Andolana originals

ಮಳೆಗಾಲದ ಸಮಸ್ಯೆ ಎದುರಿಸಲು ಸೆಸ್ಕ್‌ ಅಗತ್ಯ ಸಿದ್ಧತೆ

ವಿದ್ಯುತ್ ಜಾಲ ಬಲವರ್ಧನೆ, ಕಂಬಗಳ ಬದಲಾವಣೆಗೆ ಕ್ರಮ; ಈ ಬಾರಿಯೂ ಕಾಡುತ್ತಿರುವ ಸಿಬ್ಬಂದಿ ಕೊರತೆ 

ನವೀನ್ ಡಿಸೋಜ

ಮಡಿಕೇರಿ: ಮಳೆಗಾಲವನ್ನು ಎದುರಿಸಲು ನಾನಾ ಇಲಾಖೆಗಳು ಸಜ್ಜಾಗುತ್ತಿದ್ದು, ಸೆಸ್ಕ್ ಕೂಡ ಸಿದ್ಧತೆ ನಡೆಸಿಕೊಂಡಿದೆ. ವಿದ್ಯುತ್ ಜಾಲ ಬಲವರ್ಧನೆ, ಕಂಬಗಳ ಬದಲಾವಣೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಇಲಾಖೆಗೆ ಸಿಬ್ಬಂದಿ ಕೊರತೆ ಸಮಸ್ಯೆ ಈ ಬಾರಿಯೂ ಕಾಡುತ್ತಿದೆ.

ಮಳೆಗಾಲದಲ್ಲಿ ಕೊಡಗು ಜಿಲ್ಲೆ ಎದುರಿಸುವ ವಿವಿಧ ಸಮಸ್ಯೆಗಳ ಪೈಕಿ ವಿದ್ಯುತ್ ಕಡಿತ ಪ್ರಮುಖವಾದದ್ದು. ಕೆಲ ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಮಳೆಯಿದ್ದಾಗ ವಾರ, ತಿಂಗಳುಗಟ್ಟಲೆ ಕರೆಂಟ್ ಇಲ್ಲದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಮಳೆಗಾಲದಲ್ಲಿ ಅತಿ ಹೆಚ್ಚು ನಷ್ಟ ಅನುಭವಿಸುವ ಇಲಾಖೆಗಳಲ್ಲಿ ಸೆಸ್ಕ್ ಕೂಡ ಒಂದಾಗಿದೆ. ಹೀಗಾಗಿ ಮಳೆಗಾಲವನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಇಲಾಖೆ ಕಾರ್ಯಪ್ರವೃತ್ತವಾಗಿದ್ದು, ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಜಿಲ್ಲೆಯಲ್ಲಿ ವಿದ್ಯುತ್ ಜಾಲಗಳ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗಿದ್ದು, ಇತ್ತೀಚೆಗೆ ಸರ್ಕಾರದಿಂದ ೨೦೦ ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ಹಳೆಯ ಲೈನ್‌ಗಳನ್ನು ನವೀಕರಿಸುವುದು, ಹೊಸ ಟ್ರಾನ್ಸ್ ಫಾರ್ಮರ್ ಅಳವಡಿಕೆ, ಉಪಕೇಂದ್ರಗಳ ಸ್ಥಾಪನೆ, ಗ್ರಾಮೀಣ ಪ್ರದೇಶಗಳ ಸಂಪರ್ಕ ಜಾಲದ ಸುಧಾರಣೆ, ಹೆಚ್ಚಿನ ಲೋಡ್ ನಿಗ್ರಹಿಸಲು ಹೈ-ಟೆನ್ಷನ್‌ಲೈನ್‌ಗಳನ್ನು ಹೆಚ್ಚಿಸುವುದು ಸೇರಿದೆ.

ಈ ಕಾಮಗಾರಿ ಪೈಕಿ ಈಗಾಗಲೇ ೫೦ ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ವಾಹಕಗಳ ಬದಲಾವಣೆ, ಹಳೆಯ ಲೈನ್‌ಗಳ ನವೀಕರಣ ಪ್ರಕ್ರಿಯೆ ನಡೆದಿದ್ದು, ಅಂದಾಜು ೨೦೦ ಕಿ.ಮೀ. ವಿದ್ಯುತ್ ಜಾಲದ ಬಲವರ್ಧನೆ ಮಾಡಲಾಗಿದೆ. ವಿದ್ಯುತ್ ಪರಿವರ್ತಕಗಳ ಬದಲಾವಣೆ, ಹೊಸ ಪರಿವರ್ತಕಗಳ ಅಳವಡಿಕೆ ಕಾರ್ಯ ಇನ್ನಷ್ಟೇ ಆಗಬೇಕಿದೆ.

ಮಳೆಗಾಲದ ಸಮಸ್ಯೆಗಳನ್ನು ಎದುರಿಸುವ ಸಲುವಾಗಿ ಜಿಲ್ಲೆಗೆ ೭೫ ಗ್ಯಾಂಗ್‌ಮನ್ಗಳನ್ನು ಹೆಚ್ಚುವರಿಯಾಗಿ ಒದಗಿಸಿದ್ದು, ಇವರು ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲೆಯಾದ್ಯಂತ ವಿದ್ಯುತ್ ತಂತಿಗಳಿಗೆ ಸಮೀಪದಲ್ಲಿರುವ ಮರದ ಕೊಂಬೆ, ರೆಂಬೆಗಳನ್ನು ಕತ್ತರಿಸುವುದು, ಅಪಾಯಕಾರಿ ಮರಗಳ ತೆರವು ಸೇರಿದಂತೆ ನಾನಾ ಮುಂಜಾಗ್ರತಾ ಕ್ರಮಗಳನ್ನು ಇಲಾಖೆ ಕೈಗೊಂಡಿದೆ.

ಇಲಾಖೆಯಲ್ಲಿ ಶೇ.೩೫ರಷ್ಟು ಮಾತ್ರ ಖಾಯಂ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಶೇ.೬೫ರಷ್ಟು ಹುದ್ದೆಗಳು ಭರ್ತಿಯಾಗಬೇಕಿದೆ. ಇದರೊಂದಿಗೆ ಇರುವ ೭೫ ಗ್ಯಾಂಗ್‌ಮನ್‌ಗಳಿಂದ ಕೆಲಸ ಕಷ್ಟವಾಗಲಿದ್ದು, ಇನ್ನೂ ಹೆಚ್ಚುವರಿಯಾಗಿ ೨೫ ಮಂದಿ ಗ್ಯಾಂಗ್‌ಮನ್‌ಗಳ ನೇಮಕಕ್ಕೆ ಬೇಡಿಕೆ ಸಲ್ಲಿಸಲಾಗಿದೆ.

ಕಳೆದ ಸಾಲಿನಲ್ಲಿ ೬.೫ ಕೋಟಿ ರೂ. ನಷ್ಟ

” ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾದ ಪರಿಣಾಮ ವಿದ್ಯುತ್ ಇಲಾಖೆಗೂ ಹೆಚ್ಚು ನಷ್ಟ ಸಂಭವಿಸಿತ್ತು. ಸಾವಿರಾರು ಕಂಬಗಳು ನೆಲಕ್ಕುರುಳಿದ್ದವಲ್ಲದೇ ನೂರಾರು ಟ್ರಾನ್ಸ್ ಫಾರ್ಮರ್‌ಗಳಿಗೂ ಹಾನಿಯಾಗಿತ್ತು. ಇದಲ್ಲದೇ ಮಳೆ, ನಾನಾ ಕಾರಣಗಳಿಂದ ಒಟ್ಟು ೯ ಮಂದಿ ವಿದ್ಯುತ್ ಅವಘಡದಲ್ಲಿ ಮೃತ ಪಟ್ಟಿದ್ದರು. ೨೪ ಜಾನುವಾರುಗಳು ಪ್ರಾಣ ಕಳೆದುಕೊಂಡಿದ್ದವು. ಒಟ್ಟಾರೆಯಾಗಿ ಇಲಾಖೆಗೆ ಅಂದಾಜು ೬.೫ ಕೋಟಿ ರೂ. ಗೂ ಹೆಚ್ಚು ನಷ್ಟವಾಗಿತ್ತು ಎಂದು ಅಂದಾಜಿಸಲಾಗಿದೆ.”

” ಜಿಲ್ಲೆಯಲ್ಲಿ ಮಳೆಗಾಲ ಎದುರಿಸಲು ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಜಂಗಲ್ ಕಟ್ಟಿಂಗ್, ಲೈನ್ ಸ್ಟ್ರಂಥನಿಂಗ್ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ನಮ್ಮ ಸಿಬ್ಬಂದಿ ಜತೆ ೭೫ ಗ್ಯಾಂಗ್‌ಮನ್ ಗಳು ಕೆಲಸ ಮಾಡುತ್ತಿದ್ದಾರೆ. ಇನ್ನೂ ಕನಿಷ್ಠ ೨೫ ಮಂದಿ ಗ್ಯಾಂಗ್‌ಮೆನ್‌ಗಳ ಅಗತ್ಯವಿದ್ದು, ಬೇಡಿಕೆ ಸಲ್ಲಿಸಲಾಗಿದೆ.”

– ರಾಮಚಂದ್ರ, ಕಾರ್ಯಪಾಲಕ ಇಂಜಿನಿಯರ್

ಆಂದೋಲನ ಡೆಸ್ಕ್

Recent Posts

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

12 mins ago

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

1 hour ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

1 hour ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

2 hours ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

2 hours ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

3 hours ago