ಮಂಜು ಕೋಟೆ
ಕೋಟೆ, ಸರಗೂರು ತಾಲ್ಲೂಕುಗಳ ಅಧಿಕಾರಿಗಳಿಂದ ಅಗತ್ಯ ಸಿದ್ಧತೆ; ಡಿ.ಬಿ.ಕುಪ್ಪೆ ಬಳಿ ಮುನ್ನೆಚ್ಚರಿಕೆಗೆ ಸೂಚನೆ
ಎಚ್.ಡಿ.ಕೋಟೆ: ತಾಲ್ಲೂಕು ಮತ್ತು ಕೇರಳದ ವಯನಾಡು ವ್ಯಾಪ್ತಿಯಲ್ಲಿ ತೀವ್ರಗೊಂಡಿರುವ ಮಳೆಯಿಂದಾಗಿ ಜಲಾಶಯಗಳ ವ್ಯಾಪ್ತಿಯಲ್ಲಿ ಮತ್ತು ಪಟ್ಟಣ ಮತ್ತು ಗ್ರಾಮಗಳಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಅಧಿಕಾರಿಗಳು ಎಲ್ಲ ಸಿದ್ಧತೆ ಕೈಗೊಂಡಿದ್ದಾರೆ.
ಈಗಾಗಲೇ ಕ್ಷೇತ್ರದ ಕೋಟೆ, ಸರಗೂರು ತಾಲ್ಲೂಕುಗಳ ಅಧಿಕಾರಿಗಳು ಟಾಸ್ಕ್‌ಫೋರ್ಸ್ ಸಮಿತಿಯನ್ನು ರಚನೆ ಮಾಡಿ ಅಗತ್ಯ ಸಿದ್ಧತೆಗೆ ಕ್ರಮ ಕೈಗೊಂಡಿದ್ದಾರೆ.
ಕೋಟೆ ಮತ್ತು ಸರಗೂರು ಪಟ್ಟಣ ಸೇರಿದಂತೆ ಆರು ಹೋಬಳಿಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಆರ್‌ಐ, ವಿಎಗಳ ಜೊತೆ ಮುಂಜಾಗ್ರತಾ ಕ್ರಮವಾಗಿ ತಹಸಿ ಲ್ದಾರ್‌ಗಳಾದ ಶ್ರೀನಿವಾಸ್ ಮತ್ತು ಮೋಹನ ಕುಮಾರಿರವರು ತುರ್ತು ಸಭೆಗಳನ್ನು ನಡೆಸಿ, ಮಳೆ ಸಂದರ್ಭದಲ್ಲಿ ಮನೆ, ಫಸಲು, ಜನ-ಜಾನುವಾರುಗಳ ಜೀವಹಾನಿಯಾಗದಂತೆ ಎಚ್ಚರ ವಹಿಸಬೇಕೆಂದು ಮತ್ತು ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜೀವ ಹಾನಿ, ಫಸಲು ನಷ್ಟವಾದರೆ ತಕ್ಷಣ ಸ್ಪಂದಿಸಲು, ಸರಗೂರು ತಾಲ್ಲೂಕು ವ್ಯಾಪ್ತಿಯ ಬಿದರಹಳ್ಳಿಯಲ್ಲಿ ಮತ್ತು ಕೋಟೆ ತಾಲ್ಲೂಕು ವ್ಯಾಪ್ತಿಯ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಗಂಜಿ ಕೇಂದ್ರ ತೆರೆಯಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಎಲ್ಲೆಲ್ಲಿ ಪ್ರವಾಹ ಭೀತಿ?:
ಕ್ಷೇತ್ರದಲ್ಲಿ ವ್ಯಾಪಕವಾಗಿ ಮಳೆ ಆಗುತ್ತಿದ್ದು, ಕಬಿನಿ, ತಾರಕ, ನುಗು, ಹೆಬ್ಬಾಳ ಜಲಾಶಯಗಳು ಭರ್ತಿಯಾಗುತ್ತಿವೆ. ಕಬಿನಿ ಹಿನ್ನೀರಿನ ಪ್ರದೇಶದ ಡಿ.ಬಿ.ಕುಪ್ಪೆ ಗ್ರಾಪಂ ವ್ಯಾಪ್ತಿಯ ಹಳ್ಳಿಗಳು ಹಾಗೂ ಪಟ್ಟಣದ ಅಯ್ಯಂಗಾರ್ ಬಡಾವಣೆ, ಸ್ಟೇಡಿಯಂ ಜೂನಿಗೇರಿ ಬೀದಿ, ಬಿದರಳ್ಳಿ, ಹೊಸ ಬಿದರಳ್ಳಿ ಗ್ರಾಮಗಳಲ್ಲಿ ಮಳೆ ನೀರು ಆವರಿಸಿ ಮನೆಗಳಿಗೂ ನುಗ್ಗುತ್ತದೆ. ಇದರಿಂದ ನಿವಾಸಿಗಳು ಹರಸಾಹಸ ಪಡುವಂತಾಗಿದೆ.
” ತಾಲ್ಲೂಕಿನ ಕಬಿನಿ ಹಿನ್ನೀರಿನ ಪ್ರದೇಶದ ಡಿ.ಬಿ.ಕುಪ್ಪೆ ಗ್ರಾಪಂ ವ್ಯಾಪ್ತಿಯ ಅನೇಕ ಗ್ರಾಮಗಳು ಪ್ರತಿ ಮಳೆಗಾಲ ಸಂದರ್ಭದಲ್ಲೂ ಜಲಾವೃತಗೊಳ್ಳುತ್ತವೆ. ಅದಕ್ಕಾಗಿ ಈ ಭಾಗದಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸ್ಪಂದಿಸಲಾಗುವುದು. ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ನೌಕರ ರನ್ನೂ ಮಳೆ ಪೀಡಿತ ಪ್ರದೇಶಗಳಿಗೆ ನಿಯೋಜಿಸಿ, ತಕ್ಷಣ ಸ್ಪಂದಿಸಲು ಸೂಚಿಸಲಾಗಿದೆ.”
–ಶ್ರೀನಿವಾಸ್, ತಹಸಿಲ್ದಾರ್, ಎಚ್.ಡಿ.ಕೋಟೆ
” ಮುಂಗಾರು ಮಳೆಯಅನಾಹುತಗಳನ್ನು ತಪ್ಪಿಸಲು ಇಬ್ಬರು ಅಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್‌ಫೋರ್ಸ್ ರಚನೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಪಾಲಿಸಬೇಕಾದ ಕೆಲಸಗಳ ಬಗ್ಗೆ ಸೂಚಿಸಿದ್ದು, ಸರಗೂರು ತಾಲ್ಲೂಕು ವ್ಯಾಪ್ತಿಯ ಬಿದರಹಳ್ಳಿಯಲ್ಲಿ ಕಾಳಜಿ ಕೇಂದ್ರವನ್ನು ತೆರೆಯಲು ಎಲ್ಲ ಸಿದ್ಧತೆಗಳನ್ನು ನಡೆಸಲಾಗಿದೆ”
-ಮೋಹನಕುಮಾರಿ, ತಹಸಿಲ್ದಾರ್, ಸರಗೂರು
” ಅತಿಯಾದ ಮಳೆಯಿಂದಾಗಿ ಪಟ್ಟಣ ವ್ಯಾಪ್ತಿಯ ಕೆಲ ವಾರ್ಡುಗಳಲ್ಲಿ ನೀರು ಶೇಖರಣೆಗೊಂಡು ಭಾರಿ ಅನಾಹುತವಾಗುತ್ತಿತ್ತು. ಇದನ್ನು ತಡೆಗಟ್ಟಲು ದೊಡ್ಡ ದೊಡ್ಡ ಚರಂಡಿಗಳ ನಿರ್ಮಾಣ, ಸ್ವಚ್ಛತೆ ಮಾಡಲಾಗಿದೆ. ಮಳೆ ನೀರು ಶೇಖರಣೆಯಾಗದಂತೆ ಕ್ರಮ ಕೈಗೊಂಡಿದ್ದೇವೆ. ಅನೇಕ ಕಾಮಗಾರಿಗಳನ್ನು ನಡೆಸಲಾಗಿದೆ.”
-ಸುರೇಶ್, ಪುರಸಭೆ ಮುಖ್ಯಾಧಿಕಾರಿ
” ಪ್ರತಿ ಮಳೆಗಾಲದ ಸಂದರ್ಭದಲ್ಲೂ ತಾಲ್ಲೂಕಿನ ಗಡಿಭಾಗದ ಪ್ರದೇಶವಾದ ಡಿ.ಬಿ.ಕುಪ್ಪೆ ವ್ಯಾಪ್ತಿಯಲ್ಲಿ ಜನಜೀವನ ಅಸ್ತವ್ಯಸ್ತವಾಗಿ ನಿವಾಸಿಗಳು ಪರದಾಡುವಂತಾಗಿದೆ. ಅಧಿಕಾರಿಗಳು ತಡವಾಗಿ ಬಂದು ಕೆಲಸ ಕಾರ್ಯ ಮಾಡುತ್ತಾರೆ. ಈ ಬಾರಿ ಮುಂಜಾಗ್ರತವಾಗಿ ಎಲ್ಲಾ ರೀತಿ ಕ್ರಮ ಕೈಗೊಳ್ಳಬೇಕು.”
-ಶಿವಲಿಂಗ, ಡಿ.ಬಿ.ಕುಪ್ಪೆ
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…
ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…
ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…
ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…
ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…
ಮಹಾದೇಶ್ ಎಂ ಗೌಡ ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…