Andolana originals

ಟಿಎಪಿಸಿಎಂಎಸ್ ಚುನಾವಣೆಗೆ ಪಕ್ಷಗಳಿಂದ ಭರ್ಜರಿ ಸಿದ್ಧತೆ

ಭೇರ್ಯ ಮಹೇಶ್

ಕೆ.ಆರ್.ನಗರ: ಜು.೨೬ರಂದು ಚುನಾವಣೆ; ನಾಮಪತ್ರ ಸಲ್ಲಿಕೆ ಆರಂಭ 

ಕೆ.ಆರ್.ನಗರ: ತಾಲ್ಲೂಕು ಕೃಷಿ ಉತ್ಪನ್ನಗಳ ಸಹಕಾರ ಮಾರಾಟ ಸಂಘದ ೧೨ ನಿರ್ದೇಶಕ ಸ್ಥಾನಗಳಿಗೆ ಜುಲೈ ೨೬ ರಂದು ಚುನಾವಣೆ ನಡೆಯಲಿದ್ದು, ಭಾನುವಾರದಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ.

ನಾಮಪತ್ರ ಸಲ್ಲಿಕೆಗೆ ಜುಲೈ ೧೮ರ ಶನಿವಾರ ಕಡೆಯ ದಿನವಾಗಿದ್ದು, ಜುಲೈ ೧೯ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜುಲೈ ೨೦ರ ಸೋಮವಾರ ಮಧ್ಯಾಹ್ನ ೩ ಗಂಟೆಯೊಳಗೆ ನಾಮಪತ್ರಗಳನ್ನು ವಾಪಸ್ ಪಡೆಯಬಹುದಾಗಿದೆ. ಜುಲೈ ೨೬ರ ಭಾನುವಾರ ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೪ ಗಂಟೆಯವರೆಗೆ ಪಟ್ಟಣದ ಟಿಎಪಿಸಿ ಎಂಎಸ್ ಆವರಣದಲ್ಲಿ ಚುನಾವಣೆ ನಡೆಯಲಿದೆ.

ತಾಲ್ಲೂಕಿನ ಟಿಎಪಿಸಿಎಂಎಸ್ ೧೨ ನಿರ್ದೇಶಕ ಸ್ಥಾನಗಳ ಪೈಕಿ ಎ ತರಗತಿಯ ೫ ನಿರ್ದೇಶಕ ಸ್ಥಾನಗಳಿಗೆ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳ ೨೧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಡೆಲಿಗೇಟ್ ಆಗಿ ಆಯ್ಕೆ ಗೊಂಡವರು ಮತದಾನ ಮಾಡಲಿದ್ದಾರೆ.

೨೪ ಸಹಕಾರ ಸಂಘಗಳಿದ್ದು, ಈ ಪೈಕಿ ೨೧ ಸಹಕಾರ ಸಂಘಗಳು ಮಾತ್ರ ಟಿಎಪಿಸಿಎಂಎಸ್ ಸಹಕಾರ ಸಂಘಕ್ಕೆ ಮತದಾನ ಮಾಡುವ ಹಕ್ಕನ್ನು ಪಡೆದುಕೊಂಡಿವೆ. ಈ ಪೈಕಿ ಭೇರ್ಯ, ಸಾಲಿಗ್ರಾಮ, ಅಂಕನಹಳ್ಳಿ ಗ್ರಾಮಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತದಾನದಿಂದ ವಂಚಿತಗೊಂಡಿವೆ. ಟಿಎಪಿಸಿಎಂಎಸ್ ಸಂಘದಲ್ಲಿ ಇದುವರೆಗೂ ಈ ಗ್ರಾಮಗಳು ಯಾವುದೇ ವ್ಯವಹಾರದ ವಹಿ ವಾಟು ನಡೆಸಿಲ್ಲ. ಆದ್ದರಿಂದ ಮತದಾನದ ಹಕ್ಕನ್ನು ಹೊಂದಿಲ್ಲ.

ಬಿ ತರಗತಿಗೆ ೨,೦೪೯ ಅರ್ಹ ಮತದಾರರು ಇದ್ದು, ಈ ಪೈಕಿ ೭ ನಿರ್ದೇಶಕ ಸ್ಥಾನಗಳಲ್ಲಿ ಸಾಮಾನ್ಯ ಕ್ಷೇತ್ರಕ್ಕೆ ಒಂದು ಸ್ಥಾನ, ಹಿಂದುಳಿದ ಎ ಪ್ರವರ್ಗ(ಅ) ಕ್ಷೇತ್ರಕ್ಕೆ ಒಂದು ಸ್ಥಾನ, ಹಿಂದುಳಿದ ಬಿ ಪ್ರವರ್ಗ (ಬ) ಕ್ಷೇತ್ರಕ್ಕೆ ಒಂದು ಸ್ಥಾನ, ಪರಿಶಿಷ್ಟ ಜಾತಿಗೆ ಒಂದು ಸ್ಥಾನ, ಪರಿಶಿಷ್ಟ ಪಂಗಡಕ್ಕೆ ಒಂದು ಸ್ಥಾನ ಹಾಗೂ ಮಹಿಳೆಯರಿಗೆ ಎರಡು ಸ್ಥಾನಗಳ ಮೀಸಲಾತಿ ಘೋಷಣೆ ಮಾಡಲಾಗಿದೆ.

ಪಕ್ಷಗಳಿಗೆ ಪ್ರತಿಷ್ಠೆಯ ಕಣ: 

ಟಿಎಪಿಸಿಎಂಎಸ್ ಚುನಾವಣೆಗೆ ಈಗಾಗಲೇ ಕಾಂಗ್ರೆಸ್ ಮತ್ತು ಜಾ.ದಳ ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿ ಕೊಂಡಿದ್ದು, ಇದು ಎರಡೂ ಪಕ್ಷಗಳಿಗೂ ಪ್ರತಿಷ್ಠೆಯ ಚುನಾವಣೆಯಾಗಿದೆ. ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ಹಲವು ಸುತ್ತಿನ ಸಭೆ ನಡೆಸಿದ್ದು, ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಹಂಪಾಪುರ ಪ್ರಶಾಂತ್ ಜೈನ್ ಅವರು ಬಿ ತರಗತಿಯ ಸಾಮಾನ್ಯ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

56 mins ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

2 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

2 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

2 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

3 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

6 hours ago