Andolana originals

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು ಎಕರೆ ದ್ರಾಕ್ಷಿ ತೋಟ ಹಾಗೂ ಚೆಂಡುಮಲ್ಲಿಗೆ ತೋಟವನ್ನು ವೀಕ್ಷಣೆ ಮಾಡಲು ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ತೋಟದಲ್ಲಿ ವಿವಿಧ ಜಾತಿಗಳ ಹಣ್ಣಿನ ಗಿಡಗಳು, ದ್ರಾಕ್ಷಿ ತೋಟ, ಚೆಂಡುಮಲ್ಲಿಗೆ ಇದ್ದು, ಜನರ ಅಕರ್ಷಣೆಯಾಗಿದೆ. ಅಲ್ಲದೆ ಹಸುವಿನ ಫಾರಂ ನಿರ್ಮಾಣ ಮಾಡುತ್ತಿದ್ದು, ಪ್ರವಾಸಿಗರಿಗೆ ಉತ್ತಮ ವಾತಾವರಣ ಒದಗಿಸುವ ಉದ್ದೇಶವಿದೆ ಎಂದು ಫಾರಂ ಮಾಲೀಕ ಅಶ್ರಫ್ ತಿಳಿಸಿದರು.

ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಫೋಟೋ, ಸೆಲಿಗೆ ಮುಗಿಬಿದ್ದಿದ್ದು ರೀಲ್ಸ್ ಮಾಡಲು ಆಗಮಿಸುತ್ತಿದ್ದಾರೆ. ನೂರಾರು ವಾಹನಗಳಲ್ಲಿ ಜನರು ಬರುವುದರಿಂದ ಪ್ರವೇಶ ಶುಲ್ಕದ ಮೂಲಕವೇ ಸಾವಿರಾರು ರೂ. ಆದಾಯ ಗಳಿಸುತ್ತಿದ್ದಾರೆ.

ಸ್ಥಳೀಯರಿಗೆ ಉದ್ಯೋಗ ಸೃಷ್ಟಿ:  ನಮ್ಮ ತೋಟಕ್ಕೆ ಸಾವಿರಾರು ಪ್ರವಾಸಿಗರು ಬರುತ್ತಿದ್ದು, ತೋಟದ ಕೆಲಸಕ್ಕೆ ಸ್ಥಳೀಯ ಕೆಲಸಗಾರರನ್ನು ಬಳಸಿಕೊಂಡಿದ್ದೇವೆ. ಅವರಿಗೆ ಉದ್ಯೋಗ ಸಿಕ್ಕಿದೆ. ಅಲ್ಲದೆ ಐಸ್ ಕ್ರೀಂ, ಹಣ್ಣಿನ ವ್ಯಾಪಾರ,ಎಳನೀರು ಸೇರಿದಂತೆ ಎಲ್ಲಾ ರೀತಿಯ ಮಾರಾಟ ಮಾಡಲು ಉಚಿತವಾಗಿ ಅವಕಾಶ ನೀಡಿದ್ದು, ಇದರಿಂದ ಸಣ್ಣ ಪ್ರಮಾಣದ ಸ್ಥಳೀಯ ವ್ಯಾಪಾರಸ್ಥರಿಗೆ ಅನುಕೂಲವಾಗಿದೆ. ತೋಟದ ಒಳಗೆ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದು ಬರುವ ಪ್ರವಾಸಿಗಳು ತೋಟ ನೋಡಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಅಶ್ರಫ್, ಫಾರಂ ಮಾಲೀಕ

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

15 mins ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

1 hour ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

2 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

8 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

15 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

15 hours ago