Andolana originals

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ ವಹಿಸುತ್ತಿದ್ದಾರೆ ಎಂದು ಆರೋಪಿಸಿ ರೈತರು, ಗ್ರಾಮಸ್ಥರು ಪ್ರತಿಭಟನೆ ನಡೆಸಲು ಮುಂದಾದ ಮಾಹಿತಿ ತಿಳಿದ ಅಽಕಾರಿಗಳು ಸಂಜೆ ವೇಳೆಯಲ್ಲಿ ಕೆರೆಗೆ ನೀರು ಬಿಟ್ಟಿರುವ ಘಟನೆ ನಡೆದಿದೆ.

ಈ ಭಾಗದಲ್ಲಿ ಮಳೆ ಪ್ರಮಾಣ ಬಹಳ ಕಡಿಮೆ ಇರುವುದರಿಂದ ಕೆರೆಕಟ್ಟೆಗಳೆಲ್ಲ ಒಣಗಿವೆ. ಜಾನುವಾರು, ರೈತರು, ಜನಸಾಮಾನ್ಯರಿಗೆ ಸಂಕಷ್ಟ ಎದುರಾಗಿದೆ. ಆದರೆ, ಈ ಭಾಗದ ಮುಖಂಡರು, ರೈತರು ನೀರಿಗಾಗಿ ಸಂಬಂಧಪಟ್ಟ ಅಽಕಾರಿಗಳ ಬಳಿ ಎಷ್ಟೇ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಈ ಭಾಗದ ರೈತ ಮುಖಂಡ ಶಿಂಡೇನಹಳ್ಳಿ ಯತೀಶ್ ಕುಮಾರ್ ನೇತೃತ್ವದಲ್ಲಿ ಡಿ. ೧೪ರಂದು ಭಾನುವಾರ ಶಿಂಡೇನಹಳ್ಳಿ ಗೇಟ್ ಬಳಿ ರೈತರು, ಸಾರ್ವಜನಿಕರು ಅಽಕಾರಿಗಳ ನಡೆ ಖಂಡಿಸಿ ಹಾಗೂ ಕೆರೆಗೆ ನೀರು ತುಂಬಿಸಲು ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆ ಶನಿವಾರ ಸಂಜೆಯೇ ಈ ಭಾಗದ ಕೆರೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಅಽಕಾರಿಗಳು ಮುಂದಾಗಿದ್ದಾರೆ. ಯತೀಶ್ ಕುಮಾರ್ ಮಾತನಾಡಿ, ಹಂಪಾಪುರ ಹೋಬಳಿ ವ್ಯಾಪ್ತಿಯಲ್ಲಿ ೧೭ ಕೆರೆಗಳಿದ್ದು, ಅದರಲ್ಲಿ ೧೧ ಕೆರೆಗಳಿಗೆ ಮಾತ್ರ ನೀರು ತುಂಬಿಸಿದ್ದು, ಉಳಿದ ೬ ಕೆರೆಗಳಿಗೆ ನೀರು ತುಂಬಿಸಲು ಮೀನ-ಮೇಷ ಎಣಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ:-ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಕೆರೆಗಳಲ್ಲಿ ನೀರಿಲ್ಲದೆ ದನ ಕರುಗಳಿಗೆ ತೊಂದರೆಯಾಗುತ್ತಿದೆ. ಅಲ್ಲದೆ ಬೋರ್ ವೆಲ್‌ಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಸೆಪ್ಟೆಂಬರ್, ಅಕ್ಟೋ ಬರ್, ನವೆಂಬರ್, ಡಿಸೆಂಬರ್ ಸೇರಿ ಒಟ್ಟು ೪ ತಿಂಗಳ ಕಾಲ ಕೆರೆಗೆ ನೀರಾವರಿ ಇಲಾಖೆ ಅಧೀಕಾರಿಗಳು ಕಬಿನಿ ಏತನೀರಾವರಿ ಮೂಲಕ ಇಬ್ಜಾಲ ದಿಂದ ನೀರು ಬಿಡಬೇಕೆಂಬ ನಿಯಮವಿದೆ. ಆದರೆ, ಡಿಸೆಂಬರ್ ಮುಗಿಯುತ್ತಾ ಬಂದರೂ ಕೆರೆಗೆ ನೀರು ತುಂಬಿಸಿಲ್ಲ ಎಂದರು. ಸರ್ಕಾರ ಕೆರೆಗೆ ನೀರು ತುಂಬಿಸುವ ಯೋಜನೆಯಡಿ ಕೆರೆಗಳ ಬಳಿ ೬೮ ಕೋಟಿ ರೂ. ವೆಚ್ಚದ ಪಂಪ್‌ಹೌಸ್ ನಿರ್ಮಿಸಿದ್ದು, ಅಧಿಕಾರಿಗಳು ಬೇಜವಾ ಬ್ದಾರಿತನ ತೋರಿಸುತ್ತಿದ್ದಾರೆ ಎಂದರು.

ಶಿಂಡೇನಹಳ್ಳಿ ಗ್ರಾಮದ ಬಳಿ ಕೆರೆಗಳಿಗೆ ಸಂಪೂರ್ಣ ನೀರು ತುಂಬಿಸಲು ಆಗ್ರಹಿಸಿ ಭಾನುವಾರ ಪ್ರತಿಭಟನೆ ಹಮ್ಮಿಕೊಂಡಿದ್ದೆವು. ಈ ವಿಚಾರ ತಿಳಿದು ಕೆರೆಗೆ ನೀರನ್ನು ಬಿಡುತ್ತಿದ್ದಾರೆ. ನಂತರ ಅಧಿಕಾರಿಗಳು ದೂರವಾಣಿ ಕರೆ ಮಾಡಿ ಕೆರೆಗೆ ನೀರು ಬಿಡಲಾಗುತ್ತಿದ್ದು, ಪ್ರತಿ ಭಟನೆ ಕೈಬಿಡುವಂತೆ ಮನವಿ ಮಾಡಿ ದ್ದಾರೆ. ಆದರೆ ಈ ಅಧಿಕಾರಿಗಳ ಬೇಜವಾ ಬ್ದಾರಿ ಖಂಡಿಸಿ ಮತ್ತು ಸಮರ್ಪಕವಾಗಿ ಕೆರೆಗೆ ನೀರು ತುಂಬಿಸಲು ಆಗ್ರಹಿಸಿ ಭಾನುವಾರ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

3 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

3 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

3 hours ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

3 hours ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

3 hours ago