Andolana originals

2 ತಿಂಗಳಿಂದ ಆಡಳಿತಾಧಿಕಾರಿಯಿಲ್ಲದೆ ಜನರ ಅಲೆದಾಟ

ಮಂಜು ಕೋಟೆ

ಕೋಟೆ ಪುರಸಭೆಯಲ್ಲಿ ಇ-ಸ್ವತ್ತು ಸಿಗದೆ ಸಮಸ್ಯೆ; ವಾರ್ಡುಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಹೈರಾಣಾದ ಜನತೆ

ಎಚ್.ಡಿ.ಕೋಟೆ: ಪುರಸಭೆಯಲ್ಲಿ ಎರಡು ತಿಂಗಳುಗಳಿಂದ ಆಡಳಿತಾಧಿಕಾರಿಗಳು ಇಲ್ಲದೆ ಸಾರ್ವಜನಿಕರ ಮತ್ತು ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯದೆ ಜನರು ಪ್ರತಿನಿತ್ಯ ಕೆಲಸ ಕಾರ್ಯಗಳಿಗಾಗಿ ಅಲೆದಾಡು ವಂತಾಗಿದೆ.

ತಾಲ್ಲೂಕಿನ ಕೇಂದ್ರ ಸ್ಥಾನವಾದ ಪಟ್ಟಣದ ಪುರಸಭೆ ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯದೇ ಇರುವುದರಿಂದ ಜನಸಾಮಾನ್ಯರು ಅಧಿಕಾರಿಗಳ ಕಾರ್ಯವೈಖರಿಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಜನಪ್ರತಿನಿಧಿಗಳು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಒಂದು ರೀತಿಯ ಸಮಸ್ಯೆಗಳಿದ್ದರೆ, ಈಗ ಅಧಿಕಾರಿಗಳ ಆಡಳಿತದಲ್ಲಿ ಮತ್ತೊಂದು ರೀತಿಯ ಸಮಸ್ಯೆಗಳು ಎದುರಾಗಿರುವುದು ವಿಪರ್ಯಾಸವಾಗಿದೆ.

ಇಲ್ಲಿನ ಪುರಸಭೆಯ ಸದಸ್ಯರುಗಳ ಅವಧಿ ಮುಗಿದು ೨ ತಿಂಗಳಾ ದರೂ ಹುಣಸೂರಿನ ಎಸಿ ಅವರು ಆಡಳಿತ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿಲ್ಲ. ಜನಸಾ ಮಾನ್ಯರು ಇ-ಸ್ವತ್ತು ಪಡೆಯಲು ಸಾಧ್ಯವಾಗಿಲ್ಲ. ಸಾರ್ವಜನಿಕರ ಕೆಲಸ ಗಳಿಗೆ ಸಂಬಂಧಪಟ್ಟ ದಾಖಲಾತಿಗಳ ಕಡತಗಳು ಅಽಕಾರಿಗಳ ಚೇಂಬರ್‌ಗಳಲ್ಲಿ ಸಂಗ್ರಹವಾಗಿವೆ. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೀದಿ ದೀಪಗಳ ನಿರ್ವಹಣೆ ಸಮರ್ಪಕವಾಗಿಲ್ಲದೆ ಕಗ್ಗತ್ತಲಿನಿಂದ ಕೂಡಿದೆ.

ಅಲ್ಲದೆ, ಪ್ರತಿ ರಸ್ತೆಯಲ್ಲೂ ಬೀದಿ ನಾಯಿಗಳ ಹಾವಳಿಂದಾಗಿ ಶಾಲಾ ಮಕ್ಕಳು, ವೃದ್ಧರು ನಿವಾಸಿಗಳು ಓಡಾಡಲು ಸಾಧ್ಯವಾಗದಂತಾಗಿದೆ. ಸ್ಟೇಡಿಯಂ ಬಡಾವಣೆಯಲ್ಲಿ ಚರಂಡಿಯಲ್ಲಿ ನೀರು ಹೋಗದೆ ರಸ್ತೆಗಳಲ್ಲಿ ಕೊಳಚೆ ನೀರು ಸಂಗ್ರಹವಾಗಿ ಕೆರೆಯಂತಾಗಿದೆ.

” ತಾಂತ್ರಿಕ ದೋಷದಿಂದ ೨ ತಿಂಗಳಿನಿಂದ ಇ-ಸ್ವತ್ತು ನೀಡಲು ಸಾಧ್ಯವಾಗುತ್ತಿರಲಿಲ್ಲ. ಈಗ ಸರಿಯಾಗುತ್ತಿದೆ. ಆಡಳಿತಾಧಿಕಾರಿಗಳು ಕಳೆದ ವಾರ ಅಧಿಕಾರ ಸ್ವೀಕರಿಸಿದ್ದು, ಶೀಘ್ರದಲ್ಲೇ ಕಚೇರಿಗೆ ಬರುವುದಾಗಿ ತಿಳಿಸಿದ್ದಾರೆ. ಅಮೃತ್ ಯೋಜನೆಯಡಿ ಪಟ್ಟಣದಲ್ಲಿ ಕಾಮಗಾರಿಯನ್ನು ವಾಟರ್ ಬೋರ್ಡ್‌ನವರು ಸಮರ್ಪಕವಾಗಿ ನಿರ್ವಹಿಸಬೇಕಾಗಿದೆ.”

-ಸುರೇಶ್, ಮುಖ್ಯಾಧಿಕಾರಿ, ಪುರಸಭೆ

” ಪಟ್ಟಣದ ಪುರಸಭೆಯ ಆಡಳಿತ, ಕೆಲಸ ಕಾರ್ಯಗಳು ಸಂಪೂರ್ಣವಾಗಿ ಕುಸಿದಿವೆ. ಜನರಿಗೆ ಇ-ಸ್ವತ್ತು ಸಿಗದೆ ಪರದಾಡುತ್ತಿದ್ದಾರೆ. ಅಮೃತ್ ಯೋಜನೆಯಡಿ ಶುದ್ಧ ಕುಡಿಯುವ ನೀರಿನ ೩೨ ಕೋಟಿ ರೂ. ವೆಚ್ಚದ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ನಮ್ಮ ಅವಧಿಯ ೨ ಕೋಟಿ ರೂ. ವೆಚ್ಚದ ಕಾಮಗಾರಿಗೆ ಆರ್ಡರ್ ಕೂಡ ಸಿಕ್ಕಿಲ್ಲ. ಪುರಸಭೆಯಲ್ಲಿ  ಅಧಿಕಾರ ನಡೆಸಿದ ನಮ್ಮಂತಂಹವರಿಗೆ ನೋವು ಉಂಟಾಗುತ್ತಿದೆ.”

-ಶಿವಮ್ಮ ಚಾಕಹಳ್ಳಿ ಕೃಷ್ಣ, ಮಾಜಿ ಅಧ್ಯಕ್ಷರು, ಪುರಸಭೆ 

 

 

ಆಂದೋಲನ ಡೆಸ್ಕ್

Recent Posts

ಅದ್ಧೂರಿಯಾಗಿ ನೆರವೇರಿದ ನಂಜನಗೂಡಿನ ಗೌತಮ ಪಂಚಮಹಾರಥೋತ್ಸವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಹಸ್ರಾರು ಮಂದಿ ಭಕ್ತರ ಸಮ್ಮುಖದಲ್ಲಿ ಗೌತಮ ಪಂಚಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಇಂದು…

2 seconds ago

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

3 hours ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

3 hours ago

‘ಟ್ರಾನ್ಸ್ ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ಆತುರದಲ್ಲಿ ಹೇರಲಾದ ಕ್ರಮ’

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…

3 hours ago

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

3 hours ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

3 hours ago