Andolana originals

ಕೊಡಗಿಗೆ ಘೋಷಣೆಯಾಗದ ಬಿಜೆಪಿ ಜಿಲ್ಲಾಧ್ಯಕ್ಷರ ಹೆಸರು

ಹಾಲಿ ಜಿಲ್ಲಾಧ್ಯಕ್ಷರೇ ಮುಂದುವರಿಯುವ ಸಾಧ್ಯತೆ; ಕಾರ್ಯಕರ್ತರಲ್ಲಿ ಕುತೂಹಲ

ನವೀನ್ ಡಿಸೋಜ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ನೂತನ ಜಿಲ್ಲಾಧ್ಯಕ್ಷ ಯಾರಾಗಲಿದ್ದಾರೆ ಎಂಬ ಕುತೂಹಲ ಮುಂದುವರಿದಿದೆ. ಮೂಲಗಳ ಪ್ರಕಾರ ಹಾಲಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರೇ ಮತ್ತೆ ಜಿಲ್ಲಾಧ್ಯಕ್ಷರಾಗಿ ಮುಂದುವರಿಯಲಿದ್ದಾರೆ .

ರಾಜ್ಯದ ೨೩ ಜಿಲ್ಲೆಗಳ ಬಿಜೆಪಿ  ಅಧ್ಯಕ್ಷರ ಹೆಸರುಗಳನ್ನು ಇತ್ತೀಚೆಗೆ ಘೋಷಣೆ ಮಾಡಲಾಗಿದೆ. ಆದರೆ,  ಅದರಲ್ಲಿ ಕೊಡಗು ಜಿಲ್ಲಾಧ್ಯಕ್ಷರ   ಹೆಸರು  ಘೋಷಣೆಯಾಗಿರಲಿಲ್ಲ.  ಇದಕ್ಕೆ ಪಕ್ಷದೊಳಗಿನ ಒಂದಷ್ಟು ಅಸಮಾಧಾನವೂ ಕಾರಣ ಎನ್ನಲಾಗುತ್ತಿದೆ. ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಇತ್ತೀಚೆಗೆ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೀಕ್ಷಕರಾದ ಮೋನಪ್ಪ ಭಂಡಾರಿ, ಸುಲೋಚನಾ ಭಟ್ ಉಪಸ್ಥಿತಿಯಲ್ಲಿ ನಡೆದಿದೆ. ಈ ಸಭೆಯಲ್ಲಿ ಹಾಲಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಹೆಸರೇ ಅಂತಿಮಗೊಂಡಿದೆ. ಆದರೆ,  ಈ ಆಯ್ಕೆ ಸೂಕ್ತವಾಗಿಲ್ಲ ಎಂಬ ಆಕ್ಷೇಪ ಕೂಡ ವ್ಯಕ್ತವಾಗಿದೆ ಎನ್ನಲಾಗಿದೆ.  ಸಾಮಾನ್ಯವಾಗಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮೂವರ ಹೆಸರನ್ನು ಅಂತಿಮಗೊಳಿಸಿ ಪಕ್ಷದ ವರಿಷ್ಠರಿಗೆ ಕಳುಹಿಸಿ ಕೊಡಬೇಕಾಗುತ್ತದೆ. ವರಿಷ್ಠರು ಒಬ್ಬರ ಹೆಸರನ್ನು ಅಂತಿಮಗೊಳಿಸುತ್ತಾರೆ. ಇಲ್ಲಿನ ಸಭೆಯಲ್ಲಿ ನಾಪಂಡ ರವಿ ಕಾಳಪ್ಪ ಅವರೇ ಆಯ್ಕೆಯಾಗಿದ್ದರೂ ಜಿಲ್ಲಾ ಉಪಾಧ್ಯಕ್ಷರಾಗಿರುವ ಗುಮ್ಮಟ್ಟೀರ ಕಿಲನ್ ಗಣಪತಿ, ಜಿಲ್ಲಾ ಕಾರ್ಯದರ್ಶಿ ಪ್ರಶಾಂತ್ ಹೆಸರನ್ನು ಕೂಡ ನಿಯಮದಂತೆ ಶಿಫಾರಸ್ಸು ಮಾಡಲಾಗಿದೆ.

ಮೂವರ ಹೆಸರು ಶಿ-ರಸಾಗಿರುವ ಬಗ್ಗೆಯೂ ಪಕ್ಷದಲ್ಲಿ ಆಕ್ಷೇಪ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದವರನ್ನು ಪರಿಗಣಿಸಿಲ್ಲ ಎಂಬ ಅಸಮಾಧಾನವೂ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ಪಕ್ಷ ಇನ್ನೂ ಕೂಡ ಜಿಲ್ಲಾಧ್ಯಕ್ಷರ ಹೆಸರನ್ನು ಅಂತಿಮಗೊಳಿಸಿಲ್ಲ.  ಮುಂದೆ ಜಿ.ಪಂ. ಹಾಗೂ ತಾ.ಪಂ. ಚುನಾವಣೆ   ನಡೆಯಲಿರುವುದರಿಂದ ಜಿಲ್ಲಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆಯನ್ನಿಡಲು ಪಕ್ಷ ನಿರ್ಧರಿಸಿದಂತಿದೆ.  ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಿ ೨ ಕ್ಷೇತ್ರಗಳನ್ನು ಕಳೆದುಕೊಂಡಿದ್ದರೂ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಿಂದ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತ ದೊರಕಿಸುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಈಗ ಇರುವ ವಾತಾವರಣವನ್ನೇ ಮುಂದುವರಿಸುವ ಪ್ರಯತ್ನ ಕೂಡ ನಡೆಯುತ್ತಿದೆ ಎನ್ನಲಾಗಿದೆ.

ಮತ್ತೊಂದೆಡೆ ಈಗಾಗಲೇ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ವಿವಿಧ ರೀತಿಯ  ಬೆಳವಣಿಗೆಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ಒದಗಿಸುವ ಕೆಲಸ ಮಾಡಿದ್ದಾರೆ ಎನ್ನಲಾಗಿದೆ.  ವೀಕ್ಷಕರು ಶಿ-ರಸು ಮಾಡಿರುವ ಹೆಸರಿಗೆ ಪಕ್ಷದಲ್ಲಿ ಅಸಮಾಧಾನ ಕಂಡುಬಂದಿರುವುದರಿಂದ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕಗ್ಗಂಟಾಗಿದೆ ಎಂದು ಹೇಳಲಾಗುತ್ತಿದೆ.

ರಾಜ್ಯ ನಾಯಕರತ್ತ ಎಲ್ಲರ ಚಿತ್ತ

ಮಡಿಕೇರಿ: ಸದ್ಯ ಕೊಡಗು ಬಿಜೆಪಿಯಲ್ಲಿ ಜಿಲ್ಲಾಧ್ಯಕ ರ   ಆಯ್ಕೆ ಬಗೆ  ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿದೆ.  ಈ ಬಗೆ  ರಾಜ್ಯ ನಾಯಕರ ಗಮನಸೆಳೆಯುವ ಪ್ರಯತ ವೂ ನಡೆದಿದೆ. ಜಿಲೆ ಯಲ್ಲಿ ನಡೆದ ಆಯ್ಕೆ   ಪ್ರಕ್ರಿಯೆಯಲ್ಲಿ ನಾಪಂಡ ರವಿ ಕಾಳಪ  ಅವರೇ ಆಯ್ಕೆಯಾಗಿರುವುದರಿಂದ ಬಹುತೇಕ ಅವರ ಹೆಸರೇ ಘೋಷಣೆಯಾಗಲಿದೆ. ಆದರೂ ಆಕಾಂಕ್ಷಿಗಳು ತಮ್ಮದೇ ಶೈಲಿಯಲ್ಲಿ ವರಿಷ ರ ಗಮನಸೆಳೆಯುವ ಪ್ರಯತ್ನ ನಡೆಸಿರುವುದನ್ನೂ ತಳ್ಳಿಹಾಕುವಂತಿಲ್ಲ. ಹೀಗಾಗಿ ಸದ್ಯ ಎಲ್ಲರ ಚಿತ  ರಾಜ್ಯ ನಾಯಕರತ  ಹರಿದಿದ್ದು, ಯಾರು  ಜಿಲ್ಲಾಧ್ಯಕರಾಗಲಿದ್ದಾರೆ ಎಂಬ ಕುತೂಹಲ ಮುಂದುವರಿದಿದೆ.

ಸಮರ್ಥರ ಆಯ್ಕೆ ಅಗತ್ಯ: 

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ೨ ದಶಕಗಳ ಬಳಿಕ ಕಾಂಗ್ರೆಸ್‌ನ     ಎ.ಎಸ್. ಪೊನ್ನಣ್ಣ ಹಾಗೂ ಡಾ.ಮಂಥರ್‌ಗೌಡ  ಗೆಲುವು ಸಾಧಿಸಿದ್ದಾರೆ. ಅಲ್ಲದೆ, ಅಭಿವೃದ್ಧಿ ಕಾರ್ಯದೊಂದಿಗೆ ಜನರೊಂದಿಗೆ ಬೆರೆಯುತ್ತಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಕೂಡ ಪ್ರಬಲವಾಗಿ ಬೇರೂರುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿ ಪಕ್ಷವನ್ನು ಮತ್ತಷ್ಟು ಸಂಘಟಿಸುವವರಿಗೆ ಜಿಲ್ಲಾ ಅಧ್ಯಕ್ಷ ಸ್ಥಾನ ನೀಡಬೇಕಿದೆ.  ಎಲ್ಲರೊಂದಿಗೆ ಬೆರೆಯುವ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುವ  ನಾಯಕರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಬೇಕೆನ್ನುವ ಒತ್ತಾಯ ಕೇಳಿ ಬಂದಿದೆ

ಆಂದೋಲನ ಡೆಸ್ಕ್

Recent Posts

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

3 mins ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

10 mins ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

13 mins ago

ಗುರುಪುರದ ಬಳಿ ಮತ್ತೆ ಹುಲಿ ಪ್ರತ್ಯಕ್ಷ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…

40 mins ago

ಜಗತ್ತಿಗೆ ಸ್ಪರ್ಧೆ ನೀಡುತ್ತಿದ್ದ ಬೆಂಗಳೂರಿನ ಮೂಲಸೌಕರ್ಯ ಹಾಳಾಗಿದೆ : ಎಚ್‌ಡಿಕೆ

ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…

42 mins ago

ಮೈಸೂರು | ಹೊಸ ವರ್ಷದ ಸಂಭ್ರಮಾಚರಣೆಗ ಸಿದ್ದವಾಗ್ತಿದೆ 2 ಲಕ್ಷ ಲಡ್ಡು.!

ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು…

1 hour ago