ಕೋಟೆ: ಪುರಸಭೆ ಅಧ್ಯಕ್ಷ ಸ್ಥಾನದ ಮೀಸಲಾತಿ ವಿರುದ್ದ ತಡೆಯಾಜ್ಞೆ ಹಿನ್ನೆಲೆಯಲ್ಲಿ ನಡೆಯದ ಚುನಾವಣೆ
ಮಂಜು ಕೋಟೆ
ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಆಡಳಿತ ಮಂಡಳಿಗೆ ಒಂದೂವರೆ ವರ್ಷದಿಂದ ಅಧಿಕಾರವಿಲ್ಲದೆ ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆಯಾಗಿದೆ.
ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಅವಧಿ ಪೂರ್ಣಗೊಂಡು ಒಂದೂವರೆ ವರ್ಷ ಕಳೆದಿದೆ. ಎರಡು ತಿಂಗಳ ಹಿಂದೆ ಸರ್ಕಾರ ನೂತನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯನ್ನು ಪ್ರಕಟಿಸಿ ಚುನಾವಣೆ ನಡೆಸುವಂತೆ ಅವಕಾಶ ಮಾಡಿಕೊಡಲಾಗಿತ್ತು.
ಪ್ರಕಟಗೊಂಡಿದ್ದ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡದ ಮಹಿಳೆಯ ಮೀಸಲಾತಿಯ ವಿರುದ್ಧ ಕಾಂಗ್ರೆಸ್ ಪಕ್ಷದ ಪುರಸಭಾ ಸದಸ್ಯ ಮಧು ಕುಮಾರ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಸರ್ಕಾರ ಮತ್ತು ನಗರಾಭಿವೃದ್ಧಿ ಇಲಾಖೆ ತಡೆಯಾಜ್ಞೆಯನ್ನು ತೆರವುಗೊಳಿಸುವುದಾ ಗಲಿ ಅಥವಾ ಹೊಸ ಮೀಸಲಾತಿಯ ಮೂಲಕ ಚುನಾವಣೆ ಮಾಡುವ ಪ್ರಕ್ರಿಯೆಯನ್ನಾಗಲಿ ನಡೆಸದೇ ಇರುವುದರಿಂದ ಆಡಳಿತ ಮಂಡಳಿಗೆ ಅಧಿಕಾರ ನಡೆಸುವ ಅವಕಾಶ ಇಲ್ಲದಂತಾಗಿದೆ.
ಒಂದೂವರೆ ವರ್ಷದಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳು ಖಾಲಿಯಾಗಿರುವುದರಿಂದ ಪುರಸಭೆ ವ್ಯಾಪ್ತಿಯ ಅಭಿವೃದ್ಧಿಗೆ ಸಹಕಾರವಾಗಲೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಆಡಳಿತ ಅಧಿಕಾರಿಗಳನ್ನು ನೇಮಕ ಮಾಡಿದ್ದರೂ ಬಜೆಟ್ ಮಂಡನೆ ಸಭೆ ನಡೆದಿದ್ದನ್ನು ಬಿಟ್ಟರೆ ಬೇರೆ ಯಾವುದೇ ಸಾಮಾನ್ಯ ಸಭೆ ನಡೆದಿಲ್ಲ. ಇದರಿಂದ ಪಟ್ಟಣದಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳು ಚುರುಕಾಗಿ ನಡೆಯಲು ಸಾಧ್ಯವಾಗುತ್ತಿಲ್ಲ. ಸರ್ಕಾರದ ಅನುದಾನ ಸಮರ್ಪಕವಾಗಿ ಬಳಕೆಯಾಗದೆ ಕೆಲವೊಂದು ಕಾಮಗಾರಿಗಳು ಕಳಪೆಯಿಂದ ನಡೆದಿದ್ದರಿಂದ ಇದನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಮತ್ತು ಪಿಡಿ ಶುಭ ಅವರು ಇಲ್ಲಿನ ಇಂಜಿನಿಯರ್ ಸುರೇಶ ಅವರನ್ನು ಇತ್ತೀಚೆಗೆ ಅಮಾನತ್ತುಗೊಳಿಸಿದ್ದರು.
ಇಲ್ಲಿನ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳ ನಡುವಿನ ಮುಸುಕಿನ ಗುದ್ದಾಟದಿಂದ ಸಾರ್ವಜನಿಕರ ಮತ್ತು ಕಚೇರಿಯ ಕೆಲಸ ಕಾರ್ಯಗಳು ಬಹಳಷ್ಟು ವಿಳಂಬವಾಗುತ್ತಿವೆ ಎಂಬ ಆರೋಪವೂ ಕೇಳಿಬರುತ್ತಿದೆ.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ನಡೆದು ಅಧಿಕಾರಕ್ಕೆ ಬರಬೇಕು ಅಥವಾ ಆಡಳಿತಾಧಿಕಾರಿಯಾದ ಹುಣಸೂರಿನ ಉಪವಿಭಾಗಾಧಿಕಾರಿ ವಿಜಯಕುಮಾರ್ ಅವರು ಪುರಸಭೆ ಸದಸ್ಯರ ಸಾಮಾನ್ಯ ಸಭೆ ನಡೆಸಿ ಆಡಳಿತವನ್ನು ಚುರುಕುಗೊಳಿಸಿ ಅಭಿವೃದ್ಧಿ ಕೆಲಸಗಳನ್ನು ನಡೆಸಿದಾಗ ಮಾತ್ರ ಹಿಂದುಳಿದಿರುವ ಈ ಪುರಸಭೆ ಅಭಿವೃದ್ಧಿಯತ್ತ ಸಾಗಲಿದೆ. ಕಚೇರಿಯ ಕೆಲಸ-ಕಾರ್ಯಗಳು ಸಮರ್ಪಕವಾಗಿ ನಡೆಯಲಿವೆ. ಪಟ್ಟಣಕ್ಕೆ ಮೂಲಸೌಕರ್ಯಗಳು ದೊರೆಯ ಲಿವೆ ಎಂಬುದು ಪಟ್ಟಣದ ಸಾರ್ವಜನಿಕರ ಆಶಯವಾಗಿದೆ.
ನಾಯಕ ಸಮುದಾಯಕ್ಕೆ ಸೇರಿದ ಮಹಿಳೆಯರು ಪುರಸಭೆಯಲ್ಲಿ ಅಧಿಕಾರ ನಡೆಸಲು ಶಾಸಕರು ಮತ್ತು ಕಾಂಗ್ರೆಸ್ ಸದಸ್ಯರು ಅವಕಾಶ ನೀಡದೆ ತಡೆಯಾಜ್ಞೆ ತಂದಿದ್ದಾರೆ. ಬೇರೆ ಸಮುದಾಯಕ್ಕೆ ಮೀಸಲಾತಿ ಒದಗಿಸಿ ಅಧಿಕಾರ ಮಾಡುವ ಅವಕಾಶವನ್ನು ಕೂಡ ಕಲ್ಪಿಸದೇ ಇರುವುದರಿಂದ ಪುರಸಭೆಯ ಅಭಿವೃದ್ಧಿ ಕೆಲಸಗಳು ನಡೆಯದೆ ಜನಸಾಮಾನ್ಯರು ಸಮಸ್ಯೆ ಎದುರಿಸುತ್ತಿದ್ದಾರೆ.
-ಶಿವಮ್ಮ ಚಾಕಹಳ್ಳಿ ಕೃಷ್ಣ, ಪುರಸಭೆ ಜಾ.ದಳ ಸದಸ್ಯರು
ಅಧ್ಯಕ್ಷ ಸ್ಥಾನದ ಮೀಸಲಾತಿಗೆ ಮಾತ್ರ ತಡೆಯಾಜ್ಞೆ ಇರುವುದರಿಂದ ಉಳಿದ ಸ್ಥಾನಗಳಿಗೆ ಚುನಾವಣೆ ನಡೆಸಬಹುದೇ ಎಂದು ಚುನಾವಣಾ ಶಾಖೆಯವರಿಗೆ ಪತ್ರ ಬರೆಯಲಾಗಿದೆ. ಸದಸ್ಯರುಗಳ ಸಾಮಾನ್ಯ ಸಭೆ ನಡೆಸಲು ಆಡಳಿತ ಅಧಿಕಾರಿಗಳು ಸೂಚಿಸಿದ್ದಾರೆ. ಇದರ ಬಗ್ಗೆ ಕ್ರಮ ಕೈಗೊಳ್ಳುತ್ತಿದ್ದೇನೆ.
-ಸುರೇಶ್, ಮುಖ್ಯಾಧಿಕಾರಿ, ಪುರಸಭೆ
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…