Andolana originals

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್

ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ 

ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ ಬೆಳೆಯುವ ಪ್ರದೇಶಗಳಾದ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕುಗಳಲ್ಲಿ ಭತ್ತದ ನಾಟಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಇದೀಗ ೩೦ರಿಂದ ೪೦ ದಿನಗಳಾಗಿರುವ ಪೈರಿಗೆ ಬೆಂಕಿ ರೋಗ ಹಾಗೂ ಎಲೆ ಸುರುಳಿ ಹುಳುವಿನ ಬಾಧೆ ಕಾಣಿಸಿಕೊಂಡಿರುವುದು ರೈತರಲ್ಲಿ ಆತಂಕ ಮೂಡಿಸಿದೆ.

ವಿವಿಧ ಗ್ರಾಮಗಳ ಗದ್ದೆಗಳಲ್ಲಿ ರೋಗ ಮತ್ತು ಕೀಟದ ಬಾಧೆ ಕಂಡುಬಂದ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳ ತಂಡ ರೈತರ ತಾಕುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ರೈತರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಕೃಷಿ ವಿಜ್ಞಾನ ಕೇಂದ್ರ ಸಲಹೆ ನೀಡಿದೆ.

ಬೆಂಕಿ ರೋಗದ ಆರಂಭಿಕ ಹಂತದಲ್ಲಿ ಭತ್ತದ ಎಲೆಗಳ ಮೇಲೆ ಸಣ್ಣ ಕಂದು ಬಣ್ಣದ ಚುಕ್ಕೆಗಳು ಕಾಣಿಸಿಕೊಳ್ಳುತ್ತವೆ. ಕ್ರಮೇಣ ಚುಕ್ಕೆಗಳು ವಿಸ್ತರಿಸಿ ಕದಿರಿನಾಕಾರದ ತುದಿಗಳನ್ನು ಪಡೆಯುತ್ತವೆ. ಚುಕ್ಕೆಗಳ ಮಧ್ಯಭಾಗ ಬೂದಿ ಬಣ್ಣಕ್ಕೆ ತಿರುಗಿ ಸುತ್ತಲೂ ಕಂದು ಬಣ್ಣ ಕಾಣಿಸಿಕೊಳ್ಳುತ್ತದೆ. ನಂತರ ಚುಕ್ಕೆಗಳು ಒಂದಕ್ಕೊಂದು ಸೇರಿಕೊಂಡು ಎಲೆ ಸುಟ್ಟುಹೋದಂತೆ ಕಾಣುತ್ತದೆ. ರೋಗ ತೀವ್ರಗೊಂಡರೆ ಬೆಳೆಯ ಬೆಳವಣಿಗೆ ಹಾಗೂ ಇಳುವರಿ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ.

ಬೆಂಕಿ ರೋಗ ನಿಯಂತ್ರಣಕ್ಕೆ ಭತ್ತಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಯೂರಿಯಾ ಬಳಸುವುದನ್ನು ತಪ್ಪಿಸಬೇಕೆಂದು ಕೃಷಿ ಇಲಾಖೆ ಸೂಚಿಸಿದೆ. ರೋಗದ ಬಾಧೆ ಕಂಡುಬಂದಲ್ಲಿ ಶಿಫಾರಸು ಮಾಡಿರುವ ಪ್ರಮಾಣದಲ್ಲಿ ಟ್ರೈಪ್ಲೊಕ್ಸಿಸ್ಟ್ರೋಬಿನ್ + ಟೆಬುಕೋನಜೋಲ್, ಟ್ರೈಸೈಕ್ಲಜೋಲ್ ಅಥವಾ ಅಜಾಕ್ಸಿಸ್ಟ್ರೋಬಿನ್ + ಡೈಫೆನ್‌ಕೋನಜೋಲ್ ಒಳಗೊಂಡ ಶಿಲೀಂಧ್ರನಾಶಕಗಳನ್ನು ಬಳಸಿ ಸಿಂಪಡಣೆ ಮಾಡುವಂತೆ ಸಲಹೆ ನೀಡಲಾಗಿದೆ.

ಎಲೆ ಸುರುಳಿ ಹುಳು ಭತ್ತದ ಎಲೆಯ ಅಂಚನ್ನು ಮಡಚಿ ಸುರುಳಿಯಂತೆ ಸುತ್ತಿಕೊಂಡು ಒಳಭಾಗದ ಹಸಿರು ಪದರವನ್ನು ಕೆರೆದು ತಿನ್ನುತ್ತದೆ. ಇದರಿಂದ ಪೈರು ಬಿಳಿಚಿಕೊಂಡಂತೆ ಕಾಣುತ್ತದೆ. ಬಾಧೆ ತೀವ್ರವಾದರೆ ಬೆಳವಣಿಗೆ ಕುಂಠಿತವಾಗಿ ತೆನೆ ಬರುವುದರ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ.

ಮೋಡ ಕವಿದ ವಾತಾವರಣ, ತುಂತುರು ಮಳೆ ಹಾಗೂ ಬಿಟ್ಟು ಬಿಟ್ಟು ಬರುವ ಬಿಸಿಲು-ಮಳೆಯ ವಾತಾವರಣದಲ್ಲಿ ಈ ಕೀಟದ ಬಾಧೆ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ರೈತರು ಗದ್ದೆಯ ಬದುಗಳಲ್ಲಿರುವ ಕಳೆಗಳನ್ನು ತೆರವುಗೊಳಿಸಿ ಸ್ವಚ್ಛವಾಗಿಟ್ಟುಕೊಳ್ಳಬೇಕು. ಶಿಫಾರಸು ಮಾಡಿದ ಪ್ರಮಾಣದಲ್ಲೇ ಸಾರಜನಕ ಗೊಬ್ಬರ ಬಳಸಬೇಕು. ಕೀಟದ ಬಾಧೆ ಕಂಡುಬಂದಲ್ಲಿ ಇಂಡಾಕ್ಸಿಕಾರ್ಬ್ ಅಥವಾ ಫ್ಲ್ಯೂಬೆಂಡಮೈಡ್ ಅನ್ನು ಶಿಫಾರಸು ಮಾಡಿದ ಪ್ರಮಾಣದಲ್ಲಿ ಸಿಂಪಡಿಸಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ.

” ಬೆಂಕಿ ರೋಗ ನಿಯಂತ್ರಣಕ್ಕೆ ಸಲಹೆ ಭತ್ತಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಯೂರಿಯಾ ರಸಗೊಬ್ಬರ ಬಳಸುವುದನ್ನು ತಪ್ಪಿಸಿ, ಶಿಫಾರಸು ಮಾಡಿದ ಪ್ರಮಾಣದಲ್ಲೇ ಬಳಕೆ ಮಾಡಬೇಕು. ರೋಗದ ಬಾಧೆ ಕಂಡುಬಂದಲ್ಲಿ ಟ್ರೈಪ್ಲೊಕ್ಸಿಸ್ಟ್ರೋಬಿನ್+ ಟೆಬುಕೋನಜೋಲ್ ೦.೫ ಗ್ರಾಂ, ಟ್ರೈಸೈಕ್ಲಜೋಲ್ ೦.೬ ಗ್ರಾಂ ಅಥವಾ ಅಜಾಕ್ಸಿಸ್ಟ್ರೋಬಿನ್ + ಡೈಫೆನ್‌ಕೋನಜೋಲ್ ೧ ಮಿ.ಲಿ. ಅನ್ನು ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಶಿಲೀಂಧ್ರನಾಶಕದೊಂದಿಗೆ ಅಂಟು ದ್ರಾವಣ ಸೇರಿಸಿ ಸಿಂಪಡಿಸುವುದು ಸೂಕ್ತ.”

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

2 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

2 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

2 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

2 hours ago

ಸಕ್ಕರೆ ನಾಡಿನಲ್ಲಿ ಬರದಿಂದ ಕಂಗಾಲಾದ ರೈತರು

ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…

2 hours ago

ದಸರಾ ಆಹಾರ ಮೇಳ: 100 ಮಳಿಗೆಗೆ 587 ಅರ್ಜಿ!

ಕೇಶವ ಎಂ. ರಾಜ್ಯದ ೩೦ ಜಿಲ್ಲೆಗಳಿಂದಲೂ ಅರ್ಜಿ ಸಲ್ಲಿಕೆ; ಲಾಟರಿ ಎತ್ತುವ ಪ್ರಕ್ರಿಯೆಯಲ್ಲೂ ಪಾರದರ್ಶಕತೆ ಇಲ್ಲ; ಉದ್ಯಮಿಗಳ ಆಕ್ಷೇಪ ಮೈಸೂರು:…

2 hours ago