ತಿ. ನರಸೀಪುರ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ರೈತರ ಹೆಸರಿನಲ್ಲಿ ರೈತ ದಸರಾ ಆಚರಣೆ ಮಾಡಿ ಮೈಸೂರು ಜಿಲ್ಲೆಯ ರೈತ ಮುಖಂಡರನ್ನು ಕಡೆಗಣಿಸಿರುವುದು ರೈತರಿಗೆ ಮಾಡಿದ ಅಪಮಾನವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೃಷಿ ಇಲಾಖೆ ನಿಷ್ಕ್ರಿಯವಾಗಿದ್ದು, ರಾಜಕಾರಣಿಗಳ ಕಪಿಮುಷ್ಟಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಸ್ಪಷ್ಟವಾಗಿ ಎದ್ದು ಕಾಣುತ್ತದೆ. ಜಿಲ್ಲೆಯಲ್ಲಿ ರಾಷ್ಟ್ರಮಟ್ಟದ ರೈತ ಮುಖಂಡರು ಹಾಗೂ ರಾಜ್ಯ ಮುಖಂಡರು ಮೈಸೂರು ಜಿಲ್ಲೆಯಲ್ಲಿ ಇರುವುದು ಯಾರಿಗೂ ಕಾಣುತ್ತಿಲ್ಲವೇ? ದಸರಾ ಹಬ್ಬ ಆಚರಣೆ ಮಾಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರು, ಕೃಷಿ ಸಚಿವರು, ಜಿಲ್ಲಾ ಆಡಳಿತ, ಕೃಷಿ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತಕ್ಕೆ ಪಕ್ಷಗಳ ಕಾರ್ಯಕರ್ತರು ಕಾಣುತ್ತಾರೆ.
ಜಿಲ್ಲೆಯ ರೈತ ಮುಖಂಡರು ಕಾಣುತ್ತಿಲ್ಲವೇ? ರೈತರ ಸಂಕಷ್ಟಗಳಿಗೆ ಸ್ಪಂದಿಸಿ ಹಗಲಿರುಳು ಹೋರಾಟ ಮಾಡುವ ಮೂಲಕ ಸರ್ಕಾರದ ಗಮನ ಸೆಳೆದು ನ್ಯಾಯ ಕೊಡಿಸುವ ರೈತ ಮುಖಂಡರನ್ನು ಕಡೆಗಣಿಸಿ ರೈತ ದಸರಾ ಆಚರಣೆ ಮಾಡಿರುವುದು ರೈತರಿಗೆ ಮಾಡಿದ ವಂಚನೆ ಇದು ಹಾಗೂ ಖಂಡನೀಯ ಎಂದರು. ಮುಂಬರುವ ವರ್ಷಗಳಲ್ಲಿ ರೈತ ದಸರಾ ಆಚರಣೆಗೆ ರೈತ ಮುಖಂಡರನ್ನು ಕಡೆಗಣಿಸಿ, ರೈತ ದಸರಾ ಆಚರಣೆ ಮಾಡಲು ಮುಂದಾದರೆ ಜಿಲ್ಲಾ ಉಸ್ತುವಾರಿ ಸಚಿವ, ಕೃಷಿ ಸಚಿವ, ಕೃಷಿ ಇಲಾಖೆ ಅಧಿಕಾರಿಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ರೈತರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…