Andolana originals

ಮುಂಗಾರು ಮಳೆ ಆರ್ಭಟ ಎದುರಿಸಲು ಅಧಿಕಾರಿಗಳು ಸಜ್ಜು

ಮಂಜು ಕೋಟೆ

ಕೋಟೆ, ಸರಗೂರು ತಾಲ್ಲೂಕುಗಳ ಅಧಿಕಾರಿಗಳಿಂದ ಅಗತ್ಯ ಸಿದ್ಧತೆ; ಡಿ.ಬಿ.ಕುಪ್ಪೆ ಬಳಿ ಮುನ್ನೆಚ್ಚರಿಕೆಗೆ ಸೂಚನೆ 

ಎಚ್.ಡಿ.ಕೋಟೆ: ತಾಲ್ಲೂಕು ಮತ್ತು ಕೇರಳದ ವಯನಾಡು ವ್ಯಾಪ್ತಿಯಲ್ಲಿ ತೀವ್ರಗೊಂಡಿರುವ ಮಳೆಯಿಂದಾಗಿ ಜಲಾಶಯಗಳ ವ್ಯಾಪ್ತಿಯಲ್ಲಿ ಮತ್ತು ಪಟ್ಟಣ ಮತ್ತು ಗ್ರಾಮಗಳಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಅಧಿಕಾರಿಗಳು ಎಲ್ಲ ಸಿದ್ಧತೆ ಕೈಗೊಂಡಿದ್ದಾರೆ.

ಈಗಾಗಲೇ ಕ್ಷೇತ್ರದ ಕೋಟೆ, ಸರಗೂರು ತಾಲ್ಲೂಕುಗಳ ಅಧಿಕಾರಿಗಳು ಟಾಸ್ಕ್‌ಫೋರ್ಸ್‌  ಸಮಿತಿಯನ್ನು  ರಚನೆ ಮಾಡಿ ಅಗತ್ಯ ಸಿದ್ಧತೆಗೆ ಕ್ರಮ ಕೈಗೊಂಡಿದ್ದಾರೆ.

ಕೋಟೆ ಮತ್ತು ಸರಗೂರು ಪಟ್ಟಣ ಸೇರಿದಂತೆ ಆರು ಹೋಬಳಿಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಆರ್‌ಐ, ವಿಎಗಳ ಜೊತೆ ಮುಂಜಾಗ್ರತಾ ಕ್ರಮವಾಗಿ ತಹಸಿ ಲ್ದಾರ್‌ಗಳಾದ ಶ್ರೀನಿವಾಸ್ ಮತ್ತು ಮೋಹನ ಕುಮಾರಿರವರು ತುರ್ತು ಸಭೆಗಳನ್ನು ನಡೆಸಿ, ಮಳೆ ಸಂದರ್ಭದಲ್ಲಿ ಮನೆ, ಫಸಲು, ಜನ-ಜಾನುವಾರುಗಳ ಜೀವಹಾನಿಯಾಗದಂತೆ ಎಚ್ಚರ ವಹಿಸಬೇಕೆಂದು ಮತ್ತು ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜೀವ ಹಾನಿ, ಫಸಲು ನಷ್ಟವಾದರೆ ತಕ್ಷಣ ಸ್ಪಂದಿಸಲು, ಸರಗೂರು ತಾಲ್ಲೂಕು ವ್ಯಾಪ್ತಿಯ ಬಿದರಹಳ್ಳಿಯಲ್ಲಿ ಮತ್ತು ಕೋಟೆ ತಾಲ್ಲೂಕು ವ್ಯಾಪ್ತಿಯ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಗಂಜಿ ಕೇಂದ್ರ ತೆರೆಯಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಎಲ್ಲೆಲ್ಲಿ ಪ್ರವಾಹ ಭೀತಿ?: 

ಕ್ಷೇತ್ರದಲ್ಲಿ ವ್ಯಾಪಕವಾಗಿ ಮಳೆ ಆಗುತ್ತಿದ್ದು, ಕಬಿನಿ, ತಾರಕ, ನುಗು, ಹೆಬ್ಬಾಳ ಜಲಾಶಯಗಳು ಭರ್ತಿಯಾಗುತ್ತಿವೆ. ಕಬಿನಿ ಹಿನ್ನೀರಿನ ಪ್ರದೇಶದ ಡಿ.ಬಿ.ಕುಪ್ಪೆ ಗ್ರಾಪಂ ವ್ಯಾಪ್ತಿಯ ಹಳ್ಳಿಗಳು ಹಾಗೂ ಪಟ್ಟಣದ ಅಯ್ಯಂಗಾರ್ ಬಡಾವಣೆ, ಸ್ಟೇಡಿಯಂ ಜೂನಿಗೇರಿ ಬೀದಿ, ಬಿದರಳ್ಳಿ, ಹೊಸ ಬಿದರಳ್ಳಿ ಗ್ರಾಮಗಳಲ್ಲಿ ಮಳೆ ನೀರು ಆವರಿಸಿ ಮನೆಗಳಿಗೂ ನುಗ್ಗುತ್ತದೆ. ಇದರಿಂದ ನಿವಾಸಿಗಳು ಹರಸಾಹಸ ಪಡುವಂತಾಗಿದೆ.

” ತಾಲ್ಲೂಕಿನ ಕಬಿನಿ ಹಿನ್ನೀರಿನ ಪ್ರದೇಶದ ಡಿ.ಬಿ.ಕುಪ್ಪೆ ಗ್ರಾಪಂ ವ್ಯಾಪ್ತಿಯ ಅನೇಕ ಗ್ರಾಮಗಳು ಪ್ರತಿ ಮಳೆಗಾಲ ಸಂದರ್ಭದಲ್ಲೂ ಜಲಾವೃತಗೊಳ್ಳುತ್ತವೆ. ಅದಕ್ಕಾಗಿ ಈ ಭಾಗದಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸ್ಪಂದಿಸಲಾಗುವುದು. ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ನೌಕರ ರನ್ನೂ ಮಳೆ ಪೀಡಿತ ಪ್ರದೇಶಗಳಿಗೆ ನಿಯೋಜಿಸಿ, ತಕ್ಷಣ ಸ್ಪಂದಿಸಲು ಸೂಚಿಸಲಾಗಿದೆ.”

–ಶ್ರೀನಿವಾಸ್, ತಹಸಿಲ್ದಾರ್, ಎಚ್.ಡಿ.ಕೋಟೆ

” ಮುಂಗಾರು ಮಳೆಯಅನಾಹುತಗಳನ್ನು ತಪ್ಪಿಸಲು ಇಬ್ಬರು ಅಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್‌ಫೋರ್ಸ್ ರಚನೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಪಾಲಿಸಬೇಕಾದ ಕೆಲಸಗಳ ಬಗ್ಗೆ ಸೂಚಿಸಿದ್ದು, ಸರಗೂರು ತಾಲ್ಲೂಕು ವ್ಯಾಪ್ತಿಯ ಬಿದರಹಳ್ಳಿಯಲ್ಲಿ ಕಾಳಜಿ ಕೇಂದ್ರವನ್ನು ತೆರೆಯಲು ಎಲ್ಲ ಸಿದ್ಧತೆಗಳನ್ನು ನಡೆಸಲಾಗಿದೆ”

-ಮೋಹನಕುಮಾರಿ, ತಹಸಿಲ್ದಾರ್, ಸರಗೂರು

” ಅತಿಯಾದ ಮಳೆಯಿಂದಾಗಿ ಪಟ್ಟಣ ವ್ಯಾಪ್ತಿಯ ಕೆಲ ವಾರ್ಡುಗಳಲ್ಲಿ ನೀರು ಶೇಖರಣೆಗೊಂಡು ಭಾರಿ ಅನಾಹುತವಾಗುತ್ತಿತ್ತು. ಇದನ್ನು ತಡೆಗಟ್ಟಲು ದೊಡ್ಡ ದೊಡ್ಡ ಚರಂಡಿಗಳ ನಿರ್ಮಾಣ, ಸ್ವಚ್ಛತೆ ಮಾಡಲಾಗಿದೆ. ಮಳೆ ನೀರು ಶೇಖರಣೆಯಾಗದಂತೆ ಕ್ರಮ ಕೈಗೊಂಡಿದ್ದೇವೆ. ಅನೇಕ  ಕಾಮಗಾರಿಗಳನ್ನು ನಡೆಸಲಾಗಿದೆ.”

-ಸುರೇಶ್, ಪುರಸಭೆ ಮುಖ್ಯಾಧಿಕಾರಿ

” ಪ್ರತಿ ಮಳೆಗಾಲದ ಸಂದರ್ಭದಲ್ಲೂ ತಾಲ್ಲೂಕಿನ ಗಡಿಭಾಗದ ಪ್ರದೇಶವಾದ ಡಿ.ಬಿ.ಕುಪ್ಪೆ ವ್ಯಾಪ್ತಿಯಲ್ಲಿ ಜನಜೀವನ ಅಸ್ತವ್ಯಸ್ತವಾಗಿ ನಿವಾಸಿಗಳು ಪರದಾಡುವಂತಾಗಿದೆ. ಅಧಿಕಾರಿಗಳು ತಡವಾಗಿ ಬಂದು ಕೆಲಸ ಕಾರ್ಯ ಮಾಡುತ್ತಾರೆ. ಈ ಬಾರಿ ಮುಂಜಾಗ್ರತವಾಗಿ ಎಲ್ಲಾ ರೀತಿ ಕ್ರಮ ಕೈಗೊಳ್ಳಬೇಕು.”

-ಶಿವಲಿಂಗ, ಡಿ.ಬಿ.ಕುಪ್ಪೆ

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು…

8 hours ago

ಅಮೃತ್ ೨.೦ ಯೋಜನೆಗೆ ನಾಗರಿಕರ ಅಸಮಾಧಾನ

ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ  ಸರಗೂರು: ಪಟ್ಟಣದ…

8 hours ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

8 hours ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

8 hours ago

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…

8 hours ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

8 hours ago