಮವಾಗಿ ಮಳೆ ಬಿದ್ದಿದ್ದರಿಂದ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಉದ್ಯಾನದೊಳಗಿನ ಕೆರೆ-ಕಟ್ಟೆಗಳಲ್ಲಿ ಸಮೃದ್ಧ ನೀರಿದ್ದು, ಇನ್ನೂ ಹಸಿರು ನಳನಳಿಸುತ್ತಿದೆ. ಅರಣ್ಯದೊಳಗಿನ ಸೋಲಾರ್ ಪಂಪ್ ನಿಂದಾಗಿ ಕೆರೆ- ಕಟ್ಟೆ ಗಳಿಗೆ ನಿರಂತರವಾಗಿ ನೀರು ತುಂಬುತ್ತಿರು ವುದು ಹಾಗೂ ಉದ್ಯಾ ನವನದೊಳಗೆ ಹರಿ ಯುವ ನಾಗರಹೊಳೆ, ಸಾರಥಿ, ಲಕ್ಷ್ಮಣ ತೀರ್ಥ ನದಿಗಳಲ್ಲಿ ನೀರಿನ ಹರಿವು ಇರುವುದರಿಂದ ಅರಣ್ಯ ಬೆಂಕಿ ತಡೆಗೆ ಹಾಗೂ ವನ್ಯಜೀವಿಗಳ ನೀರಿನ ದಾಹ ನೀಗಿಸಲು ಅರಣ್ಯ ಇಲಾಖೆ ಸಜ್ಜಾಗಿದೆ.

ಪ್ರತಿ ವರ್ಷ ಡಿಸೆಂಬರ್ ಅಂತ್ಯದೊಳಗೆ ಫೈರ್‌ಲೇನ್ ಕಾರ್ಯ ಮುಗಿಯುತ್ತಿತ್ತು. ಈ ಬಾರಿ ಜನವರಿ ಅಂತ್ಯದೊಳಗೆ ಬಹುತೇಕ ಮುಗಿಯ ಬಹುದೆಂದು ನಿರೀಕ್ಷಿಸಲಾಗಿದೆ.

೨,೫೩೭ ಕಿ. ಮೀ. ಫೈರ್‌ಲೇನ್ ನಿರ್ವಹಣೆ : ನಾಗರ ಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿರುವ ವೀರನ ಹೊಸಹಳ್ಳಿ, ಹುಣಸೂರು, ಮತ್ತಿಗೋಡು, ನಾಗರಹೊಳೆ, ಕಲ್ಲಹಳ್ಳ, ಅಂತರಸಂತೆ, ಮೇಟಿಕುಪ್ಪೆ, ಡಿ. ಬಿ. ಕುಪ್ಪೆ ವಲಯಗಳಲ್ಲಿ ೨,೫೩೭ ಕಿ. ಮೀ. ಯಷ್ಟು ಫೈರ್‌ಲೇನ್ ನಿರ್ಮಿಸ ಬೇಕಿದ್ದು, ಈಗಾಗಲೇ ಬೆಂಕಿರೇಖೆ ನಿರ್ಮಿಸುವ ಸಲು ವಾಗಿ ಗಿಡಗಂಟಿಗಳನ್ನು ತೆರವುಗೊಳಿಸಲಾಗಿದೆ. ಬಹುತೇಕ ಕಡೆಗಳಲ್ಲಿ ಲೇನ್ ನಿರ್ಮಿಸಲಾಗಿದೆ.

ಬೆಂಕಿ ತಡೆಗೆ ೪೦೦ ಸಿಬ್ಬಂದಿ ಸಜ್ಜು : ಪ್ರತಿ ವಲಯದಲ್ಲೂ ಅಗತ್ಯಕ್ಕೆ ತಕ್ಕಂತೆ ಬೆಂಕಿ ನಂದಿಸುವ ಕಾರ್ಯದಲ್ಲಿ ನುರಿತ ಸುಮಾರು ೪೦೦ ಮಂದಿ ಆದಿವಾಸಿಗಳನ್ನು ಪ್ರತಿ ವಲಯಕ್ಕೆ ೪೦-೬೫ಮಂದಿಯಂತೆ ನೇಮಿಸಿಕೊಳ್ಳಲಾಗುವುದು.

ಇವರಿಗೆ ನಿತ್ಯ ಮಧ್ಯಾಹ್ನ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ, ಅಗತ್ಯ ಪರಿಕರಗಳ ಸೌಲಭ್ಯಗಳನ್ನು ಕಲ್ಪಿಸಲಾಗು ವುದು ಎಂಬುದಾಗಿ ಅರಣ್ಯಾಧಿಕಾರಿಗಳು ಹೇಳುತ್ತಾರೆ.

ಉದ್ಯಾನವನದ ಹಲವೆಡೆ ಇರುವ ದೊಡ್ಡದಾದ ೩೧ ವೀಕ್ಷಣಾ ಗೋಪುರಗಳ ಮೂಲಕ ಹಾಗೂ ಉದ್ಯಾನವನದ ಅಂಚಿನ ಪ್ರದೇಶದ ಅಲ್ಲಲ್ಲಿ ಮರದ ಮೇಲೆ ಅಟ್ಟಣೆ ನಿರ್ಮಿಸಲಾಗಿದೆ. ಹಗಲು-ರಾತ್ರಿ ಛಾಯಾಚಿತ್ರ ತೆಗೆಯುವ ೩ ಡ್ರೋನ್ ಕ್ಯಾಮೆರಾ ಹಾಗೂ ಅರಣ್ಯದಂಚಿನ ಪ್ರದೇಶಗಳಲ್ಲಿ ಅಕ್ರಮವಾಗಿ ಒಳನುಸುಳುವವರ ಪತ್ತೆಗಾಗಿ ಅಲ್ಲಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ.

ಜೀಪ್ ಮೌಂಟೆಡ್ ಟ್ಯಾಂಕರ್ ಅಳವಡಿಕೆ : ಪ್ರತಿ ವಲಯಕ್ಕೆ ಒಂದರಂತೆ ಜೀಪ್ ಮೌಂಟೆಡ್ ಟ್ಯಾಂಕರ್ ಇದೆ. ೮೦ ಸ್ಪ್ರೇಯರ್, ೧೫ ಪವರ್ ಮರ ಕತ್ತರಿಸುವ ಯಂತ್ರ, ೧೧ ಬ್ಲೋಯರ್ಸ್‌ಗಳು ಹಾಗೂ ೩ ಅಗ್ನಿಶಾಮಕ ದಳದ ವಾಹನ ಮತ್ತು ಕ್ಯೂಆರ್‌ಟಿ ವಾಹನಗಳನ್ನು ಸನ್ನದ್ಧವಾಗಿಡಲಾಗುತ್ತದೆ. ಹುಣಸೂರು, ಡಿ. ಬಿ. ಕುಪ್ಪೆ ವಲಯಕ್ಕೆ ೨, ನಾಗರಹೊಳೆ, ವೀರನಹೊಸಹಳ್ಳಿ, ಆನೆಚೌಕೂರು, ಕಲ್ಲಹಳ್ಳ, ಮೇಟಿಕುಪ್ಪೆ, ಅಂತರಸಂತೆ ವಲಯಗಳಿಗೆ ತಲಾ ಒಂದರಂತೆ ೧೧ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಕಾಡ್ಗಿಚ್ಚು ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ಕ್ರಮ
ಕಾಡ್ಗಿಚ್ಚು ಸೃಷ್ಟಿಯಾಗದಂತೆ ನಿರ್ವಹಣೆಗಾಗಿ ಈಗಾಗಲೇ ನಮ್ಮ ಇಲಾಖೆಯ ಹಲವು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದ್ದು, ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಯಾವುದೇ ಅನಾಹುತ ಸಂಭವಿಸಬಾರದು ಎಂಬ ಕಾರಣಕ್ಕೆ ಇಲಾಖೆಯ ಮೇಲಽಕಾರಿಯವರ ನಿರ್ದೇಶನದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. -ಎಸ್. ಎಸ್. ಸಿದ್ದರಾಜು, ಆರ್. ಎಫ್. ಓ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ

 

ಆಂದೋಲನ ಡೆಸ್ಕ್

Recent Posts

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

2 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

5 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

6 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

7 hours ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

7 hours ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

7 hours ago