Andolana originals

ಮಾದಕ ವಸ್ತು ಮಾರಾಟ, ಬಳಕೆ ವಿರುದ್ಧ ಕಾರ್ಯಾಚರಣೆ

ನವೀನ್ ಡಿಸೋಜ

೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ ಎಂಡಿಎಂಎ ವಶ 

ಮಡಿಕೇರಿ: ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಯ ವಿರುದ್ಧ ಕೊಡಗು ಜಿಲ್ಲಾ ಪೊಲೀಸ್ ಕಾರ್ಯಾಚರಣೆಯನ್ನು ಮುಂದುವರಿಸಿದ್ದು, ಈ ವರ್ಷದಲ್ಲಿ ಇಲ್ಲಿಯವರೆಗೆ ೧೩೮ ಪ್ರಕರಣಗಳು ದಾಖಲಾಗಿವೆ.

೨೦೨೫ನೇ ಸಾಲಿನಲ್ಲಿ ಪೆಡ್ಲರ್ ಮತ್ತು ಸೇವನೆ ಮಾಡಿದ ಪ್ರಕರಣಗಳೂ ಸೇರಿದಂತೆ ಒಟ್ಟು ೧೫೩ ಪ್ರಕರಣಗಳು ದಾಖಲಾಗಿದ್ದವು. ಆದರೆ ಈ ಬಾರಿ ೩ ತಿಂಗಳುಗಳಲ್ಲಿಯೇ ಜಿಲ್ಲೆಯ ವಿವಿಧೆಡೆ ಒಟ್ಟು ೧೩೮ ಪ್ರಕರಣಗಳು ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದು, ಹಲವರನ್ನು ಬಂಧಿಸಲಾಗಿದೆ. ಆ ಪೈಕಿ ೧೧೭ ಸೇವನೆ ಪ್ರಕರಣಗಳಾಗಿದ್ದು, ೨೧ ಮಾರಾಟ ಪ್ರಕರಣಗಳಾಗಿವೆ.

ಎಲ್ಲಾ ಪ್ರಕರಣಗಳಿಂದ ಒಟ್ಟು ೬ ಕೆ.ಜಿ. ೬೬೪ ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ೩೫.೬೬ ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಗಾಂಜಾ, ಎಂಡಿಎಂಎ ಸೇರಿದಂತೆ ಇತರ ಮಾದಕ ವಸ್ತುಗಳ ಬಳಕೆ, ಮಾರಾಟ, ಸರಬರಾಜಿಗೆ ಸಂಬಂಧಿಸಿದಂತೆ ಇಲಾಖೆಯ ಸಿಬ್ಬಂದಿ ಹದ್ದಿನ ಕಣ್ಣಿಟ್ಟಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಗಾಂಜಾ ಮಾರಾಟಗಾರರು, ಸೇವನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದ್ದು, ನೂರಾರು ಮಂದಿಯನ್ನು ಬಂಧಿಸಲಾಗಿದೆ. ಸ್ಥಳೀಯ ಪೆಡ್ಲರ್‌ಗಳ ಮೂಲಕ ಇದೀಗ ಮೇಲಿನ ಹಂತದ ಪೆಡ್ಲರ್‌ಗಳ ಪತ್ತೆಗೆ ಇಲಾಖೆ ಮುಂದಾಗಿದೆ. ಗಾಂಜಾ ಸೇವಿಸುವವರು, ಮಾರಾಟ ಮಾಡುವವರು,ಅವರಿಗೆ ಮಾದಕವಸ್ತುಗಳನ್ನು ಒದಗಿಸು ತ್ತಿರುವ ಜಾಲ ಅಥವಾ ವ್ಯಕ್ತಿಗಳನ್ನು ಪತ್ತೆಹಚ್ಚಲು ನಿರಂತರ ನಿಗಾವಹಿಸಲಾಗಿದೆ. ಮಾದಕ ವಸ್ತುಗಳು ಸರಬರಾಜಾಗುವ ಮೂಲವನ್ನು ಪತ್ತೆ ಹಚ್ಚಲು ಮುಂದಾಗಿದ್ದೇವೆ. ಜಿಲ್ಲೆ ಅಥವಾ ಜಿಲ್ಲೆಯ ಹೊರಭಾಗದಲ್ಲಿ ಈ ಕೆಲಸದಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ ಕ್ರಮಕೈಗೊಳ್ಳಲಾಗುತ್ತದೆ ಎಂದು ಎಸ್‌ಪಿ ಹೇಳಿದರು.

ಮಾದಕ ವಸ್ತುಗಳ ವಿರುದ್ಧ ಪೊಲೀಸ್ ಇಲಾಖೆ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಜೊತೆಗೆ ಸಾಮಾಜಿಕ ಜಾಲತಾಣಗಳ ಮೂಲಕವೂ ಯುವಸಮೂಹವನ್ನು ಎಚ್ಚರಿಸಲಾಗುತ್ತಿದೆ. ಯುವ ಸಮೂಹ ಎಚ್ಚೆತ್ತುಕೊಂಡು ಮಾದಕ ವ್ಯಸನದಿಂದ ದೂರ ಇರಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

ಆಪ್ ಅಥವಾ ೧೧೨ ಮೂಲಕ ದೂರು ನೀಡಿ: 

ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಮಾಹಿತಿ ಇದ್ದರೆ ಕೆಪಿಎಸ್ ಆಪ್ ಮೂಲಕ ಅಥವಾ ೧೧೨ ಪೊಲೀಸ್ ತುರ್ತು ದೂರವಾಣಿ ಸಂಖ್ಯೆಗೆ ಕರೆಮಾಡಿ ಮಾಹಿತಿ ನೀಡಬಹುದಾಗಿದೆ. ಮಾಹಿತಿ ನೀಡಿದವರ ವಿರವರಗಳನ್ನು ಗೌಪ್ಯವಾಗಿಡಲಾಗುತ್ತದೆ ಮತ್ತು ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ. ೧೧೨ ಮೂಲಕ ಪ್ರತಿ ದಿನ ಸರಾಸರಿ ೨೫ ರಿಂದ ೨೭ ದೂರುಗಳು ದಾಖಲಾಗುತ್ತಿವೆ. ದಾಖಲಾದ ದೂರು ಮತ್ತು ಕೈಗೊಂಡ ಕ್ರಮಗಳ ಕುರಿತು ಹಿರಿಯ ಅಽಕಾರಿಗಳು ಪ್ರತಿನಿತ್ಯ ಪರಿಶೀಲನೆ ನಡೆಸುತ್ತಿದ್ದಾರೆ. ಹೀಗಾಗಿ ಪ್ರತಿ ದೂರಿಗೂ ತ್ವರಿತ ಮತ್ತು ಸೂಕ್ತ ಪರಿಹಾರ ದೊರಕಿಸಿಕೊಡಲು ಅನುಕೂಲವಾಗುತ್ತಿದೆ  ಎಂದು ಎಸ್ಪಿ ಆರ್.ಎನ್.ಬಿಂದುಮಣಿ ಮಾಹಿತಿ ನೀಡಿದ್ದಾರೆ.

” ಮಾದಕ ವಸ್ತುಗಳ ಬಳಕೆ ಮತ್ತು ಸರಬರಾಜಿಗೆ ಸಂಬಂಧಿಸಿದಂತೆ ಈ ವರ್ಷದಲ್ಲಿ ಇಲ್ಲಿಯವರೆಗೆ ೧೩೮ ಪ್ರಕರಣಗಳು ದಾಖಲಾಗಿದ್ದು, ೬.೬ ಕೆ.ಜಿ. ಗಾಂಜಾ, ೩೫.೬೬ ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಮುಖ್ಯವಾಗಿ ಸ್ಥಳೀಯ ಪೆಡ್ಲರ್‌ಗಳಿಗೆ ಮಾದಕವಸ್ತು ಸರಬರಾಜು ಮಾಡುವವರ ಪತ್ತೆಗೆ ಆದ್ಯತೆ ನೀಡಲಾಗುತ್ತಿದೆ. ಹೊರ ಜಿಲ್ಲೆ, ಹೊರ ರಾಜ್ಯಗಳಲ್ಲಿರುವ ೨ನೇ ಹಂತದ ಪೆಡ್ಲರ್‌ಗಳನ್ನು ಪತ್ತೆ ಹಚ್ಚುವ ಮೂಲಕ ಇನ್ನಷ್ಟು ಪರಿಣಾಮಕಾರಿಯಾಗಿ ಮಾದಕವಸ್ತು ತಡೆಗೆ ಕ್ರಮ ವಹಿಸಲಾಗುವುದು.”

 -ಆರ್.ಎನ್.ಬಿಂದುಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ 

 

 

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

15 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

15 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

22 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

22 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

22 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

22 hours ago