Andolana originals

ವನ್ಯಜೀವಿಗಳ ಹಾವಳಿ ತಡೆಗೆ ಹೊಸ ಪ್ರಯೋಗ

ರೈಲ್ವೆ ಕಂಬಿ ಬ್ಯಾರಿಕೇಡ್‌ಗೆ ಚೈನ್‌ಲಿಂಕ್ ಮೆಶ್ ಅಳವಡಿಕೆಗೆ ಮುಂದಾದ ಅರಣ್ಯ ಇಲಾಖೆ 

ಮೈಸೂರು: ಕಾಡಂಚಿನ ಗ್ರಾಮಗಳಿಗೆ ವನ್ಯಜೀವಿಗಳು ಬಾರದಂತೆ ತಡೆಯಲು ಸೋಲಾರ್ ತಂತಿಬೇಲಿ, ಕಂದಕನಿರ್ಮಾಣ, ರೈಲ್ವೆ ಕಂಬಿ ಬ್ಯಾರಿಕೇಡ್ ಅಳವಡಿಕೆ ಸೇರಿದಂತೆ ಹಲವಾರು ತಂತ್ರಗಳನ್ನು ಕೈಗೊಂಡಿದ್ದ ಅರಣ್ಯ ಇಲಾಖೆ ಈಗ ಹೊಸದೊಂದು ಪ್ರಯೋಗಕ್ಕೆ ಮುಂದಾಗಿದೆ.

ಜಿಲ್ಲೆಯ ಸರಗೂರು, ಎಚ್.ಡಿ.ಕೋಟೆ ಹಾಗೂ ನಂಜನಗೂಡು ತಾಲ್ಲೂಕುಗಳ ಗ್ರಾಮಗಳು ಬಂಡೀಪುರ ಅರಣ್ಯದೊಂದಿಗೆ ಹೊಂದಿಕೊಂಡಿವೆ. ಹೀಗಾಗಿ ಈ ತಾಲ್ಲೂಕುಗಳಲ್ಲಿ ಚಿರತೆ, ಹುಲಿ, ಆನೆಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಬುದ್ಧಿವಂತ ಆನೆಗಳು ರೈಲ್ವೆ ಬ್ಯಾರಿಕೇಡ್‌ಗಳನ್ನೂ ದಾಟಿ ಬರುತ್ತಿವೆ. ಕೆಲವು ಆನೆಗಳು ಬ್ಯಾರಿಕೇಡ್‌ನಲ್ಲಿ ಸಿಲುಕಿ ಒದ್ದಾಡಿದ ಘಟನೆಗಳೂ ನಡೆದಿವೆ.

ಹುಲಿ ಮಾತ್ರವಲ್ಲದೇ ಕಾಡಂಚಿನ ರೈತರಿಗೆ ಉಪಟಳ ನೀಡುವ ಜಿಂಕೆ, ಕಾಡುಹಂದಿ ಹಾಗೂ ಚಿರತೆಗಳ ಹಾವಳಿಗೂ ಕಡಿವಾಣ ಹಾಕಲು ಏನೇ ಪ್ರಯತ್ನ ಮಾಡಿದರೂ ವನ್ಯ ಜೀವಿಗಳು ಕಾಡಿನಿಂದ ನಾಡಿಗೆ ಬರುವುದು ಮಾತ್ರ ನಿಲ್ಲುತ್ತಿಲ್ಲ. ಹೀಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ. ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಚೈನ್‌ಲಿಂಕ್ ಮೆಶ್ ಅಳವಡಿಸಲು ಸಿದ್ಧತೆ ನಡೆಸಿದ್ದಾರೆ.

ಮೆಶ್ ಅಳವಡಿಕೆಗೆ ಚಾಲನೆ: ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷವನ್ನು ತಡೆಯುವ ದೃಷ್ಟಿ ಯಿಂದ ಅಂತರಸಂತೆ ವಲಯದ ಸುತ್ತಮುತ್ತಲಿನ ಕಾಡಂಚಿನ ಪ್ರದೇಶದಲ್ಲಿ ರೈಲ್ವೆ ಬ್ಯಾರಿಕೇಡ್ ಜಾಲರಿ (ಮೆಶ್) ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಶಾಸಕ ಅನಿಲ್ ಚಿಕ್ಕಮಾದು, ರೈತ ಕಲ್ಯಾಣ ಸಂಘದ ಜಿಲ್ಲಾಧ್ಯಕ್ಷ ಚಂದನ್ ಗೌಡ, ಜಿಪಂ ಮಾಜಿ ಸದಸ್ಯ ರವಿ, ರೈತ ಸಂಘದ ಪದಾಧಿಕಾರಿಗಳು ಹಾಗೂ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

” ನಾಗರಹೊಳೆಯ ಅಂತರಸಂತೆ ವ್ಯಾಪ್ತಿಯ ತಾರಕ ಗಸ್ತಿನಿಂದ ಉದ್ಭೂರು ಗೇಟ್‌ವರೆಗೆ ಸುಮಾರು ೧೩ ಕಿ.ಮೀ. ಅಳವಡಿಸಿರುವ ರೈಲ್ವೆ ಕಂಬಿ ಬ್ಯಾರಿಕೇಡ್‌ಗೆ ಮೊದಲ ಹಂತದಲ್ಲಿ ಬೆಂಗಳೂರಿನ ಚಾಕೋಲೇಟ್ಸ್ ಫೌಂಡೇಶನ್ ಸಹಯೋಗದೊಂದಿಗೆ ಚೈನ್‌ಲಿಂಕ್ ಮೆಶ್ ಅಳವಡಿಸುವ ಕೆಲಸವನ್ನು ಕೈಗೆತ್ತಿಕೊಳ್ಳಲಾಗಿದೆ. ಸುಮಾರು ೬-೭ ಅಡಿಗಷ್ಟು ಎತ್ತರದ ಮೆಶ್ ಹಾಗೂ ಅದರ ಮೇಲೆ ಕಂಬಿಗಳನ್ನು ಅಳವಡಿಸಿ ಸೋಲಾರ್ ತಂತಿ ಹಾಕಲಾಗುವುದು. ಈ ಪ್ರಯೋಗ ಯಶಸ್ವಿಯಾದರೆ ನಂತರ ಹಂತ ಹಂತವಾಗಿ ವಿಸ್ತರಿಸಲಾಗುವುದು ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.”

” ತಾರಕ ಗಸ್ತಿನಿಂದ ಉದ್ಬೂರು ಗೇಟ್‌ವರೆಗೆ ರೈಲ್ವೆ ಕಂಬಿ ಬ್ಯಾರಿಕೇಡ್‌ಗೆ ಚೈನ್ ಲಿಂಕ್ ಮೆಶ್ ಹಾಕಲಾಗುವುದು. ಇದರಿಂದ ಕಾಡು ಪ್ರಾಣಿಗಳ ಹಾವಳಿ ಕಡಿಮೆಯಾದರೆ, ಮುಂದಿನ ದಿನಗಳಲ್ಲಿ ಎಲ್ಲಿ ಪ್ರಾಣಿಗಳ ಹಾವಳಿ ಹೆಚ್ಚಿದೆಯೋ ಆ ಸ್ಥಳಗಳಲ್ಲೂ ಹಾಕಲು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು.”

ಮಧು, ಎಸಿಎಫ್, ಮೇಟಿಕುಪ್ಪೆ ಅರಣ್ಯ ವಲಯ

” ಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ತಪ್ಪಿಸುವ ಸಲುವಾಗಿ ಮೇಲಧಿಕಾರಿಗಳ ಹಾಗೂ ಸ್ಥಳೀಯ ಶಾಸಕರ ಸಹಕಾರದೊಂದಿಗೆ ನಾಗರಹೊಳೆ ವ್ಯಾಪ್ತಿಯಲ್ಲಿ ೧೩ ಕಿ.ಮೀ. ಚೈನ್ ಲಿಂಕ್ ಮೆಶ್ ಅಳವಡಿಸಲಾಗುತ್ತಿದೆ. ಇದರಿಂದ ಸ್ಥಳೀಯರಿಗೆ ವನ್ಯಜೀವಿಗಳ ಹಾವಳಿ ತಗ್ಗಲಿದೆ ಎಂಬ ವಿಶ್ವಾಸವಿದೆ.”

ಎಸ್.ಎಸ್.ಸಿದ್ದರಾಜು, ಆರ್‌ಎಫ್‌ಒ, ಅಂತರಸಂತೆ

” ಬ್ಯಾರಿಕೇಡ್‌ಗಳಿಗೆ ಚೈನ್ ಲಿಂಕ್ ಮೆಶ್ ಅಳವಡಿಸುವ ಮೂಲಕ ವನ್ಯಜೀವಿಗಳ ಅತಿಕ್ರಮಣವನ್ನು ತಡೆದು, ರೈತರ ಬೆಳೆಗಳ ರಕ್ಷಣೆ ಜೊತೆಗೆ ಮಾನವ-ಪ್ರಾಣಿ ಸಂಘರ್ಷವನ್ನೂ ಕಡಿಮೆ ಮಾಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.”

ಅನಿಲ್ ಚಿಕ್ಕಮಾದು, ಶಾಸಕರು

ಆಂದೋಲನ ಡೆಸ್ಕ್

Recent Posts

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

3 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

3 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

3 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

3 hours ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

3 hours ago