ಮಂಜು ಕೋಟೆ
ಕೋಟೆ ಪುರಸಭೆಯಲ್ಲಿ ಇ-ಸ್ವತ್ತು ಸಿಗದೆ ಸಮಸ್ಯೆ; ವಾರ್ಡುಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಹೈರಾಣಾದ ಜನತೆ
ಎಚ್.ಡಿ.ಕೋಟೆ: ಪುರಸಭೆಯಲ್ಲಿ ಎರಡು ತಿಂಗಳುಗಳಿಂದ ಆಡಳಿತಾಧಿಕಾರಿಗಳು ಇಲ್ಲದೆ ಸಾರ್ವಜನಿಕರ ಮತ್ತು ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯದೆ ಜನರು ಪ್ರತಿನಿತ್ಯ ಕೆಲಸ ಕಾರ್ಯಗಳಿಗಾಗಿ ಅಲೆದಾಡು ವಂತಾಗಿದೆ.
ತಾಲ್ಲೂಕಿನ ಕೇಂದ್ರ ಸ್ಥಾನವಾದ ಪಟ್ಟಣದ ಪುರಸಭೆ ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯದೇ ಇರುವುದರಿಂದ ಜನಸಾಮಾನ್ಯರು ಅಧಿಕಾರಿಗಳ ಕಾರ್ಯವೈಖರಿಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಜನಪ್ರತಿನಿಧಿಗಳು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಒಂದು ರೀತಿಯ ಸಮಸ್ಯೆಗಳಿದ್ದರೆ, ಈಗ ಅಧಿಕಾರಿಗಳ ಆಡಳಿತದಲ್ಲಿ ಮತ್ತೊಂದು ರೀತಿಯ ಸಮಸ್ಯೆಗಳು ಎದುರಾಗಿರುವುದು ವಿಪರ್ಯಾಸವಾಗಿದೆ.
ಇಲ್ಲಿನ ಪುರಸಭೆಯ ಸದಸ್ಯರುಗಳ ಅವಧಿ ಮುಗಿದು ೨ ತಿಂಗಳಾ ದರೂ ಹುಣಸೂರಿನ ಎಸಿ ಅವರು ಆಡಳಿತ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿಲ್ಲ. ಜನಸಾ ಮಾನ್ಯರು ಇ-ಸ್ವತ್ತು ಪಡೆಯಲು ಸಾಧ್ಯವಾಗಿಲ್ಲ. ಸಾರ್ವಜನಿಕರ ಕೆಲಸ ಗಳಿಗೆ ಸಂಬಂಧಪಟ್ಟ ದಾಖಲಾತಿಗಳ ಕಡತಗಳು ಅಽಕಾರಿಗಳ ಚೇಂಬರ್‌ಗಳಲ್ಲಿ ಸಂಗ್ರಹವಾಗಿವೆ. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೀದಿ ದೀಪಗಳ ನಿರ್ವಹಣೆ ಸಮರ್ಪಕವಾಗಿಲ್ಲದೆ ಕಗ್ಗತ್ತಲಿನಿಂದ ಕೂಡಿದೆ.
ಅಲ್ಲದೆ, ಪ್ರತಿ ರಸ್ತೆಯಲ್ಲೂ ಬೀದಿ ನಾಯಿಗಳ ಹಾವಳಿಂದಾಗಿ ಶಾಲಾ ಮಕ್ಕಳು, ವೃದ್ಧರು ನಿವಾಸಿಗಳು ಓಡಾಡಲು ಸಾಧ್ಯವಾಗದಂತಾಗಿದೆ. ಸ್ಟೇಡಿಯಂ ಬಡಾವಣೆಯಲ್ಲಿ ಚರಂಡಿಯಲ್ಲಿ ನೀರು ಹೋಗದೆ ರಸ್ತೆಗಳಲ್ಲಿ ಕೊಳಚೆ ನೀರು ಸಂಗ್ರಹವಾಗಿ ಕೆರೆಯಂತಾಗಿದೆ.
” ತಾಂತ್ರಿಕ ದೋಷದಿಂದ ೨ ತಿಂಗಳಿನಿಂದ ಇ-ಸ್ವತ್ತು ನೀಡಲು ಸಾಧ್ಯವಾಗುತ್ತಿರಲಿಲ್ಲ. ಈಗ ಸರಿಯಾಗುತ್ತಿದೆ. ಆಡಳಿತಾಧಿಕಾರಿಗಳು ಕಳೆದ ವಾರ ಅಧಿಕಾರ ಸ್ವೀಕರಿಸಿದ್ದು, ಶೀಘ್ರದಲ್ಲೇ ಕಚೇರಿಗೆ ಬರುವುದಾಗಿ ತಿಳಿಸಿದ್ದಾರೆ. ಅಮೃತ್ ಯೋಜನೆಯಡಿ ಪಟ್ಟಣದಲ್ಲಿ ಕಾಮಗಾರಿಯನ್ನು ವಾಟರ್ ಬೋರ್ಡ್‌ನವರು ಸಮರ್ಪಕವಾಗಿ ನಿರ್ವಹಿಸಬೇಕಾಗಿದೆ.”
-ಸುರೇಶ್, ಮುಖ್ಯಾಧಿಕಾರಿ, ಪುರಸಭೆ
” ಪಟ್ಟಣದ ಪುರಸಭೆಯ ಆಡಳಿತ, ಕೆಲಸ ಕಾರ್ಯಗಳು ಸಂಪೂರ್ಣವಾಗಿ ಕುಸಿದಿವೆ. ಜನರಿಗೆ ಇ-ಸ್ವತ್ತು ಸಿಗದೆ ಪರದಾಡುತ್ತಿದ್ದಾರೆ. ಅಮೃತ್ ಯೋಜನೆಯಡಿ ಶುದ್ಧ ಕುಡಿಯುವ ನೀರಿನ ೩೨ ಕೋಟಿ ರೂ. ವೆಚ್ಚದ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ನಮ್ಮ ಅವಧಿಯ ೨ ಕೋಟಿ ರೂ. ವೆಚ್ಚದ ಕಾಮಗಾರಿಗೆ ಆರ್ಡರ್ ಕೂಡ ಸಿಕ್ಕಿಲ್ಲ. ಪುರಸಭೆಯಲ್ಲಿ ಅಧಿಕಾರ ನಡೆಸಿದ ನಮ್ಮಂತಂಹವರಿಗೆ ನೋವು ಉಂಟಾಗುತ್ತಿದೆ.”
-ಶಿವಮ್ಮ ಚಾಕಹಳ್ಳಿ ಕೃಷ್ಣ, ಮಾಜಿ ಅಧ್ಯಕ್ಷರು, ಪುರಸಭೆ
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…