Andolana originals

ಮಳೆಗಾಲದ ಸಮಸ್ಯೆ ಎದುರಿಸಲು ಸೆಸ್ಕ್‌ ಅಗತ್ಯ ಸಿದ್ಧತೆ

ವಿದ್ಯುತ್ ಜಾಲ ಬಲವರ್ಧನೆ, ಕಂಬಗಳ ಬದಲಾವಣೆಗೆ ಕ್ರಮ; ಈ ಬಾರಿಯೂ ಕಾಡುತ್ತಿರುವ ಸಿಬ್ಬಂದಿ ಕೊರತೆ 

ನವೀನ್ ಡಿಸೋಜ

ಮಡಿಕೇರಿ: ಮಳೆಗಾಲವನ್ನು ಎದುರಿಸಲು ನಾನಾ ಇಲಾಖೆಗಳು ಸಜ್ಜಾಗುತ್ತಿದ್ದು, ಸೆಸ್ಕ್ ಕೂಡ ಸಿದ್ಧತೆ ನಡೆಸಿಕೊಂಡಿದೆ. ವಿದ್ಯುತ್ ಜಾಲ ಬಲವರ್ಧನೆ, ಕಂಬಗಳ ಬದಲಾವಣೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಇಲಾಖೆಗೆ ಸಿಬ್ಬಂದಿ ಕೊರತೆ ಸಮಸ್ಯೆ ಈ ಬಾರಿಯೂ ಕಾಡುತ್ತಿದೆ.

ಮಳೆಗಾಲದಲ್ಲಿ ಕೊಡಗು ಜಿಲ್ಲೆ ಎದುರಿಸುವ ವಿವಿಧ ಸಮಸ್ಯೆಗಳ ಪೈಕಿ ವಿದ್ಯುತ್ ಕಡಿತ ಪ್ರಮುಖವಾದದ್ದು. ಕೆಲ ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಮಳೆಯಿದ್ದಾಗ ವಾರ, ತಿಂಗಳುಗಟ್ಟಲೆ ಕರೆಂಟ್ ಇಲ್ಲದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಮಳೆಗಾಲದಲ್ಲಿ ಅತಿ ಹೆಚ್ಚು ನಷ್ಟ ಅನುಭವಿಸುವ ಇಲಾಖೆಗಳಲ್ಲಿ ಸೆಸ್ಕ್ ಕೂಡ ಒಂದಾಗಿದೆ. ಹೀಗಾಗಿ ಮಳೆಗಾಲವನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಇಲಾಖೆ ಕಾರ್ಯಪ್ರವೃತ್ತವಾಗಿದ್ದು, ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಜಿಲ್ಲೆಯಲ್ಲಿ ವಿದ್ಯುತ್ ಜಾಲಗಳ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗಿದ್ದು, ಇತ್ತೀಚೆಗೆ ಸರ್ಕಾರದಿಂದ ೨೦೦ ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ಹಳೆಯ ಲೈನ್‌ಗಳನ್ನು ನವೀಕರಿಸುವುದು, ಹೊಸ ಟ್ರಾನ್ಸ್ ಫಾರ್ಮರ್ ಅಳವಡಿಕೆ, ಉಪಕೇಂದ್ರಗಳ ಸ್ಥಾಪನೆ, ಗ್ರಾಮೀಣ ಪ್ರದೇಶಗಳ ಸಂಪರ್ಕ ಜಾಲದ ಸುಧಾರಣೆ, ಹೆಚ್ಚಿನ ಲೋಡ್ ನಿಗ್ರಹಿಸಲು ಹೈ-ಟೆನ್ಷನ್‌ಲೈನ್‌ಗಳನ್ನು ಹೆಚ್ಚಿಸುವುದು ಸೇರಿದೆ.

ಈ ಕಾಮಗಾರಿ ಪೈಕಿ ಈಗಾಗಲೇ ೫೦ ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ವಾಹಕಗಳ ಬದಲಾವಣೆ, ಹಳೆಯ ಲೈನ್‌ಗಳ ನವೀಕರಣ ಪ್ರಕ್ರಿಯೆ ನಡೆದಿದ್ದು, ಅಂದಾಜು ೨೦೦ ಕಿ.ಮೀ. ವಿದ್ಯುತ್ ಜಾಲದ ಬಲವರ್ಧನೆ ಮಾಡಲಾಗಿದೆ. ವಿದ್ಯುತ್ ಪರಿವರ್ತಕಗಳ ಬದಲಾವಣೆ, ಹೊಸ ಪರಿವರ್ತಕಗಳ ಅಳವಡಿಕೆ ಕಾರ್ಯ ಇನ್ನಷ್ಟೇ ಆಗಬೇಕಿದೆ.

ಮಳೆಗಾಲದ ಸಮಸ್ಯೆಗಳನ್ನು ಎದುರಿಸುವ ಸಲುವಾಗಿ ಜಿಲ್ಲೆಗೆ ೭೫ ಗ್ಯಾಂಗ್‌ಮನ್ಗಳನ್ನು ಹೆಚ್ಚುವರಿಯಾಗಿ ಒದಗಿಸಿದ್ದು, ಇವರು ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲೆಯಾದ್ಯಂತ ವಿದ್ಯುತ್ ತಂತಿಗಳಿಗೆ ಸಮೀಪದಲ್ಲಿರುವ ಮರದ ಕೊಂಬೆ, ರೆಂಬೆಗಳನ್ನು ಕತ್ತರಿಸುವುದು, ಅಪಾಯಕಾರಿ ಮರಗಳ ತೆರವು ಸೇರಿದಂತೆ ನಾನಾ ಮುಂಜಾಗ್ರತಾ ಕ್ರಮಗಳನ್ನು ಇಲಾಖೆ ಕೈಗೊಂಡಿದೆ.

ಇಲಾಖೆಯಲ್ಲಿ ಶೇ.೩೫ರಷ್ಟು ಮಾತ್ರ ಖಾಯಂ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಶೇ.೬೫ರಷ್ಟು ಹುದ್ದೆಗಳು ಭರ್ತಿಯಾಗಬೇಕಿದೆ. ಇದರೊಂದಿಗೆ ಇರುವ ೭೫ ಗ್ಯಾಂಗ್‌ಮನ್‌ಗಳಿಂದ ಕೆಲಸ ಕಷ್ಟವಾಗಲಿದ್ದು, ಇನ್ನೂ ಹೆಚ್ಚುವರಿಯಾಗಿ ೨೫ ಮಂದಿ ಗ್ಯಾಂಗ್‌ಮನ್‌ಗಳ ನೇಮಕಕ್ಕೆ ಬೇಡಿಕೆ ಸಲ್ಲಿಸಲಾಗಿದೆ.

ಕಳೆದ ಸಾಲಿನಲ್ಲಿ ೬.೫ ಕೋಟಿ ರೂ. ನಷ್ಟ

” ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾದ ಪರಿಣಾಮ ವಿದ್ಯುತ್ ಇಲಾಖೆಗೂ ಹೆಚ್ಚು ನಷ್ಟ ಸಂಭವಿಸಿತ್ತು. ಸಾವಿರಾರು ಕಂಬಗಳು ನೆಲಕ್ಕುರುಳಿದ್ದವಲ್ಲದೇ ನೂರಾರು ಟ್ರಾನ್ಸ್ ಫಾರ್ಮರ್‌ಗಳಿಗೂ ಹಾನಿಯಾಗಿತ್ತು. ಇದಲ್ಲದೇ ಮಳೆ, ನಾನಾ ಕಾರಣಗಳಿಂದ ಒಟ್ಟು ೯ ಮಂದಿ ವಿದ್ಯುತ್ ಅವಘಡದಲ್ಲಿ ಮೃತ ಪಟ್ಟಿದ್ದರು. ೨೪ ಜಾನುವಾರುಗಳು ಪ್ರಾಣ ಕಳೆದುಕೊಂಡಿದ್ದವು. ಒಟ್ಟಾರೆಯಾಗಿ ಇಲಾಖೆಗೆ ಅಂದಾಜು ೬.೫ ಕೋಟಿ ರೂ. ಗೂ ಹೆಚ್ಚು ನಷ್ಟವಾಗಿತ್ತು ಎಂದು ಅಂದಾಜಿಸಲಾಗಿದೆ.”

” ಜಿಲ್ಲೆಯಲ್ಲಿ ಮಳೆಗಾಲ ಎದುರಿಸಲು ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಜಂಗಲ್ ಕಟ್ಟಿಂಗ್, ಲೈನ್ ಸ್ಟ್ರಂಥನಿಂಗ್ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ನಮ್ಮ ಸಿಬ್ಬಂದಿ ಜತೆ ೭೫ ಗ್ಯಾಂಗ್‌ಮನ್ ಗಳು ಕೆಲಸ ಮಾಡುತ್ತಿದ್ದಾರೆ. ಇನ್ನೂ ಕನಿಷ್ಠ ೨೫ ಮಂದಿ ಗ್ಯಾಂಗ್‌ಮೆನ್‌ಗಳ ಅಗತ್ಯವಿದ್ದು, ಬೇಡಿಕೆ ಸಲ್ಲಿಸಲಾಗಿದೆ.”

– ರಾಮಚಂದ್ರ, ಕಾರ್ಯಪಾಲಕ ಇಂಜಿನಿಯರ್

ಆಂದೋಲನ ಡೆಸ್ಕ್

Recent Posts

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

9 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago