ಮೈಸೂರು: ಪಿಕೆಟಿಬಿ ಆಸ್ಪತ್ರೆ ಮಾರ್ಗವಾಗಿ ಸಾಗುವ ಕೆಆರ್‌ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡುವ ವಿಚಾರದಲ್ಲಿ ಕೌನ್ಸಿಲ್ ಸಭೆಯ ನಿರ್ಣಯಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದರೆ ಸಿದ್ದರಾಮಯ್ಯ ಮಾರ್ಗ ಎಂದು ನಾಮಕರಣ ಮಾಡುವುದು ಖಚಿತವಾಗಿದೆ.
ಸದ್ಯಕ್ಕೆ ಈ ರಸ್ತೆಗೆ ಪ್ರಿನ್ಸೆಸ್ ರಸ್ತೆ ಎಂದು ನಾಮ ಕರಣ ಮಾಡಿರುವ ಕುರಿತಂತೆ ದಾಖಲೆಗಳನ್ನು ಹುಡುಕುವ ಕಾರ್ಯವನ್ನು ನಗರಪಾಲಿಕೆ ಅಽಕಾರಿಗಳು ಕೈಗೆತ್ತಿಕೊಂಡಿದ್ದು, ಮೂರು ದಶಕಗಳ ದಾಖಲೆಗಳ ಪರಿಶೀಲನೆಯಲ್ಲಿ ನಾಮಕರಣದ ನಿರ್ಣಯದ ಪ್ರತಿ ಲಭ್ಯವಾಗಿಲ್ಲವೆಂಬ ಮಾಹಿತಿಯನ್ನು ನಗರಪಾಲಿಕೆ ಆಯುಕ್ತರು ನೀಡಿದ್ದಾರೆ. ಇದರಿಂದಾಗಿ ವಿವಾದ ಮತ್ತಷ್ಟು ಕಾವು ಪಡೆಯುವ ಸಾಧ್ಯತೆ ದಟ್ಟವಾಗಿದೆ.
ದಾಸಪ್ಪ ವೃತ್ತದಿಂದ ರಿಂಗ್ ರಸ್ತೆ ಜಂಕ್ಷನ್ ವರೆಗಿನ ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವಂತೆ ಚಾಮರಾಜ ಕ್ಷೇತ್ರದ ಶಾಸಕ ಕೆ. ಹರೀಶ್‌ಗೌಡ ಅವರು ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ದಾರೆ.
ಶಾಸಕರ ಮನವಿಯನ್ನು ಪರಿಗಣಿಸಿ ಡಿ. ೧೭ರಂದು ಸಾರ್ವಜನಿಕ ಆಕ್ಷೇಪಣೆಗಳನ್ನು ಆಹ್ವಾನಿಸಿ ಪತ್ರಿಕೆಗಳಲ್ಲಿ ಜಾಹೀರಾತು ನೀಡಲಾಗಿತ್ತು. ಈ ವಿಚಾರಕ್ಕೆ ಸಂಬಂಽಸಿದಂತೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಮಹಾ ರಾಜ ಚಾಮರಾಜ ಒಡೆಯರ್ -ವಾಣಿವಿಲಾಸ ಸನ್ನಿಧಾನದ ಮಹಾರಾಣಿ ಕೆಂಪನಂಜಮ್ಮಣ್ಣಿ ಪುತ್ರಿಯರಾದ ರಾಜಕುಮಾರಿ ಕೃಷ್ಣಾಜಮ್ಮಣ್ಣಿ ಮತ್ತು ರಾಜಕುಮಾರಿ ಚೆಲುವರಾಜಮ್ಮಣ್ಣಿ ಸ್ಮರಣಾರ್ಥವಾಗಿ ಪ್ರಿನ್ಸೆಸ್ ಹೆಸರನ್ನು ಇಡಲಾಗಿದೆ ಎಂಬ ಮಾಹಿತಿ ಹಂಚಿಕೊಂಡಿದ್ದರು.
ಆದರೆ ಮಾಜಿ ಸಂಸದ ಪ್ರತಾಪ್ ಸಿಂಹ ಮೊದಲಿಗೆ ಸಿದ್ದರಾಮಯ್ಯ ಹೆಸರಿಟ್ಟರೆ ತಪ್ಪೇನು ಎಂದಿದ್ದರೂ ಸ್ವಪಕ್ಷೀಯ ನಾಯಕರ ಒತ್ತಡದಿಂದಾಗಿ ಯೂಟರ್ನ್ ಹೊಡೆದರಲ್ಲದೆ, ಸಿದ್ದರಾಮಯ್ಯ ಹೆಸರನ್ನು ಬೇರೆ ರಸ್ತೆಗೆ ನಾಮಕರಣ ಮಾಡುವಂತೆ ಸಲಹೆ ನೀಡಿದ್ದರು. ಬಿಜೆಪಿ ನಾಯಕರು ಕೂಡ ಸಿದ್ದರಾಮಯ್ಯ ಹೆಸರು ಇಡುವುದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಇದೆಲ್ಲದರ ನಡುವೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ನೇತೃತ್ವದ ನಿಯೋಗ ನಗರಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸುವ ಮೂಲಕ ಶೀಘ್ರದಲ್ಲೇ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ನಾಮಕರಣ ಮಾಡಲು ನಿರ್ಣಯ ಕೈಗೊಳ್ಳುವಂತೆ ಒತ್ತಾಯಿಸಿದೆ.
ಈ ನಿಯೋಗ ಭೇಟಿ ನೀಡಿದ್ದ ವೇಳೆ ಆಯುಕ್ತರು ನೀಡಿರುವ ಮಾಹಿತಿ ಪ್ರಕಾರ ಪಾಲಿಕೆಯಲ್ಲಿ ೧೯೯೯ರಿಂದ ೨೦೨೪ರ ವರೆಗೆ ಎಲ್ಲ ಕಡತಗಳನ್ನು ಪರಿಶೀಲಿಸ ಲಾಗಿದೆ. ಎಲ್ಲಿಯೂ ಪ್ರಿನ್ಸೆಸ್ ಹೆಸರು ಕಂಡು ಬಂದಿಲ್ಲ. ಜತೆಗೆ ಆ ರಸ್ತೆಗೆ ಯಾವ ಹೆಸರೂ ಇಲ್ಲ. ಈಗ ೧೯೬೪ರಿಂದ ೧೯೯೯ರ ವರೆಗಿನ ಕಡತಗಳನ್ನು ಪರಿಶೀಲಿಸಲಾಗುತ್ತಿದೆ. ಅದು ಕೂಡ ಮುಕ್ತಾಯ ಹಂತದಲ್ಲಿದ್ದು, ಇನ್ನೂ ೨೦ ವರ್ಷಗಳ ಕಡತ ಮಾತ್ರ ಪರಿಶೀಲನೆ ಬಾಕಿ ಉಳಿದಿದೆ.
ಇದರ ಜತೆಗೆ ಪಾಲಿಕೆಯ ೯ ವಲಯಗಳ ಆಯುಕ್ತರಿಂದ ಮಾಹಿತಿ ಪಡೆಯಲಾಗಿದೆ. ಎಲ್ಲೂ ಕೂಡ ಪ್ರಿನ್ಸೆಸ್ ಹೆಸರಿರುವ ಬಗ್ಗೆ ಅಽಕೃತ ದಾಖಲೆಗಳಿಲ್ಲ. ಗೆಜೆಟ್‌ನಲ್ಲಿ ಆ ಹೆಸರು ಇದೆಯೋ ಏನೋ ಗೊತ್ತಿಲ್ಲ. ನಗರಪಾಲಿಕೆ ವ್ಯಾಪ್ತಿಯಲ್ಲಿರುವ ಯಾವ ದಾಖಲಾತಿಗಳಲ್ಲೂ ಪ್ರಿನ್ಸೆಸ್ ಹೆಸರಿಲ್ಲ. ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ನಡೆದ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ಕೈಗೊಂಡು ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಗರಪಾಲಿಕೆ ಕೈಗೊಂಡ ನಿರ್ಣಯಕ್ಕೆ ಸರ್ಕಾರ ಅನುಮೋದನೆ ನೀಡುವುದು ಬಹುತೇಕ ಖಚಿತವಾಗಿರುವುದರಿಂದ ಸಾರ್ವಜನಿಕ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…