Andolana originals

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ ಕುಶಾಲನಗರ ತಾಲ್ಲೂಕಿನ ಕೂಡಿಗೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಟಿ.ಜಿ.ನಂದಿತಾ ನಿದರ್ಶನ. ನಂದಿತಾ, ಕುಶಾಲನಗರ ತಾಲ್ಲೂಕಿನ ತೊರೆನೂರು ಸಮೀಪದ ಅರೆಗಲು ನಿವಾಸಿ ಟಿ.ಜಿ. ಗಿರೀಶ್ ಹಾಗೂ ಪವಿತ್ರ ದಂಪತಿಯ ಪುತ್ರಿ. ತಂದೆ ಬಡತನದಲ್ಲಿ ಹಲವು ಸವಾಲುಗಳ ನಡುವೆ ಬದುಕು ಸವೆಸುತ್ತಿದ್ದರೂ ನಂದಿತಾಗೆ ಕಲಿಯಲು ಅವು ಅಡ್ಡಿಯಾಗಲಿಲ್ಲ. ೨೦೨೫- ೨೬ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಕೆ ೬೦೦ಕ್ಕೆ ೫೮೫ ಅಂಕಗಳಿಸುವ ಮೂಲಕ ಇಡೀ ಜಿಲ್ಲೆಯ ಗಮನ ಸೆಳೆದಿದ್ದಾರೆ.

ಗಿರೀಶ್ ಅವರು ಇರುವ ತಮ್ಮ ೧.೧೩ ಎಕರೆ ಜಾಗದಲ್ಲಿಯೇ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಹಿರಿಯ ಪುತ್ರ ಟಿ.ಜಿ.ರಕ್ಷಿತ್ ಮೈಸೂರಿನಲ್ಲಿ ಬಿಬಿಎಂ ಓದುತ್ತಿದ್ದು, ತಾಯಿ ಸುಂದರಮ್ಮ, ಪತ್ನಿ ಪವಿತ್ರಾ, ಪುತ್ರಿ ನಂದಿತಾಳೊಂದಿಗೆ ವಾಸವಾಗಿದ್ದಾರೆ. ಕೃಷಿಯಲ್ಲಿ ಬಂದ ಲಾಭದಲ್ಲಿಯೇ ಜೀವನ ಸಾಗಬೇಕಾದ ಅನಿವಾರ್ಯತೆಯಿದೆ. ಹೀಗಾಗಿಯೇ ಅನಿವಾರ್ಯವಾಗಿ ಪುತ್ರಿ ನಂದಿತಾಳನ್ನು ಸರ್ಕಾರಿ ಕಾಲೇಜಿಗೆ ಸೇರಿಸಬೇಕಾಯಿತು.

ಮನೆಯಿಂದ ಕಾಲೇಜಿಗೆ ಸುಮಾರು ೮ ಕಿ.ಮೀ. ಅಂತರವಿದ್ದು, ಊರಿನಿಂದ ೨ ಕಿ.ಮೀ. ದೂರದಲ್ಲಿರುವ ಬಸ್ ನಿಲ್ದಾಣಕ್ಕೆ ಗಿರೀಶ್ ತಮ್ಮ ದ್ವಿಚಕ್ರ ವಾಹನದಲ್ಲಿ ಪುತ್ರಿಯನ್ನು ಕರೆದುಕೊಂಡು ಹೋಗಿ ಬಿಡುವುದು, ಮತ್ತೆ ಸಂಜೆ ಬಸ್ ನಿಲ್ದಾಣಕ್ಕೆ ಬಂದು ವಾಪಸ್ ಮನೆಗೆ ಕರೆದೊಯ್ಯುತ್ತಿದ್ದರು. ಒಮ್ಮೊಮ್ಮೆ ಕಾರಣಾಂತರಗಳಿಂದ ಅವರು ಬಸ್ ನಿಲ್ಧಾಣಕ್ಕೆ ಬರುವುದು ಸಾಧ್ಯವಾಗದಿದ್ದರೆ, ನಂದಿತಾ ನಡೆದುಕೊಂಡೇ ಮನೆಗೆ ಹೋಗಬೇಕಿತ್ತು. ಬಡತನದ ಕಾರಣಕ್ಕಾಗಿ ಮಗಳನ್ನು ಸರ್ಕಾರಿ ಶಾಲೆ, ಕಾಲೇಜಿಗೆ ಸೇರಿಸಬೇಕಾಗಿತ್ತು. ಇದೀಗ ಮಗಳು ಜಿಲ್ಲೆಗೆ ೨ನೇ ಸ್ಥಾನ ಗಳಿಸಿರುವುದು ಖುಷಿ ತಂದಿದೆ ಎಂದು ಗಿರೀಶ್ ತಮ್ಮ ಪುತ್ರಿಯ ಸಾಧನೆ ಕುರಿತು ಹರ್ಷ ವ್ಯಕ್ತಪಡಿಸಿದ್ದಾರೆ.

” ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ೬೦೦ಕ್ಕೆ ೫೮೫ ಅಂಕ ಗಳಿಸಿ ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿರುವುದಕ್ಕೆ ಖುಷಿಯಾಗಿದೆ. ಪೋಷಕರ ಬೆಂಬಲ, ಉಪನ್ಯಾಸಕರ ಸಹಕಾರ, ಮಾರ್ಗದರ್ಶನದಿಂದ ಇಷ್ಟು ಅಂಕ ಗಳಿಸಲು ಸಾಧ್ಯವಾಗಿದೆ. ಎಲ್ಲರಿಗೂ ಧನ್ಯವಾದ ಸಲ್ಲಿಸಲು ಇಚ್ಛಿಸುತ್ತೇನೆ.”

ಟಿ.ಜಿ.ನಂದಿತಾ, ಕಲಾ ವಿಭಾಗ, ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿನಿ

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

6 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

6 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

6 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

6 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

6 hours ago