Andolana originals

ಜನವರಿ.3ರಿಂದ ನೈಸರ್ಗಿಕ ಕೃಷಿ ಕಾರ್ಯಾಗಾರ

ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್

ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ ಜ.೩ರಿಂದ ೬ರವರೆಗೆ ಹಾಸನ ಜಿಲ್ಲೆ ಹಳೇಬೀಡು ಸಮೀಪವಿರುವ ಶ್ರೀಪುಷ್ಪಗಿರಿ ಮಠದಲ್ಲಿ ನೈಸರ್ಗಿಕ ಕೃಷಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಶ್ರೀ ನಿರ್ಮಲ ಭೂ ಮಾತಾ ಟ್ರಸ್ಟ್ ಅಧ್ಯಕ್ಷ ಡಾ.ಕೆ.ಜೆ.ಅನಂತರಾವ್ ಹೇಳಿದರು.

ನಾಲ್ಕು ದಿನಗಳ ಕಾಲ ನಡೆಯುವ ಈ ಕಾರ್ಯಾಗಾರವನ್ನು ಶೂನ್ಯ ಬಂಡವಾಳದ ನೈಸರ್ಗಿಕ ಕೃಷಿಗೆ ಹೆಸರಾಗಿರುವ ಮಹಾರಾಷ್ಟ್ರದ ಪದ್ಮಶ್ರೀ ಡಾ.ಸುಭಾಷ್ ಪಾಳೇಕರ್ ನಡೆಸಿಕೊಡುವರು. ಕಾರ್ಯಾಗಾರದಲ್ಲಿ ಒಂದು ಸಾವಿರ ಜನರಿಗೆ ವಸತಿ ಸಹಿತ ವ್ಯವಸ್ಥೆ ಏರ್ಪಡಿಸಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಕಾರ್ಯಾಗಾರವು ಶ್ರೀ ಪುಷ್ಪಗಿರಿ ಮಠದ ಡಾ.ಸೋಮಶೇಖರ ಶಿವಾಚಾರ್ಯ ಸ್ವಾಮೀಜಿಯವರ ಸಹಯೋಗದೊಂದಿಗೆ ನಡೆಯಲಿದ್ದು, ಸಾಲ ಮಾಡಿ ಖರೀದಿಸುವ ರಸಗೊಬ್ಬರ, ಕೀಟನಾಶಕ, ಹೈಬ್ರಿಡ್ ಬಿತ್ತನೆ ಬೀಜಗಳು ರೈತಕುಲವನ್ನು ಆತ್ಮಹತ್ಯೆಯ ಹಾದಿ ಹಿಡಿಯುವಂತೆ ಮಾಡಿವೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಈ ಪರಿಸ್ಥಿತಿ ಯಲ್ಲಿ ರೈತರು ರೈತರಾಗಿ ಉಳಿದು ಘನತೆಯ ಬದುಕನ್ನು ಕಟ್ಟಿಕೊಳ್ಳಬೇಕಾದರೆ ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ನುಡಿದರು.

ರೈತರು ಏಕಬೆಳೆಯ ಬದಲಾಗಿ ಬಹುಬೆಳೆಯ ಪದ್ಧತಿಯನ್ನು ಅಳವಡಿಸಿಕೊಳ್ಳುವುದು, ರಸಗೊಬ್ಬರಗಳ ಬದಲು ನಾಟಿ ಹಸುವಿನ ಸಗಣಿ ಮತ್ತು ಗಂಜಲದಿಂದ ತಯಾರಾದ ಬೀಜಾಮೃತ, ಜೀವಾಮೃತ ಬಳಸುವುದು, ನೀರನ್ನು ಕಡಿಮೆ ಬಳಸುವ ನೈಸರ್ಗಿಕ ಕೃಷಿಯತ್ತ ರೈತರು ತೆರೆದುಕೊಳ್ಳದಿದ್ದರೆ ಮುಂದಿನ ಮಕ್ಕಳ ಹಾಗೂ ಭೂಮಿಯ ಆರೋಗ್ಯ ಎಲ್ಲವೂ ಕರಾಳವಾಗಲಿದೆ ಎಂದು ಎಚ್ಚರಿಸಿದರು.

ಕಾರ್ಯಾಗಾರದಲ್ಲಿ ಮೂರು ದಿನಗಳ ಕಾಲ ದೇಸಿ ತಳಿಗಳ ಬೀಜ ಮೇಳ, ಆಹಾರ ಮೌಲ್ಯವರ್ಧನೆ ಮತ್ತು ನೇರ ಮಾರುಕಟ್ಟೆ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ. ಅತಿ ಹೆಚ್ಚು ತಳಿಗಳನ್ನು ಸಂರಕ್ಷಿಸಿರುವ ಮೂವರು ರೈತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಯುವ ರೈತರು ಭಾಗವಹಿಸಲು ಮನವಿ: 

ಮಂಡ್ಯ: ಹಸಿರು ಕ್ರಾಂತಿಯ ಪರಿಣಾಮದಿಂದ ರೈತರು ಕಳೆದುಕೊಂಡಿರುವ ನಾಟಿ ಬೀಜಗಳು, ನಿಸರ್ಗದ ಜೊತೆ ಋತುಮಾನಕ್ಕೆ ತಕ್ಕಂತೆ ಆಯ್ಕೆ ಮಾಡುವ ಕೃಷಿ ಜ್ಞಾನ, ನೇರ ಮಾರುಕಟ್ಟೆ ವಿಧಾನಗಳಾದ ರೈತಸಂತೆಗಳನ್ನು ಪರ್ಯಾಯವಾಗಿ ಕಟ್ಟಲೇಬೇಕಾದ ಪರಿಸ್ಥಿತಿ ಎದುರಾಗಿದೆ. ಶ್ರೀ ಪುಷ್ಪಗಿರಿ ಮಠದಲ್ಲಿ ನಡೆಯುವ ಕಾರ್ಯಾಗಾರಕ್ಕೆ ವಿವಿಧ ರಾಜ್ಯಗಳಿಂದ ಮತ್ತು ಪಕ್ಕದ ನೇಪಾಳದ ರೈತರು, ರೈತ ಮುಖಂಡರು ಭಾಗಿಯಾಗುತ್ತಿದ್ದು, ಯುವ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಡಾ. ಕೆ.ಜೆ.ಅನಂತರಾವ್ ಮನವಿ ಮಾಡಿದರು. ಕಾರ್ಯಾಗಾರಕ್ಕೆ ನೋಂದಣಿ ಶುಲ್ಕವಾಗಿ ೮೦೦ ರೂ. ನಿಗದಿಪಡಿಸಿದೆ. ನೋಂದಣಿಗೆ ಜ.೨ರಂದು ಕೊನೆಯ ದಿನ. ಕಾರ್ಯಾಗಾರಕ್ಕೆ ಬರಲು ಆಸಕ್ತಿ ಇದ್ದು, ನೋಂದಣಿ ಶುಲ್ಕ ಪಾವತಿಸಲು ಕಷ್ಟವಿರುವ ೧೦೦ ಸಣ್ಣ ರೈತರಿಗೆ, ಮಹಿಳಾ ರೈತರು ಹಾಗೂ ಯುವ ರೈತರಿಗೆ ಉಚಿತವಾಗಿ ವ್ಯವಸ್ಥೆ ಮಾಡಲಾಗುವುದು. ಉಚಿತ ನೋಂದಣಿಗೆ ಮೊ:೭೬೭೬೨೮೦೧೩೬ನ್ನು ಸಂಪರ್ಕಿಸಲು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ: ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಿಷ್ಟು.!

ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ಫೋನ್‌ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ…

1 hour ago

ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದಾರೆ: ಸಚಿವ ಪರಮೇಶ್ವರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್‌…

1 hour ago

ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಸಿದ್ದರಾಮಯ್ಯ

ಕಾರವಾರ: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಡ ಹಾಗೂ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಪರ್‌ ಸ್ಪೆಷಾಲಿಟಿ…

2 hours ago

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌

ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಪವಿತ್ರಾ ಎಂಬ…

3 hours ago

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸದ್ಯಕ್ಕೆ ಬಸ್‌ ಟಿಕೆಟ್‌ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…

3 hours ago

ಹಾಸನ| ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ: ಸ್ಕೂಟರ್‌ನಿಂದ ಬಿದ್ದು ಯುವತಿ ಸಾವು

ಹಾಸನ: ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ…

3 hours ago