ವಿದ್ಯುತ್ ಕಣ್ಣಾಮುಚ್ಚಾಲೆಗೆ ವಿದ್ಯಾರ್ಥಿಗಳು ಕಂಗಾಲು; ಕುಡಿಯುವ ನೀರಿಗೂ ಹಾಹಾಕಾರ
ಕೃಷ್ಣ ಸಿದ್ದಾಪುರ
ಸಿದ್ದಾಪುರ: ನಿರಂತರ ವಿದ್ಯುತ್ ಲೋಡ್ ಶೆಡ್ಡಿಂಗ್‌ನಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದು, ವಿದ್ಯುತ್ ಕಡಿತದಿಂದ ಪರೀಕ್ಷಾ ಸಿದ್ಧತೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕರಿ ನೆರಳು ಆವರಿಸಿದೆ.
ಸಕಾಲದಲ್ಲಿ ಮಳೆ ಬಾರದೆ ಇರುವುದರಿಂದ ರೈತರು ತೋಟಗಳಿಗೆ ಹನಿ ನೀರಾವರಿ ಮೊರೆ ಹೋಗಿದ್ದು, ವಿದ್ಯುತ್ ಬೇಡಿಕೆಯೂ ಹೆಚ್ಚಾಗು ತ್ತಿದೆ. ಆ ಮೂಲಕ ಓವರ್ ಲೋಡ್ ಆಗುತ್ತಿರು ವುದರಿಂದ ಲೋಡ್ ಶೆಡ್ಡಿಂಗ್ ಅನಿವಾರ್ಯವಾಗಿದೆ. ಇದರಿಂದಾಗಿ ಸಿದ್ದಾಪುರ ಸುತ್ತಮುತ್ತ ಲಿನ ಪ್ರದೇಶಗಳಲ್ಲಿ ಸಮಸ್ಯೆ ಉಂಟಾಗಿದೆ. ವಿದ್ಯುತ್ ಕಡಿತದಿಂದಾಗಿ ಕುಡಿಯುವ ನೀರು ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿದೆ. ಸರಿಯಾದ ಸಮಯದಲ್ಲಿ ನೀರು ಪೂರೈಕೆ ಮಾಡಲು ಸಾಧ್ಯವಾಗದಿರುವುದರಿಂದ ಸಾರ್ವಜನಿಕರು ವಿದ್ಯುತ್ ಇಲಾಖೆಗೆ ಹಿಡಿಶಾಪ ಹಾಕುವಂತಾಗಿದೆ. ಕೆಲಸ ಮುಗಿಸಿ ಬರುವ ಕಾರ್ಮಿಕರು ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ವಿರಾಜಪೇಟೆ ಮಾರ್ಗವಾಗಿ ಸಿದ್ದಾಪುರ ವಿತ ರಣಾ ಕೇಂದ್ರಕ್ಕೆ ವಿದ್ಯುತ್ ಸರಬರಾಜಾಗುತ್ತಿದೆ. ಈ ಮಾರ್ಗದ ವಿದ್ಯುತ್ ತಂತಿಗಳು ತುಂಬಾ ಹಳೆಯ ದಾಗಿವೆ. ಜೊತೆಗೆ ಮರದ ಸಣ್ಣ ಕೊಂಬೆ ಬಿದ್ದರೂ ವಿದ್ಯುತ್ ವಿತರಣಾ ಸ್ಥಾವರದಲ್ಲಿ ಬೆಂಕಿ ಹೊತ್ತಿ ಕೊಳ್ಳುತ್ತಿದೆ. ಇತ್ತೀಚೆಗೆ ಇಂತಹ ಅನಾಹು ತದಿಂದ ಐಮಂಗಲದಲ್ಲಿ ವಯರ್ ಸುಟ್ಟು ಹೋಗಿದ್ದು, ದುರಸ್ತಿ ಕೆಲಸಕ್ಕೆ ಕೆಪಿಟಿಸಿಎಲ್‌ನಿಂದ ಅನುಮತಿ ಸಿಗಲು ತಡವಾದ ಕಾರಣ, ದುರಸ್ತಿಗೊಳಿಸಲು ತಡವಾ ಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಇಲ್ಲಿನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೫ ಎಂಬಿ ಟ್ರಾನ್ಸ್‌ಫಾರ್ಮರ್ ಕಾರ್ಯನಿರ್ವ ಹಿಸುತ್ತಿದ್ದು, ಲೋಡ್‌ಶೆಡ್ಡಿಂಗ್ ಹೇರುವ ಮೂಲಕ ಸ್ವಲ್ಪ ಮಟ್ಟಿಗೆ ಸಮಸ್ಯೆಯನ್ನು ನಿಂಯತ್ರಿಸಲಾಗುತ್ತಿದೆ. ಮತ್ತೊಂದು ೫ ಎಂಬಿ ಟ್ರಾನ್ಸ್‌ಫಾರ್ಮ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿ ಇದ್ದು, ೪೫ರಿಂದ ೫೦ ದಿನಗಳಲ್ಲಿ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ. ಇದರಿಂದ ತಾತ್ಕಾಲಿಕ ಪರಿಹಾರ ದೊರೆಯಬಹುದೆಂದು ನಿರೀಕ್ಷಿಸಲಾಗಿದೆ.
ಸಿದ್ದಾಪುರ ವ್ಯಾಪ್ತಿಯಲ್ಲಿ ವಿದ್ಯುತ್ ಕಡಿತದಿಂದ ಸಮಸ್ಯೆಯಾಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ೬೬ ಕೆ. ವಿ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಯಾದಲ್ಲಿ ಇಲ್ಲಿನ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಲಭಿಸಲಿದೆ. ಈಗಾಗಲೇ ಟಾಟಾ ಸಂಸ್ಥೆ ೨ ಎಕರೆ ಜಾಗವನ್ನು ಪಾಲಿಬೆಟ್ಟ ರಸ್ತೆ ಸಮೀಪ ಇಲಾಖೆಗೆ ನೀಡಿದೆ. ಇದೀಗ ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ. ಆ ಬಳಿಕ ಸಮಸ್ಯೆ ನಿವಾರಣೆಯಾಗಲಿದೆ. ತಾತ್ಕಾಲಿಕ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. -ಸುರೇಶ್, ಸಹಾಯಕ ಅಭಿಯಂತರರು, ಸೆಸ್ಕ್
ಸಿದ್ದಾಪುರ ವ್ಯಾಪ್ತಿಯಲ್ಲಿ ನಿರಂತರವಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಇದರಿಂದ ಪ್ರತಿಯೊಂದು ಕೆಲಸಕ್ಕೂ ಸಮಸ್ಯೆಯುಂಟಾಗುತ್ತಿದೆ. ಈಗ ಪರೀಕ್ಷೆಯ ಸಮಯವಾಗಿದ್ದು, ಈ ಸಂದರ್ಭದಲ್ಲಿ ವಿದ್ಯುತ್ ಕಡಿತದಿಂದ ಮಕ್ಕಳ ವಿದ್ಯಾಭ್ಯಾಸಕ್ಕೂ ಸಮಸ್ಯೆ ಉಂಟಾಗುತ್ತಿದೆ. ಆದ್ದರಿಂದ ಇಲಾಖೆ ಗಂಭೀರವಾಗಿ ಪರಿಗಣಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. –ಸಿರಾಜ್, ಸ್ಥಳೀಯ ನಿವಾಸಿ, ಸಿದ್ದಾಪುರ
ಸಿಬ್ಬಂದಿ ಕೊರತೆ. . !
ವಿದ್ಯುತ್ ಇಲಾಖೆಯಲ್ಲೂ ಸಿಬ್ಬಂದಿ ಕೊರತೆಯಿಂದ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಶೇ. ೩೫ರಷ್ಟು ಸಿಬ್ಬಂದಿ ಮಾತ್ರ ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮಳೆಗಾಲದಲ್ಲಿ ವಿದ್ಯುತ್ ಕಂಬಗಳು ಮುರಿದು ಬೀಳುತ್ತವೆ. ಸಿಬ್ಬಂದಿ ಕೊರತೆಯಿಂದ ಪ್ರತಿಯೊಂದನ್ನೂ ನಿಭಾಯಿಸುವುದು ಕಷ್ಟ ಸಾಧ್ಯವಾಗಿದೆ. ಗುಡ್ಡಗಾಡು ಪ್ರದೇಶವಾದ ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಇಲಾಖೆಯಲ್ಲಿ ಕಾರ್ಯನಿರ್ವಹಿಸಲು ಸಿಬ್ಬಂದಿ ಸಿಗುತ್ತಿಲ್ಲ ಎನ್ನಲಾಗಿದೆ. ಮಳೆಗಾಲದಲ್ಲಿ ತಾತ್ಕಾಲಿಕ ಸಿಬ್ಬಂದಿ ನೇಮಕದಿಂದ ಸಮಸ್ಯೆ ಬಗೆಹರಿದರೂ ಬೇಸಿಗೆಯಲ್ಲಿ ಸಕಾಲದಲ್ಲಿ ದುರಸ್ತಿ ಕಾರ್ಯ ನಡೆಸಲು ಸಮಸ್ಯೆಯುಂಟಾಗುತ್ತಿದೆ.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…