ಸಾಲಿಗ್ರಾಮ ತಾಲ್ಲೂಕಿನ ಬೆಟ್ಟಹಳ್ಳಿಯಲ್ಲಿ ಘಟನೆ
ಕೆ.ಆರ್.ನಗರ: ಸಾಲಿಗ್ರಾಮ ತಾಲ್ಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರು ಕಲುಷಿತಗೊಂಡು, ಇದನ್ನು ಸೇವಿಸಿದವರಲ್ಲಿ ಓರ್ವ ಮೃತಪಟ್ಟಿದ್ದು, 12 ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ಗೋವಿಂದೇಗೌಡ (65) ಎಂಬುವವರೇ ಕಲುಷಿತ ನೀರು ಸೇವನೆ ಮಾಡಿ ಮೃತಪಟ್ಟವರು. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಸರಿಯಾದ ರೀತಿಯಲ್ಲಿ ಕುಡಿಯುವ ನೀರು ಒದಗಿಸದ ಸ್ಥಳೀಯ ಗ್ರಾಮ ಪಂಚಾಯಿತಿ ಕಲುಷಿತ ನೀರನ್ನು ಸರಬರಾಜು ಮಾಡಿದೆ. ಮಂಗಳವಾರ ಇದನ್ನು ಸೇವನೆ ಮಾಡಿದ ಕೆಲವರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಗ್ರಾಮಸ್ಥರು ಕೆಲವರನ್ನು ಸಾಲಿ ಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಗೋವಿಂದೇಗೌಡ ಅವರು ತೀವ್ರ ಅಸ್ವಸ್ಥರಾದ ಕಾರಣ ಕುಟುಂಬ ದವರು ಪಕ್ಕದ ಹಾಸನ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗೋವಿಂದೇಗೌಡ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿದ ತಾಲ್ಲೂಕು ಆಸ್ಪತ್ರೆಯ ವೈದ್ಯರ ತಂಡ ಬೆಟ್ಟಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಎಲ್ಲಾ ನಿವಾಸಿಗಳನ್ನು ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ಅಗತ್ಯವಿರುವವರನ್ನು ಆಂಬ್ಯುಲೆನ್ಸ್ ಮೂಲಕ ಸಾಲಿಗ್ರಾಮ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಕಳುಹಿಸಲಾಗಿದೆ.
ಸಂಬಂಧ ತಾಲ್ಲೂಕು ತಂಡ ಆರೋಗ್ಯಾಧಿಕಾರಿಗಳ ಬೆಟ್ಟಹಳ್ಳಿ ಗ್ರಾಮದಲ್ಲಿ ಸಮಗ್ರವಾಗಿ ತನಿಖೆ ನಡೆಸುತ್ತಿದೆ.
ನಮ್ಮ ವೈದ್ಯರ ತಂಡ ಮತ್ತು ಆರೋಗ್ಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಪರೀಕ್ಷೆ ನಡೆಸಿದ್ದೇವೆ. ಕುಡಿಯುವ ನೀರು ಕಲುಷಿತಗೊಂಡಿದೆ. 12 ಜನರಲ್ಲಿ ಇಬ್ಬರು ತೀವ್ರ ಸ್ವರೂಪದಲ್ಲಿ ಅಸ್ವಸ್ಥರಾಗಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
-ಡಾ.ಡಿ.ನಟರಾಜು,
ತಾಲ್ಲೂಕು ಆರೋಗ್ಯಾಧಿಕಾರಿ. ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕು.
ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…
ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…
ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳೋದು ತಪ್ಪು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ ಎಂದು ಮಾಜಿ…
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…