Andolana originals

ಎಚ್.ಡಿ.ಕೋಟೆಯಲ್ಲಿ ರಂಗೇರಿದ ನವರಾತ್ರಿ ಉತ್ಸವ

ಮಂಜು ಕೋಟೆ

ವರದರಾಜಸ್ವಾಮಿ, ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ೯ ದಿನಗಳು ವಿವಿಧ ಕಾರ್ಯಕ್ರಮ

ಎಚ್.ಡಿ.ಕೋಟೆ: ವಿಶ್ವ ವಿಖ್ಯಾತ ಮೈಸೂರು ದಸರಾ ಭಾನುವಾರ ಪ್ರಾರಂಭವಾಗಿದ್ದರೆ ಇತ್ತ ಪಟ್ಟಣದ ಶ್ರೀ ವರದರಾಜಸ್ವಾಮಿ ಮತ್ತು ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ನವರಾತ್ರಿ ಉತ್ಸವ ಪ್ರಾರಂಭಗೊಂಡಿದೆ.

ಕೋಟೆ ಪಟ್ಟಣದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ದೇವಸ್ಥಾನ ಸಮಿತಿ ಮತ್ತು ಸಾರ್ವಜನಿಕರಿಂದ ಮಿನಿ ದಸರಾ ಕಾರ್ಯಕ್ರಮವನ್ನು ೧೦ ದಿನಗಳ ಕಾಲ ನಡೆಸಲು ಸಕಲ ಸಿದ್ಧತೆಯನ್ನು ನಡೆಸಲಾಗಿದೆ.

ಮುಜರಾಯಿ ಇಲಾಖೆಯ ವ್ಯಾಪ್ತಿಯ ಶ್ರೀ ವರದರಾಜಸ್ವಾಮಿ ದೇವಸ್ಥಾನದಲ್ಲಿ ಪ್ರತಿನಿತ್ಯ ವಿಶೇಷ ಪೂಜೆ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದೇವಸ್ಥಾನ ಸೇರಿದಂತೆ ಮೊದಲನೇ ಮುಖ್ಯ ರಸ್ತೆಯಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

ಹೌಸಿಂಗ್ ಬೋರ್ಡ್‌ನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕೂಡ ೯ ದಿನಗಳ ಕಾಲ ನವರಾತ್ರಿಯ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ದೇವಸ್ಥಾನದ ಪ್ರಮುಖ ಬೀದಿಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ಈ ಎರಡೂ ದೇವಸ್ಥಾನಗಳಲ್ಲಿ ನಡೆಯುತ್ತಿರುವ ನವರಾತ್ರಿಯ ಉತ್ಸವ, ಮಿನಿ ದಸರಾ ಕಾರ್ಯಕ್ರ ಮಗಳು ಪಟ್ಟಣದಲ್ಲಿ ಹಬ್ಬದ ವಾತಾವರಣ ಮೂಡಿಸಿವೆ.

ನವರಾತ್ರಿಯ ಕೊನೆಯ ದಿನ ಅ.೨೧ರ ವಿಜಯದಶಮಿ ದಿನದಂದು ಎರಡೂ ದೇವಸ್ಥಾನಗಳಲ್ಲಿ ಮಿನಿ ದಸರಾ ಕಾರ್ಯಕ್ರಮ ಅದ್ಧೂರಿ ಯಾಗಿ ನಡೆಯಲಿದೆ. ಇದನ್ನು ನೋಡಲು ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಕಡೆಗಳಿಂದ ಸಾವಿರಾರು ಜನರು ಆಗಮಿಸಲಿದ್ದಾರೆ. ೯ ದಿನಗಳ ಕಾಲವೂ ಎರಡೂ ದೇವಸ್ಥಾನಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

” ಸಂಪ್ರದಾಯದಂತೆ ಶ್ರೀ ವರದರಾಜಸ್ವಾಮಿ ದೇವಸ್ಥಾನದಲ್ಲಿ ಈ ಬಾರಿಯೂ ಅರ್ಥಪೂರ್ಣವಾಗಿ, ಅದ್ಧೂರಿಯಾಗಿ ನವರಾತ್ರಿ ಉತ್ಸವ ಮಿನಿ ದಸರಾವನ್ನು ಆಚರಿಸಲಾಗುತ್ತದೆ. ೯ ದಿನಗಳ ಕಾಲ ವಿಶೇಷ ಪೂಜೆ ಕಾರ್ಯಕ್ರಮಗಳು ನಡೆದು ವಿಜಯ ದಶಮಿಯ ದಿನದಂದು ಸಮಿತಿಯವರು, ಸಾರ್ವಜನಿಕರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಮಿನಿ ದಸರಾ ನಡೆಸಲಾಗುತ್ತದೆ.”

ತಿರುಮಲಾಚಾರ್, ಮುಖ್ಯಸ್ಥರು, ಶ್ರೀ ವರದರಾಜ ಸ್ವಾಮಿ ದೇವಸ್ಥಾನ 

” ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಚಾಮುಂಡಿ ದೇವಿಗೆ ನಿತ್ಯವೂ ವಿಶೇಷ ಕಾರ್ಯಕ್ರಮ ನೆರವೇರಲಿದೆ. ನವರಾತ್ರಿ ಕೊನೆಯ ದಿನದಂದು ಮಿನಿ ದಸರಾದ ಉತ್ಸವ ನಡೆಯಲಿದ್ದು, ೯ ದಿನಗಳ ಕಾಲವೂ ಅದ್ಧೂರಿಯಾಗಿ ನವರಾತ್ರಿ ಉತ್ಸವ ನಡೆಯಲಿದೆ. ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆ ಇದೆ.”

ನಟರಾಜ್, ಅಧ್ಯಕ್ಷ, ಚಾಮುಂಡೇಶ್ವರಿ ದೇವಸ್ಥಾನ 

 

 

ಆಂದೋಲನ ಡೆಸ್ಕ್

Recent Posts

ಮಡಿಕೇರಿ ಓಂಕಾರೇಶ್ವರ ದೇವಾಲಯಕ್ಕೆ ಸುರೇಶ್‌ ರೈನಾ ಭೇಟಿ!

ಮಡಿಕೇರಿ: ಭಾರತದ ಮಾಜಿ ಕ್ರಿಕೆಟಿಗ ಸುರೇಶ್‌ ರೈನಾ ಅವರು ಮಡಿಕೇರಿಯ ಪ್ರಸಿದ್ಧ ಓಂಕಾರೇಶ್ವರ ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿ…

14 hours ago

ಕೊಡಗಿನಲ್ಲಿ ಕಾಡಾನೆ ದಾಳಿಗೆ ಜೀವಹಾನಿ: ಶಾಶ್ವತ ಪರಿಹಾರಕ್ಕೆ ಕುಟುಂಬಸ್ಥರು–ಗ್ರಾಮಸ್ಥರ ಆಗ್ರಹ!

ಕೊಡಗು: ಕೊಡಗಿನಲ್ಲಿ ಕಾಡಾನೆ ದಾಳಿಯಿಂದ ಜನರು ಪ್ರಾಣ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಅರಣ್ಯ ಇಲಾಖೆ ಮತ್ತು ಶಾಸಕರ…

14 hours ago

ಶಾಲಾ ಪಠ್ಯಪುಸ್ತಕಗಳಲ್ಲಿ ಸಂವಿಧಾನದ ಆಶಯ ಸೇರ್ಪಡೆಗೆ ಚಿಂತನೆ: ಸಿಎಂ ಡಿಕೆಶಿ

ಮೈಸೂರು: ಶಾಲಾ ಪಠ್ಯಪುಸ್ತಕಗಳಲ್ಲಿ ಸಂವಿಧಾನದ ಆಶಯಗಳನ್ನು ಅಳವಡಿಸುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.…

14 hours ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶಾಸಕ ದರ್ಶನ್‌ ಧ್ರುವನಾರಾಯಣ್‌

ಮೈಸೂರು: ಸಂವಿಧಾನ ದಿನಾಚರಣೆಯಂದು ನಂಜನಗೂಡು ಶಾಸಕ ದರ್ಶನ್‌ ಧ್ರುವನಾರಾಯಣ್‌ ಅವರು ಡಾ. ಶ್ರೀನಿಧಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜಾನಪದ…

15 hours ago

ಕೆಆರ್‌ಎಸ್‌ ನೀರಿನ ಮಟ್ಟ 95 ಅಡಿಗೆ ಕುಸಿತ: ಬಳಕೆಗೆ ಉಳಿದಿರುವುದು ಸುಮಾರು 12 ಟಿಎಂಸಿ!

ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಮಟ್ಟ ಕುಸಿಯುತ್ತಿದ್ದು, ಆತಂಕ ಹೆಚ್ಚಾಗಿದೆ. ಗರಿಷ್ಠ 124.80 ಅಡಿ…

16 hours ago

ತಿತಿಮತಿ ಸಮೀಪ ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಹುತ್ತರಿ ಸಂಭ್ರಮದಲ್ಲಿದ್ದ ಗ್ರಾಮದಲ್ಲಿ ಶೋಕ!

ಕೊಡಗು:  ಹುತ್ತರಿ ಹಬ್ಬದ ಬಳಿಕ ತೋಟಕ್ಕೆ ಕದಿರು ಕಟ್ಟಲು ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಕೊಡಗು ಜಿಲ್ಲೆಯ ತಿತಿಮತಿ…

19 hours ago