Andolana originals

ಕೆಆರ್‌ಎಸ್‌ ತುಂಬಿದರೂ ಮಳವಳ್ಳಿಗಿಲ್ಲ ನೀರು

ಮಂಡ್ಯ: ಪ್ರಸಕ್ತ ವರ್ಷ ಉತ್ತಮ ಮಳೆಯಾಗಿ ಕೆಆರ್‌ಎಸ್ ಜಲಾಶಯ ತುಂಬಿದ್ದರೂ ಮಳವಳ್ಳಿ ತಾಲ್ಲೂಕಿನ ಶೇ. ೬೦ರಷ್ಟು ಪ್ರದೇಶದ ನಾಲೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಹರಿಯದೆ ಕೃಷಿ ಚಟುವಟಿಕೆಗಳಿಗೆ ಭಾರೀ ಹಿನ್ನಡೆಯಾಗಿದೆ.

ತಾಲ್ಲೂಕಿನ ತಳಗವಾದಿ, ಕಿರು ಗಾವಲು, ಹೂವಿನ ಕೊಪ್ಪಲು, ರಾಗಿಬೊಮ್ಮನಹಳ್ಳಿ, ಮಾರೇಹಳ್ಳಿ, ಹೊಸಹಳ್ಳಿ, ಕಂದೇಗಾಲ, ಮಿಕ್ಕೆರೆ, ಸರಗೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಕೆರೆ-ಕಟ್ಟೆಗಳು ಸಂಪೂರ್ಣ ಬರಿದಾಗಿದ್ದು, ಭತ್ತ ಹಾಗೂ ಕಬ್ಬು ನಾಟಿ ಮಾಡಲು ರೈತರಿಗೆ ನೀರಿನ ಸಮಸ್ಯೆ ಉದ್ಭವವಾಗಿದೆ. ಮಳವಳ್ಳಿ ತಾಲ್ಲೂಕಿನಲ್ಲಿ ಶೇ. ೩೦ರಷ್ಟು ಮಾತ್ರ ಭತ್ತದ ನಾಟಿಯಾಗಿದ್ದು, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಾಲೆಗಳಿಗೆ ಸಮರ್ಪಕವಾಗಿ ನೀರು ಹರಿಸದ ಹಿನ್ನೆಲೆಯಲ್ಲಿ ರೈತರು ಸಂಕಷ್ಟದಲ್ಲಿ zರೆ. ಕೊಳವೆ ಬಾವಿ ಹೊಂದಿರುವ ಶೇ. ೩೦ ರಿಂದ ೩೫ರಷ್ಟು ರೈತರು ಮಾತ್ರ ನಾಟಿ ಮಾಡಿದ್ದಾರೆ.

ಇನ್ನುಳಿದ ರೈತರು ನಾಲೆಗಳ ನೀರನ್ನೇ ಅವಲಂಬಿಸಿದ್ದಾರೆ. ನಾಲೆಗಳಲ್ಲಿ ಗಿಡಗಂಟಿಗಳನ್ನು ತೆಗೆಯುವುದು ಹಾಗೂ ಸರಿಯಾಗಿ ನಿರ್ವಹಣೆ ಮಾಡುವಲ್ಲಿ ಅಽಕಾರಿಗಳು ವಿಫಲರಾಗಿದ್ದಾರೆ. ಯಾವುದೇ ಇಂಜಿನಿಯರ್‌ಗಳು ನಾಲೆಗಳ ಪರಿಶೀಲನೆಗೆ ಬರುವುದಿಲ್ಲ, ಎಲ್ಲರೂ ಬೆಂಗಳೂರು ಮತ್ತು ಮೈಸೂರಿನಲ್ಲಿ ವಾಸವಿದ್ದು, ಕಚೇರಿಯಲ್ಲಿ ಕುಳಿತು ಕೆಲಸ ಮಾಡುವ ಅಧಿಕಾರಿಗಳಿಂದ ರೈತ ಪರ ಕೆಲಸ ಮಾಡಲು ಸಾಧ್ಯವೇ ಎನ್ನುವುದು ರೈತರು ಹಾಗೂ ಸಾರ್ವಜನಿಕರ ಪ್ರಶ್ನೆಯಾಗಿದೆ.

ಕೃಷ್ಣರಾಜ ಸಾಗರ ಜಲಾಶಯ ತುಂಬಿ ತಮಿಳುನಾಡಿಗೆ ಸಾಕಷ್ಟು ನೀರು ಹರಿದು ಹೋಗಿದ್ದರೂ ತಾಲ್ಲೂಕಿನ ನಾಲೆಗಳಿಗೆ ನೀರು ಬಂದಿಲ್ಲ, ಈ ಬಗ್ಗೆ ಇಲ್ಲಿನ ರೈತರು ಪ್ರಶ್ನೆ ಮಾಡಿದರೆ ಇಂಜಿನಿಯರ್‌ಗಳು ಉಡಾಫೆ ಉತ್ತರ ನೀಡುತ್ತಿದ್ದು, ರೈತರಿಗೆ ದಿಕ್ಕು ತೋಚದಂತಾಗಿದೆ. ೯ ಸಾವಿರಕ್ಕೂ ಹೆಚ್ಚು ಪಂಪ್‌ಸೆಟ್‌ಗಳು ಕೃಷ್ಣರಾಜ ಸಾಗರ ಜಲಾಶಯದಿಂದ ವಿಶ್ವೇಶ್ವರಯ್ಯ, ಮಾಧವಮಂತ್ರಿ ಸೇರಿದಂತೆ ಹಲವು ಉಪ ನಾಲೆಗಳಿಗೆ ನೀರು ಹರಿಸಲಾಗುತ್ತದೆ. ಕೃಷ್ಣರಾಜ ಸಾಗರದಿಂದ ಪಾಂಡವಪುರ, ಶ್ರೀರಂಗಪಟ್ಟಣ, ಮಂಡ್ಯ, ಮದ್ದೂರು, ಮಳವಳ್ಳಿ ಕೊನೆಯ ಭಾಗಕ್ಕೆ ನೀರು ಹರಿಯುತ್ತದೆ. ಆದರೆ, ಪಾಂಡವಪುರ, ಶ್ರೀರಂಗಪಟ್ಟಣ, ಮಂಡ್ಯ ತಾಲ್ಲೂಕುಗಳ ರೈತರು ಸುಮಾರು ೯ ಸಾವಿರ ಪಂಪ್‌ಸೆಟ್‌ಗಳನ್ನು ನಾಲೆಗೇ ಅಳವಡಿಸಿ ನೀರನ್ನು ತಮ್ಮ ತಮ್ಮ ಜಮೀನುಗಳಿಗೆ ಹರಿಸುತ್ತಿರುವುದರಿಂದ ಮಳವಳ್ಳಿ ಹಾಗೂ ಮದ್ದೂರು ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲ ಎಂಬ ಆರೋಪವಿದೆ.

ಮಳವಳ್ಳಿ ತಾಲ್ಲೂಕಿನ ನಾಲೆಗಳಿಗೆ ನೀರು ಹರಿದಿಲ್ಲ. ಇಲ್ಲಿಯ ರೈತರು ಅನುಭವಿಸುತ್ತಿರುವ ಕಷ್ಟವನ್ನು ಜಿಲ್ಲೆಯ ಯಾವ ತಾಲ್ಲೂಕಿನವರೂ ಅನುಭವಿಸುತ್ತಿಲ್ಲ. ಮಾಧವ ಮಂತ್ರಿ, ರಾಮಸ್ವಾಮಿ, ಹೆಬ್ಬಕವಾಡಿ, ವಿಶ್ವೇಶ್ವರಯ್ಯ, ಹೆಬ್ಬಳ್ಳ ಚೆನ್ನಯ್ಯ ನಾಲೆಗಳಲ್ಲಿ ನೀರು ಹರಿಯುತ್ತಿಲ್ಲ. ಮಾರೇಹಳ್ಳಿ ಹಾಗೂ ಮಳವಳ್ಳಿ ಕೆರೆಗಳು ಭರ್ತಿಯಾಗದೆ ಸಂಪರ್ಕ ಕೆರೆಗಳಿಗೂ ನೀರು ಹರಿದಿಲ್ಲ. – ಡಾ. ಕೆ. ಅನ್ನದಾನಿ, ಮಾಜಿ ಶಾಸಕರು.

ಕೆಆರ್‌ಎಸ್ ಭರ್ತಿಯಾಗಿ ಎಲ್ಲ ನಾಲೆಗಳಿಗೂ ನೀರು ಹರಿಸುತ್ತಿದ್ದರೂ ಮಳವಳ್ಳಿ ತಾಲ್ಲೂಕಿನ ನಾಲೆಗಳಿಗೆ ಸಮರ್ಪಕವಾಗಿ ನೀರು ಹರಿಯದೆ ಬಿತ್ತನೆ ಕಾರ್ಯವೂ ವಿಳಂಬವಾಯಿತು. ಪ್ರಸ್ತುತ ನಾಟಿ ಮಾಡಲೂ ವಿಳಂಬವಾಗಿದೆ. ಈ ಬಗ್ಗೆ ಸಂಬಂಧಿಸಿದ ಜನಪ್ರತಿನಿಧಿಗಳು ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಗಮನ ಹರಿಸಬೇಕು. – ಎಂ. ಎ. ಚಿಕ್ಕರಾಜು, ಮಳವಳ್ಳಿ.

ನಾಲೆಯ ಮೇಲ್ಭಾಗದ ರೈತರು ಮಿತವಾಗಿ ನೀರು ಬಳಸಿ ಕೊಂಡರೆ ಕೊನೆಯ ಭಾಗಕ್ಕೂ ನೀರು ಹರಿದು ಬರುತ್ತದೆ. ಇದಕ್ಕಾಗಿ ಯಾವ ರೈತರನ್ನೂ ದೂರುವು ದಿಲ್ಲ. ಕಾವೇರಿ ಎಲ್ಲರ ಆಸ್ತಿ. ಆದರೆ ಕೊನೆಯ ಭಾಗದ ಮಳವಳ್ಳಿ ಹಾಗೂ ಮದ್ದೂರು ವ್ಯಾಪ್ತಿಯ ರೈತರಿಗೂ ಸಮರ್ಪಕವಾಗಿ ನೀರು ದೊರೆಯಬೇಕೆಂಬುದು ನನ್ನ ಉದ್ದೇಶ. ಆನ್ ಅಂಡ್ ಆಫ್ ಸಿಸ್ಟಮ್‌ನಲ್ಲಿ ನೀರು ಸರಬರಾಜು ಮಾಡುವುದಕ್ಕೆ ನೀರಾವರಿ ಇಲಾಖೆ ಅಧಿಕಾರಿಗಳು ಮುಂದಾಗುವುದರೊಂದಿಗೆ ಮಾರ್ಪಾಡು ಮಾಡಿಕೊಳ್ಳುವಂತೆ ತಿಳಿಸಿದ್ದೇನೆ. – ಪಿ. ಎಂ. ನರೇಂದ್ರಸ್ವಾಮಿ, ಶಾಸಕರು, ಮಳವಳ್ಳಿ

 

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

4 mins ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

14 mins ago

BJP ಎಂಎಲ್‌ಸಿ ಸಿ.ಟಿ ರವಿ ಬಂಧನ

ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…

31 mins ago

ಸಿ. ಟಿ ರವಿ ಅವಾಚ್ಯ ಪದ ಬಳಕೆ ; ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…

44 mins ago

ಅಂಬೇಡ್ಕರ್‌ಗೆ ಅವಮಾನ | ಮೈಸೂರಲ್ಲಿ ಅಮಿತ್‌ ಶಾ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…

1 hour ago

ಸಿ.ಟಿ. ರವಿಗೆ ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಂಬಲಿಗರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…

2 hours ago