Andolana originals

ಕೌನ್ಸಿಲ್‌ ನಿರ್ಣಯಕ್ಕೆ ಗ್ರೀನ್‌ ಸಿಗ್ನಲ್‌ ಸಿಕ್ಕರೆ ʼಸಿದ್ದು ಮಾರ್ಗʼ ಸರಾಗ

  • ಕೆ.ಬಿ. ರಮೇಶ ನಾಯಕ

ಮೈಸೂರು: ಪಿಕೆಟಿಬಿ ಆಸ್ಪತ್ರೆ ಮಾರ್ಗವಾಗಿ ಸಾಗುವ ಕೆಆರ್‌ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡುವ ವಿಚಾರದಲ್ಲಿ ಕೌನ್ಸಿಲ್ ಸಭೆಯ ನಿರ್ಣಯಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದರೆ ಸಿದ್ದರಾಮಯ್ಯ ಮಾರ್ಗ ಎಂದು ನಾಮಕರಣ ಮಾಡುವುದು ಖಚಿತವಾಗಿದೆ.

ಸದ್ಯಕ್ಕೆ ಈ ರಸ್ತೆಗೆ ಪ್ರಿನ್ಸೆಸ್ ರಸ್ತೆ ಎಂದು ನಾಮ ಕರಣ ಮಾಡಿರುವ ಕುರಿತಂತೆ ದಾಖಲೆಗಳನ್ನು ಹುಡುಕುವ ಕಾರ್ಯವನ್ನು ನಗರಪಾಲಿಕೆ ಅಽಕಾರಿಗಳು ಕೈಗೆತ್ತಿಕೊಂಡಿದ್ದು, ಮೂರು ದಶಕಗಳ ದಾಖಲೆಗಳ ಪರಿಶೀಲನೆಯಲ್ಲಿ ನಾಮಕರಣದ ನಿರ್ಣಯದ ಪ್ರತಿ ಲಭ್ಯವಾಗಿಲ್ಲವೆಂಬ ಮಾಹಿತಿಯನ್ನು ನಗರಪಾಲಿಕೆ ಆಯುಕ್ತರು ನೀಡಿದ್ದಾರೆ. ಇದರಿಂದಾಗಿ ವಿವಾದ ಮತ್ತಷ್ಟು ಕಾವು ಪಡೆಯುವ ಸಾಧ್ಯತೆ ದಟ್ಟವಾಗಿದೆ.

ದಾಸಪ್ಪ ವೃತ್ತದಿಂದ ರಿಂಗ್ ರಸ್ತೆ ಜಂಕ್ಷನ್ ವರೆಗಿನ ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವಂತೆ ಚಾಮರಾಜ ಕ್ಷೇತ್ರದ ಶಾಸಕ ಕೆ. ಹರೀಶ್‌ಗೌಡ ಅವರು ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ದಾರೆ.

ಶಾಸಕರ ಮನವಿಯನ್ನು ಪರಿಗಣಿಸಿ ಡಿ. ೧೭ರಂದು ಸಾರ್ವಜನಿಕ ಆಕ್ಷೇಪಣೆಗಳನ್ನು ಆಹ್ವಾನಿಸಿ ಪತ್ರಿಕೆಗಳಲ್ಲಿ ಜಾಹೀರಾತು ನೀಡಲಾಗಿತ್ತು. ಈ ವಿಚಾರಕ್ಕೆ ಸಂಬಂಽಸಿದಂತೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಮಹಾ ರಾಜ ಚಾಮರಾಜ ಒಡೆಯರ್ -ವಾಣಿವಿಲಾಸ ಸನ್ನಿಧಾನದ ಮಹಾರಾಣಿ ಕೆಂಪನಂಜಮ್ಮಣ್ಣಿ ಪುತ್ರಿಯರಾದ ರಾಜಕುಮಾರಿ ಕೃಷ್ಣಾಜಮ್ಮಣ್ಣಿ ಮತ್ತು ರಾಜಕುಮಾರಿ ಚೆಲುವರಾಜಮ್ಮಣ್ಣಿ ಸ್ಮರಣಾರ್ಥವಾಗಿ ಪ್ರಿನ್ಸೆಸ್ ಹೆಸರನ್ನು ಇಡಲಾಗಿದೆ ಎಂಬ ಮಾಹಿತಿ ಹಂಚಿಕೊಂಡಿದ್ದರು.

ಆದರೆ ಮಾಜಿ ಸಂಸದ ಪ್ರತಾಪ್ ಸಿಂಹ ಮೊದಲಿಗೆ ಸಿದ್ದರಾಮಯ್ಯ ಹೆಸರಿಟ್ಟರೆ ತಪ್ಪೇನು ಎಂದಿದ್ದರೂ ಸ್ವಪಕ್ಷೀಯ ನಾಯಕರ ಒತ್ತಡದಿಂದಾಗಿ ಯೂಟರ್ನ್ ಹೊಡೆದರಲ್ಲದೆ, ಸಿದ್ದರಾಮಯ್ಯ ಹೆಸರನ್ನು ಬೇರೆ ರಸ್ತೆಗೆ ನಾಮಕರಣ ಮಾಡುವಂತೆ ಸಲಹೆ ನೀಡಿದ್ದರು. ಬಿಜೆಪಿ ನಾಯಕರು ಕೂಡ ಸಿದ್ದರಾಮಯ್ಯ ಹೆಸರು ಇಡುವುದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಇದೆಲ್ಲದರ ನಡುವೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ನೇತೃತ್ವದ ನಿಯೋಗ ನಗರಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸುವ ಮೂಲಕ ಶೀಘ್ರದಲ್ಲೇ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ನಾಮಕರಣ ಮಾಡಲು ನಿರ್ಣಯ ಕೈಗೊಳ್ಳುವಂತೆ ಒತ್ತಾಯಿಸಿದೆ.

ಈ ನಿಯೋಗ ಭೇಟಿ ನೀಡಿದ್ದ ವೇಳೆ ಆಯುಕ್ತರು ನೀಡಿರುವ ಮಾಹಿತಿ ಪ್ರಕಾರ ಪಾಲಿಕೆಯಲ್ಲಿ ೧೯೯೯ರಿಂದ ೨೦೨೪ರ ವರೆಗೆ ಎಲ್ಲ ಕಡತಗಳನ್ನು ಪರಿಶೀಲಿಸ ಲಾಗಿದೆ. ಎಲ್ಲಿಯೂ ಪ್ರಿನ್ಸೆಸ್ ಹೆಸರು ಕಂಡು ಬಂದಿಲ್ಲ. ಜತೆಗೆ ಆ ರಸ್ತೆಗೆ ಯಾವ ಹೆಸರೂ ಇಲ್ಲ. ಈಗ ೧೯೬೪ರಿಂದ ೧೯೯೯ರ ವರೆಗಿನ ಕಡತಗಳನ್ನು ಪರಿಶೀಲಿಸಲಾಗುತ್ತಿದೆ. ಅದು ಕೂಡ ಮುಕ್ತಾಯ ಹಂತದಲ್ಲಿದ್ದು, ಇನ್ನೂ ೨೦ ವರ್ಷಗಳ ಕಡತ ಮಾತ್ರ ಪರಿಶೀಲನೆ ಬಾಕಿ ಉಳಿದಿದೆ.

ಇದರ ಜತೆಗೆ ಪಾಲಿಕೆಯ ೯ ವಲಯಗಳ ಆಯುಕ್ತರಿಂದ ಮಾಹಿತಿ ಪಡೆಯಲಾಗಿದೆ. ಎಲ್ಲೂ ಕೂಡ ಪ್ರಿನ್ಸೆಸ್ ಹೆಸರಿರುವ ಬಗ್ಗೆ ಅಽಕೃತ ದಾಖಲೆಗಳಿಲ್ಲ. ಗೆಜೆಟ್‌ನಲ್ಲಿ ಆ ಹೆಸರು ಇದೆಯೋ ಏನೋ ಗೊತ್ತಿಲ್ಲ. ನಗರಪಾಲಿಕೆ ವ್ಯಾಪ್ತಿಯಲ್ಲಿರುವ ಯಾವ ದಾಖಲಾತಿಗಳಲ್ಲೂ ಪ್ರಿನ್ಸೆಸ್ ಹೆಸರಿಲ್ಲ. ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ನಡೆದ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ಕೈಗೊಂಡು ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಗರಪಾಲಿಕೆ ಕೈಗೊಂಡ ನಿರ್ಣಯಕ್ಕೆ ಸರ್ಕಾರ ಅನುಮೋದನೆ ನೀಡುವುದು ಬಹುತೇಕ ಖಚಿತವಾಗಿರುವುದರಿಂದ ಸಾರ್ವಜನಿಕ ವಲಯದಲ್ಲಿ ಕುತೂಹಲ ಕೆರಳಿಸಿದೆ.

 

andolana

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

2 mins ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

4 mins ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 mins ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

9 mins ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

16 mins ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

21 mins ago