Mysore
21
clear sky

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

ಓದುಗರ ಪತ್ರ: ಕನ್ನಡದಲ್ಲಿ ರೈಲ್ವೆ ನೇಮಕಾತಿ ಪರೀಕ್ಷೆ ಬರೆಯಲು ಅವಕಾಶ

ಓದುಗರ ಪತ್ರ

ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆ ದಾವಣಗೆರೆ ಸಂಸದೆಯಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, ಕನ್ನಡದಲ್ಲಿ ರೈಲ್ವೆ ನೇಮಕಾತಿ ಪರೀಕ್ಷೆಗೆ ಅವಕಾಶ ಮಾಡಿಕೊಡಬೇಕು ಎಂಬ ಒತ್ತಾಯಕ್ಕೆ ಉತ್ತರಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ವಿವಿಧ ಹುದ್ದೆಗಳ ನೇಮಕಾತಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ೧೫ ಭಾಷೆಗಳಲ್ಲಿ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದರಿಂದ ಕನ್ನಡಿಗರ ಹಲವಾರು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಹದಿನೈದು ಭಾಷೆಗಳ ಪೈಕಿ ಯಾವುದಾದರೂ ಒಂದು ಪರೀಕ್ಷಾ ಮಾಧ್ಯಮವನ್ನು ಆಯ್ಕೆ ಮಾಡಿಕೊಳ್ಳಬೇಕು, ಅಭ್ಯರ್ಥಿಗಳು ಆಯ್ಕೆ ಮಾಡಿದ ಭಾಷೆಯಲ್ಲಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಶ್ನೆಗಳನ್ನು ನೀಡಲಾಗುತ್ತದೆ ಎಂದು ಹೇಳಿರುವುದು ಸಮಂಜಸವಾಗಿದೆ.

– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

Tags:
error: Content is protected !!