Andolana originals

ಪುಕ್ಕಟೆ ಪಾರ್ಕಿಂಗ್ ಮಾಡಬೇಕೆ? ಇಲ್ಲಿಗೆ ಬನ್ನಿ!

ಎಸ್.ಎಸ್.ಭಟ್

ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ

ನಂಜನಗೂಡು: ನಗರದ ಹೃದಯ ಭಾಗದ ಮಹಾತ್ಮ ಗಾಂಧಿ ಶತಾಬ್ಧಿ ರಸ್ತೆಗೆ ಹೊಂದಿಕೊಂಡಂತಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣ ಈಗ ದ್ವಿಚಕ್ರ ವಾಹನಗಳಿಂದ ತುಂಬಿ ತುಳುಕಲಾರಂಭಿಸಿದೆ.

ಈ ಆಸ್ಪತ್ರೆಗೆ ರೋಗಿಗಳನ್ನು ಕರೆತರುವ ಅಥವಾ ಆಸ್ಪತ್ರೆಯಲ್ಲಿ ದಾಖಲಾಗಿರುವ ಗರ್ಭಿಣಿ, ಬಾಣಂತಿಯರನ್ನು ನೋಡಲು ಬಂದವರು ತಮ್ಮ ವಾಹನ ನಿಲ್ಲಸಲೂ ಜಾಗವೇ ಇರದಂತೆ ಇಲ್ಲಿ ಭಾನುವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ೫೦೦ಕ್ಕೂ ಹೆಚ್ಚು ವಾಹನಗಳು ನಿಂತಿರುತ್ತವೆ.

ನಗರದ ಹಳೇ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದ ಮಧ್ಯ ಭಾಗದಲ್ಲಿರುವ ನಾಗಮ್ಮ ಎಂಬ ಮಹಾದಾನಿ ಕಳೆದ ಶತಮಾನದ ಆರಂಭದಲ್ಲಿ ಆಸ್ಪತ್ರೆಗೆಂದು ನೀಡಿದ್ದ ಈ ಜಾಗದಲ್ಲಿ ಆರ್. ಧ್ರುವನಾರಾಯಣ ಸಂಸದರಾಗಿದ್ದಾಗ ಅನುದಾನ ತಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ನಿರ್ಮಿಸಿದ್ದರು. ಇದೇ ಅವರಣದಲ್ಲಿ ಆಯುರ್ವೇದ ಆಸ್ಪತ್ರೆ ಹಾಗೂ ತಾಲ್ಲೂಕು ವೈದ್ಯಾಧಿಕಾರಿಗಳ ಕಾರ್ಯಾಲಯಗಳೂ ಕಾರ್ಯನಿರ್ವಹಿಸುತ್ತಿವೆ.

ಮೈಸೂರು, ಚಾಮರಾಜನಗರ ಸೇರಿದಂತೆ ವಿವಿಧ ತಾಲ್ಲೂಕು ಕೇಂದ್ರಗಳಿಗೆ ನಿತ್ಯ ಕೆಲಸದ ಮೇಲೆ ತೆರಳುವವರಿಗೆ ಈ ಆಸ್ಪತ್ರೆಯ ಆವರಣ ಪುಕ್ಕಟೆಯಾಗಿ ವಾಹನ ನಿಲ್ಲಿಸುವ ತಾಣವಾಗಿದೆ. ಆಸ್ಪತ್ರೆಗೆ ಬರುವವರಿರಲಿ, ಸಿಬ್ಬಂದಿಗಳಿಗೂ ಇಲ್ಲಿ ಅಡ್ಡಾದಿಡ್ಡಿ ನಿಲ್ಲುವ ವಾಹನಗಳಿಂದಾಗಿ ತಮ್ಮ ವಾಹನ ನಿಲ್ಲಿಸಲು ಜಾಗವೇ ಇಲ್ಲದೇ ಪರದಾಡುವ ಪರಿಸ್ಥಿತಿ ಎದುರಾಗಿದೆ.

ನಗರದ ಹಳೇ ಬಸ್ ನಿಲ್ದಾಣದಲ್ಲಿ ವಾಹನ ನಿಲ್ಲಿಸಲು ಯಾವುದೇ ಪಾರ್ಕಿಂಗ್ ಸೌಲಭ್ಯಗಳಿಲ್ಲ. ಆದರೆ ರೈಲ್ವೆ ನಿಲ್ದಾಣದಲ್ಲಿ ವಾಹನ ನಿಲ್ಲಿಸಲು ವ್ಯವಸ್ಥೆ ಇದ್ದು, ಅಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೂ ವಾಹನ ನಿಲ್ಲಿಸಿದರೆ ಹಣ ಪೀಕಬೇಕು. ಹಾಗಾಗಿ ದ್ವಿಚಕ್ರ ವಾಹನ ಸವಾರರು ಆಸ್ಪತ್ರೆಯ ಆವರಣವನ್ನು ಉಚಿತವಾಗಿ ವಾಹನ ನಿಲ್ಲಿಸುವ ತಂಗುದಾಣವಾಗಿಸಿ ಕೊಂಡಿದ್ದಾರೆ. ಇದರತ್ತ ತಾಲ್ಲೂಕು ಆಡಳಿತ ಗಮನಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ

” ಆಸ್ಪತ್ರೆಯ ಆವರಣ ರೋಗಿಗಳಿಗೆ ಮತ್ತು ಅವರೊಡನೆ ಬರುವವರ ವಾಹನಗಳಿಗೆ ಮಾತ್ರ ಮೀಸಲಾಗಬೇಕು.”

-ಮಾದೇವನಾಯಕ

” ಈ ರೀತಿ ಪುಕ್ಕಟೆಯಾಗಿ ಆಸ್ಪತ್ರೆ ಆವರಣದಲ್ಲಿ ವಾಹನ ನಿಲ್ಲಿಸುತ್ತಿರುವುದರಿಂದ ತೊಂದರೆಯಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು.”

-ಆಸ್ಪತ್ರೆಯ ಸಿಬ್ಬಂದಿ

” ನಗರಸಭೆಯು ನಗರದಲ್ಲಿ ವಾಹನ ನಿಲ್ಲಿಸಲು ನಿಗದಿತ ಸ್ಥಳಾವಕಾಶ ಮಾಡಿಕೊಡಬೇಕು. ಇಲ್ಲವೇ ಸಂಚಾರ ಪೊಲೀಸರು ಆಸ್ಪತ್ರೆ ಆವರಣದಲ್ಲಿ ನಿಲ್ಲಿಸುವುದಕ್ಕೆ ಕಡಿವಾಣ ಹಾಕಬೇಕು.”

-ಸಾರ್ವಜನಿಕರು

ಆಂದೋಲನ ಡೆಸ್ಕ್

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

39 mins ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

1 hour ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

2 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

2 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

2 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

3 hours ago