ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ಪಟ್ಟಣದ ಮೂಲಕ ಹಾದು ಹೋಗಿರುವ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಕರ್ನಾಟಕ ಬ್ಯಾಂಕ್, ಕೆನರಾ ಬ್ಯಾಂಕ್ ಹಾಗೂ ಕೆಲವು -ಟ್‌ಪಾತ್ ಹೋಟೆಲ್‌ಗಳ ಎದುರು ವಾಹನ ಸವಾರರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿದ್ದ ಕಾರಣ ಸಂಚಾರ ಸಮಸ್ಯೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಗಣೇಶ್ ಪ್ರಸಾದ್ ಪೊಲೀಸರಿಗೆ ವಾಹನ ನಿಲುಗಡೆ ನಿಯಂತ್ರಿಸಲು ಸೂಚನೆ ನೀಡಿದ್ದರು.
ಬಳಿಕ ಎಚ್ಚೆತ್ತ ಪೊಲೀಸರು ಬ್ಯಾಂಕ್ ಮುಂಭಾಗ ವಾಹನ ನಿಲುಗಡೆ ನಿಯಂತ್ರಿಸಲು ಬ್ಯಾರಿಕೇಡ್ ಅಳವಡಿಸಿದ್ದಾರೆ. ಆದರೆ, ಅದಕ್ಕೆ ಹಗ್ಗ ಕಟ್ಟಿದ್ದು, ಪಾದಚಾರಿ ಮಾರ್ಗದಲ್ಲಿ ಸಂಚರಿಸುವ ಹಿರಿಯ ನಾಗರಿಕರಿಗೆ ಸಮಸ್ಯೆಯಾಗಿದೆ. ಬ್ಯಾರಿಕೇಡ್‌ಗೆ ಎಲ್‌ಇಡಿ ರಿಪ್ಲೆಕ್ಟರ್ ಹಾಕದ ಕಾರಣ ರಾತ್ರಿ ವೇಳೆ ಅಪಘಾತ ಸಂಭವಿಸುವ ಸಾಧ್ಯತೆಗಳಿವೆ. ಇದರ ಬದಲು ನೋ ಪಾರ್ಕಿಂಗ್ ಫಲಕ ಅಳವಡಿಸಿ, ಆ ಸ್ಥಳದಲ್ಲಿ ವಾಹನ ನಿಲ್ಲಿಸುವ ಸವಾರರಿಗೆ ದಂಡ ವಿಽಸಿದಾಗ ಮಾತ್ರ ಸಂಚಾರ ದಟ್ಟಣೆ ನಿಯಂತ್ರಿಸಲು ಸಾಧ್ಯ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ಇತ್ತ ಪಾದಚಾರಿಗಳು ಓಡಾಡದ ಹಾಗೆ ಅಂಗಡಿ ಮುಂಗಟ್ಟುಗಳು, ಹೋಟೆಲ್‌ಗಳವರು, ರಸ್ತೆ ಬದಿ ವ್ಯಾಪಾರಿಗಳು ವ್ಯಾಪಾರ ಮಾಡುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಪಾದಚಾರಿ ಮಾರ್ಗದಲ್ಲಿ ವಾಹನಗಳು ಮತ್ತು ವ್ಯಾಪಾರದ ಗಾಡಿಗಳು ನಿಲ್ಲುವುದರಿಂದ ಪಾದಚಾರಿಗಳು ರಸ್ತೆಯಲ್ಲಿ ನಡೆದುಕೊಂಡು ಹೋಗಬೇಕಾಗಿದೆ. ಈಗಲಾದರೂ ಪೊಲೀಸ್ ಇಲಾಖೆ ಹಾಗೂ ಪುರಸಭೆ ಆಡಳಿತ ಎಚ್ಚೆತ್ತು ವಾಹನ ನಿಲುಗಡೆ ಸಮಸ್ಯೆಗೆ ಪರಿಹಾರ ನೀಡಬೇಕಿದೆ.
” ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ವಾಹನ ನಿಲ್ಲಿಸುವವರಿಗೆ ದಂಡ ಹಾಕದೆ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ. ಆದರೆ ಅದಕ್ಕೆ ಎಲ್‌ಇಡಿ ಸ್ಟಿಕ್ಕರ್ ಹಾಕದೆ ಹಗ್ಗ ಕಟ್ಟಿದ್ದಾರೆ. ಇದರಿಂದ ಪಾದಚಾರಿಗಳಿಗೆ ಓಡಾಡಲು ಸ್ಥಳವಿಲ್ಲದಂತಾಗಿದೆ. ಹಿರಿಯ ನಾಗರಿಕರು ಹಗ್ಗ ದಾಟಿ ಓಡಾಡಲು ಪರದಾಡಬೇಕಿದೆ. ನೋ ಪಾರ್ಕಿಂಗ್ -ಲಕ ಅಳವಡಿಸಿ, ನಿಯಮ ಉಲ್ಲಂಸುವವರಿಗೆ ದಂಡ ಹಾಕಬೇಕಿದೆ.”
-ವೆಂಕಟೇಶ್, ಪಟ್ಟಣ ನಿವಾಸಿ
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…