Andolana originals

ಸೌಹಾರ್ದತೆಯಿಂದ ಇರುತ್ತೇವೆ: ಶಾಂತಿ ಸಭೆಯಲ್ಲಿ ಎರಡೂ ಕೋಮಿನವರ ಭರವಸೆ

ನಾಗಮಂಗಲ: ಪಟ್ಟಣದಲ್ಲಿ ಶಾಂತಿಯುತವಾಗಿ ಜೀವನ ನಡೆಸಿಕೊಂಡು ಹೋಗುವುದರೊಂದಿಗೆ ತಮ್ಮ ಗುಂಪುಗಳ ಯುವಕರಿಗೆ ಸರಿಯಾದ ಮಾರ್ಗದರ್ಶನ ನೀಡುತ್ತೇವೆ ಎಂದು ಎರಡೂ ಸಮುದಾಯಗಳ ಹಲವು ನಾಯಕರು, ಮುಖಂಡರು ಸಚಿವರಿಗೆ ಭರವಸೆ ನೀಡಿದರು.

ಪಟ್ಟಣದ ಜಯಮ್ಮ ಕೃಷ್ಣಪ್ಪ ಸಮುದಾಯ ಭನವದಲ್ಲಿ ಶನಿವಾರ ಜಿಲ್ಲಾಡಳಿತ ಆಯೋಜಿಸಿದ್ದ ಸಾರ್ವಜನಿಕ ಶಾಂತಿ ಸಭೆಯಲ್ಲಿ ಎರಡೂ ಸಮುದಾಯದವರು ಪರಸ್ಪರ ಹೊಂದಾಣಿಕೆಯಿಂದ ಹೋಗುವುದಲ್ಲದೆ, ಇನ್ನು ಮುಂದೆ ಪರಸ್ಪರ ಸಹಬಾಳ್ವೆ ಮೂಲಕ ಜೀವನ ಸಾಗಿಸುವುದಾಗಿ ಹೇಳಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತು ವಾರಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿ, ನಾಗಮಂಗಲ ಸೌಹಾರ್ದತೆಗೆ ಹೆಸರಾಗಿದೆ. ಈಗ ನಡೆದಿರುವುದು ಆಕಸ್ಮಿಕ ಘಟನೆ. ಇದನ್ನು ಮರೆತು ಎಲ್ಲರೂ ಶಾಂತಿಯಿಂದ ಇರಬೇಕು ಎಂದು ಮನವಿ ಮಾಡಿದರು.

ಶಾಂತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ ಅವರು, ಬುಧವಾರ ರಾತ್ರಿ ಪಟ್ಟಣದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ನಡೆದ ಗಲಭೆಗೆ ಸಂಬಂಽಸಿದಂತೆ ಹಲವರನ್ನು ಪೊಲೀಸರು ಬಂಽಸಿದ್ದು, ಗಲಭೆಯಲ್ಲಿ ಭಾಗಿಯಾಗದ ಅಮಾಯಕರನ್ನು ಚಾರ್ಜ್‌ಶೀಟ್‌ನಿಂದ ಕೈಬಿಡಲಾಗುವುದು ಎಂದು ತಿಳಿಸಿದರು. ಶಾಂತಿ ಸಭೆಯಲ್ಲಿ ಹಿಂದೂ-ಮುಸ್ಲಿಮರು ಅಣ್ಣ-ತಮ್ಮಂದಿರಂತೆ ಕುಳಿತಿದ್ದರು. ಈ ಕ್ಷಣದಿಂದ ನಾವೆಲ್ಲ ಒಗ್ಗಟ್ಟಾಗಿರುತ್ತೇವೆ ಎಂದಿದ್ದಾರೆ. ಗಣಪತಿ ಹಬ್ಬವನ್ನೂ ಮಾಡು ತ್ತೇವೆ, ಮುಸ್ಲಿಂ ಹಬ್ಬಗಳಿಗೂ ಸಹಕಾರ ಕೇಳು ತ್ತೇವೆ ಎಂದು ಮುಸ್ಲಿಮರು ಹೇಳಿದ್ದಾರೆ ಎಂದರು. ಸರ್ಕಾರದಿಂದ ಪರಿಹಾರ: ಗಲಭೆಯಲ್ಲಿ ನಷ್ಕಕ್ಕೊಳಗಾದವರಿಗೆ ಪರಿಹಾರ, ಅಮಾಯ ಕರ ಬಿಡುಗಡೆಗೆ ಮನವಿ ಮಾಡಿದ್ದಾರೆ. ಸರ್ಕಾರದಿಂದ ಪರಿಹಾರ ಕೊಡಿಸಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು.

ಒಂದು ಬಾರಿ ಬಂಧನವಾದರೆ ಜಾಮೀನು ಪಡೆಯಲೇಬೇಕು. ಅಮಾಯಕರೆಂದು ಖಚಿತವಾದರೆ ಜಾರ್ಜ್‌ಶೀಟ್‌ನಿಂದ ಅವರನ್ನು ಕೈಬಿಡುತ್ತೇವೆ. ಗುಂಪು ಘರ್ಷಣೆಗಳಾದಾಗ ಕೆಲವರನ್ನು ವಶಕ್ಕೆ ಪಡೆಯಲಾಗುತ್ತದೆ. ಸಿಸಿ ಕ್ಯಾಮೆರಾದ ದೃಶ್ಯಾವಳಿಯನ್ನು ನೋಡಿಯೋ ಅಥವಾ ಗುಂಪಲ್ಲಿದ್ದರು ಎನ್ನುವ ಕಾರಣಕ್ಕೋ ಬಂಽಸಿರುತ್ತಾರೆ. ಅಮಾಯಕರಿದ್ದರೆ ಖಂಡಿತವಾಗಿ ಜಾರ್ಜ್‌ಶೀಟ್ ವೇಳೆ ಅವರನ್ನು ಕೈಬಿಡುತ್ತೇವೆ ಎಂದರು.

ಈ ವಿಚಾರ ಪ್ರಸ್ತಾಪ ಬೇಡ: ಸಭೆಯಲ್ಲಿ ಸಾರ್ವಜನಿಕರ ಸಲಹೆಗಳನ್ನು ಸ್ವೀಕರಿಸಿದ್ದೇವೆ. ಸೋಮವಾರ ಮುಸ್ಲಿಮರ ಈದ್‌ಮಿಲಾದ್ ಹಬ್ಬವಿರುವುದರಿಂದ ಗಣಪತಿ ವಿಸರ್ಜನೆ ಮಾಡುವುದು ಬೇಡ ಎಂದು ತಿಳಿಸಿದ್ದೇವೆ. ನಾಗಮಂಗಲದಲ್ಲಿ ನಡೆದ ಘಟನೆಯನ್ನು ನಂಬಲು ಸಾಧ್ಯವಾಗುತ್ತಿಲ್ಲ, ರಾಜಕಾರಣಿಗಳು, ಸಂಘಟನೆಗಳು ಈ ವಿಚಾರವನ್ನು ಇನ್ನುಮುಂದೆ ಪ್ರಸ್ತಾಪ ಮಾಡುವುದನ್ನು ನಿಲ್ಲಿಸಬೇಕೆಂದು ಮನವಿ ಮಾಡಿದರು.

ಗಲಭೆ ಸಂಬಂಧ ವಿಶೇಷ ತನಿಖೆ: ಬಿಜೆಪಿ, ಜಾ. ದಳ ಹಾಗೂ ಕಾಂಗ್ರೆಸ್‌ನಲ್ಲಿ ಸ್ನೇಹಿತರಿದ್ದಾರೆ. ನಮ್ಮೆಲ್ಲರ ಉದ್ದೇಶ ಕರ್ನಾಟಕ ರಾಜ್ಯವು ಶಾಂತಿಯಾಗಿರಬೇಕು. ಜನರು ನೆಮ್ಮದಿಯಿಂದ ಬದುಕಬೇಕು ಎಂಬುದಾಗಿದೆ. ನಾಗಮಂಗಲ ಯಥಾಸ್ಥಿತಿಗೆ ಬಂದಿದ್ದು, ಈ ಘಟನೆ ಹಿಂದೆ ಯಾರ ಕೈವಾಡವಿದೆ ಎಂದು ತಿಳಿಯಲು ವಿಶೇಷ ತನಿಖೆ ನಡೆಸಲಾಗುವುದು ಎಂದರು. ನಷ್ಟ ಪ್ರಮಾಣ ವರದಿ ಸಿದ್ಧ ಗಲಭೆಯಿಂದಾಗಿರುವ ನಷ್ಟ ಪ್ರಮಾಣ ವರದಿ ಸಿದ್ಧವಾಗಲಿದೆ. ಅದನ್ನು ಸರ್ಕಾರಕ್ಕೆ ಕಳುಹಿಸಿ ಪರಿಹಾರಕ್ಕೆ ಕ್ರಮವಹಿಸಲಾಗುವುದು. ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುವುದಿಲ್ಲ ಎಂದು ಸಚಿವರು ಭರವಸೆ ನೀಡಿದರು.

ಎಚ್‌ಡಿಕೆಗೆ ಅಭಿನಂದನೆ: ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿಕೆ ಏನೇ ಇದ್ದರೂ ನೊಂದವರಿಗೆ ಪರಿಹಾರ ಕೊಟ್ಟಿದ್ದಾರೆ, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯ ಸರ್ಕಾರದಿಂದಲೂ ಪರಿಹಾರ ಕೊಡಲಾಗುವುದು. ಈ ಸಮಯದಲ್ಲಿ ರಾಜಕೀಯ ಬೇಡ. ಬಿಜೆಪಿ ಸತ್ಯಶೋಧನಾ ಸಮಿತಿ ವರದಿಯನ್ನು ಕೊಡಲಿ. ನಾಗಮಂಗಲದಲ್ಲಿ ಮತ್ತೆ ಶಾಂತಿ ಸ್ಥಾಪನೆ ಆಗಬೇಕು. ಈ ಘಟನೆ ಇಲ್ಲಿಗೆ ನಿಲ್ಲಲು ಮಾಧ್ಯಮದವರ ಸಹಕಾರ ಬೇಕು. – ಎನ್. ಚಲುವರಾಯಸ್ವಾಮಿ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು

andolana

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

19 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

19 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

1 day ago