Andolana originals

ಫೆ.7ಕ್ಕೆ ನಂಜಡೇಶ್ವರ ದೇವಸ್ಥಾನ ಲೋಕಾರ್ಪಣೆ

ಹೆಗ್ಗಡಹಳ್ಳಿಯಲ್ಲಿ ವಿಮಾನಗೋಪುರ ಕಳಸಾರೋಹಣ; ಸಾವಿರಾರು ಜನರಿಗೆ ಅನ್ನ ಸಂತರ್ಪಣೆ ಆಯೋಜನೆ

ಗುಂಡ್ಲುಪೇಟೆ: ತಾಲ್ಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಶ್ರೀ ನಂಜುಂಡೇಶ್ವರ ದೇವಸ್ಥಾನವು ಗ್ರಾಮಸ್ಥರು, ಸಾರ್ವಜನಿಕರ ಸಹಕಾರದಿಂದ ಪುನರ್ ನಿರ್ಮಾಣವಾಗಿದ್ದು ಫೆ. ೭ಕ್ಕೆ ದೇವಸ್ಥಾನ ಲೋಕಾರ್ಪಣೆಯಾಗಲಿದೆ. ಸಂಪ್ರೋಕ್ಷಣೆ, ವಿಮಾನ ಗೋಪುರ ಕಳಸ ಸ್ಥಾಪನೆ, ಕುಂಭಾಭಿಷೇಕ ಮಹೋತ್ಸವ ನಡೆಯಲಿದೆ.

ಫೆ. ೫ರಂದು ಗೋಧೂಳಿ ಲಗ್ನದಲ್ಲಿ ಸಂಜೆ ೫ರಿಂದ ೬ ಗಂಟೆವರೆಗೆ ಅಗ್ರತೀರ್ಥ ಸಂಗ್ರಹ ಸಮೇತ, ಹಸು-ಕರು ಸಮೇತ ಸಕಲ ಗೌರವಗಳೊಂದಿಗೆ ಯಾಗಾ ಶಾಲಾ ಪ್ರವೇಶ, ಗಣಪತಿ ಪೂಜಾ, ಪಂಚಗವ್ಯ ಸಾಧನ ಪ್ರೋಕ್ಷಣೆ, ಪ್ರಾಸನ ರಕ್ಷಪೂಜೆ ಕೈಂಕರ್ಯಗಳು ನೆರವೇರಲಿವೆ.

ಫೆ. ೬ರಂದು ಬೆಳಿಗ್ಗೆ ಶಂಕುಸ್ಥಾಪನೆ, ಧಾನ್ಯಾಧಿವಾಸ, ನವಗ್ರಹ ಪೂಜೆ, ಸಪ್ತ ಕಳಸ ಪೂಜೆ, ನವಗ್ರಹ ಹೋಮ, ಸಂಜೆ ೪. ೩೦ಕ್ಕೆ ಪೀಠಾಽವಾಸ, ಪುಷ್ಪಾಽಕಾಸ, ಪೀಠಪೂಜೆ, ಯಂತ್ರ ನವರತ್ನ ಸ್ಥಾಪನೆ ಕಾರ್ಯ ಜರುಗಲಿದೆ.

ಫೆ. ೭ರಂದು ಬ್ರಾಹ್ಮೀ ಮುಹೂರ್ತದಲ್ಲಿ ಬೆಳಿಗ್ಗೆ ೫ರಿಂದ ೬ ಗಂಟೆಯ ಒಳಗೆ ವಿಮಾನ ಕಳಸ ಸ್ಥಾಪನೆ, ಪ್ರಧಾನ ದೇವರಿಗೆ ಅಷ್ಟಬಂಧ ನ್ಯಾಸಗಳು, ನಾಡೀ ಸಂಧಾನ, ಪ್ರಾಣಪ್ರತಿಷ್ಠಾಪನೆ, ಪ್ರಧಾನ ಹೋಮ ನಡೆಯುವ ಮೂಲಕ ಶ್ರೀ ನಂಜುಂಡೇಶ್ವರ ಪುನರ್ ನಿರ್ಮಾಣ ದೇವಾಲಯ ಲೋಕಾರ್ಪಣೆಯಾಗಲಿದೆ.

ಧಾರ್ಮಿಕ ಸಭೆ: ಅಂದು ಬೆಳಿಗ್ಗೆ ೧೦ ಗಂಟೆಗೆ ಧಾರ್ಮಿಕ ಸಭೆ ನಡೆಯಲಿದ್ದು, ಸುತ್ತೂರು ಮಹಾಸಂಸ್ಥಾನದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ಸಾನ್ನಿಧ್ಯ ವಹಿಸುವರು. ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ, ಶ್ರೀ ಗುರುಮಲ್ಲೇಶ್ವರ ದಾಸೋಹ ಮಠದ ದೇವನೂರಿನ ಶ್ರೀ ಮಹಾಂತ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಶಾಸಕ ಎಚ್. ಎಂ. ಗಣೇಶ್‌ಪ್ರಸಾದ್, ಮಾಜಿ ಶಾಸಕ ಸಿ. ಎಸ್. ನಿರಂಜನ್‌ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮುಖ್ಯ ಭಾಷಣಕಾರರಾಗಿ ಕಬ್ಬಹಳ್ಳಿ ಬಾಲಕಿಯರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್. ಎಂ. ಸಿದ್ದರಾಜಪ್ಪ ಹಾಗೂ ಸೋಮಹಳ್ಳಿ ಮಠದ ಸಿದ್ದಮಲ್ಲಸ್ವಾಮೀಜಿ, ಪಡಗೂರು ಅಡವಿ ಮಠದ ಶ್ರೀ ಶಿವಲಿಂಗೇಂದ್ರ ಸ್ವಾಮೀಜಿ, ಮಾದಪಟ್ಟಣ ವಿರಕ್ತ ಮಠದ ತೋಂಟ ದಾರ್ಯ ಸ್ವಾಮೀಜಿ, ಚಿಕ್ಕತುಪ್ಪೂರು ಮಠದ ಚನ್ನವೀರ ಸ್ವಾಮೀಜಿ, ಕಬ್ಬಹಳ್ಳಿ ಮಠದ ಗುರುಸಿದ್ದ ಸ್ವಾಮೀಜಿ, ಬಾಗಲಕೋಟೆ ಕೂಡಲಸಂಗಮದ ಮಹದೇಶ್ವರ ಸ್ವಾಮೀಜಿ ಭಾಗವಹಿಸುವರು. ಕಾರ್ಯಕ್ರಮದ ನಂತರ ಸಾವಿರಾರು ಜನರಿಗೆ ಅನ್ನಸಂತರ್ಪಣೆ ಏರ್ಪಡಿಸ ಲಾಗಿದೆ. ತಾಲ್ಲೂಕಿನಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

6 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

6 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

7 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

7 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

7 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

7 hours ago