ಮಂಡ್ಯ: ಹಿಂದಿ ದಿವಸ ಹೇರಿಕೆ, ಹಿಂದಿ ದಬ್ಬಾಳಿಕೆಯನ್ನು ಖಂಡಿಸಿ ಕದಂಬ ಸೈನ್ಯ ವತಿಯಿಂದ ಸೆ. 13 ಮತ್ತು 14ರಂದು ಜನಾಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ತಿಳಿಸಿದರು.
ನಮಗೆ ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ಸೂತ್ರ ಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಅಧಿಕಾರಿಗಳು ಹಿಂದಿ ಪರ ಕೆಲಸ ಮಾಡುತ್ತಿದ್ದಾರೆ ಎಂದು ಖಂಡಿಸಿದ ಅವರು, ಎಡ ಮತ್ತು ಬಲಪಂಥಿಯರು, ರಾಷ್ಟ್ರೀಯ ವಾದಿಗಳು ಹಿಂದಿ ಹೇರಿಕೆಗೆ ಬೆಂಬಲ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡು, ಕೇರಳ, ಆಂಧ್ರ ಪ್ರದೇಶ ರಾಜ್ಯಗಳಲ್ಲಿ ಹಿಂದಿ ಹೇರಿಕೆ ಯನ್ನು ವಿರೋಽಸುತ್ತಿದ್ದಾರೆ. ಆದರೆ, ನಮ್ಮಲ್ಲಿ ವಿರೋಽಸುತ್ತಿಲ್ಲ. ಇದರಿಂದ ಕನ್ನಡ ಭಾಷೆಗೆ ದೊಡ್ಡ ಅಪಾಯವಿದೆ ಎಂದು ಎಚ್ಚರಿಸಿದರು. ಕೇಂದ್ರ ಸರ್ಕಾರ, ರೈಲ್ವೆ, ವಿಮಾನ, ಬ್ಯಾಂಕುಗಳು ಸೇರಿದಂತೆ ಎಲ್ಲಾ ಕಡೆ ಹಿಂದಿ ಭಾಷಿಗರಿಗೆ ಶೇ. ೮೦ರಷ್ಟು ಉದ್ಯೋಗ ನೀಡಲಾಗುತ್ತಿದೆ. ಕನ್ನಡ ನಾಡಿನಲ್ಲಿ ಕನ್ನಡಿಗರನ್ನು ವಂಚಿಸುತ್ತಿ ದ್ದರೂ, ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ ವಹಿಸಿದೆ ಎಂದು ದೂರಿದರು.
ಸೆ. 13 ಮತ್ತು 14ರಂದು ವಿಜಯ ಪುರ, ಬಾಗಲಕೋಟೆ ಸೇರಿ ದಂತೆ ವಿವಿಧೆಡೆ ಕದಂಬ ಸೈನ್ಯದ ವತಿಯಿಂದ ಜನಾಂದೋಲನ ಕಾರ್ಯಕ್ರಮ ನಡೆಸುವುದಾಗಿ ತಿಳಿಸಿದರು. ಸಂಘಟನೆಯ ರಾಜ್ಯ ಸಂಚಾಲಕ ಎಸ್. ಶಿವಕುಮಾರ್ ಮಾತನಾಡಿ, ರಾಜಕಾರಣಿಗಳಿಗೆ ಅಽಕಾರ ಮಾತ್ರ ಬೇಕಿದೆ, ಹಿಂದಿ ಹೇರಿಕೆ ವಿಚಾರದಲ್ಲಿ ಏನೂ ಮಾಡುತ್ತಿಲ್ಲ. ಬೇರೆ ಕಡೆಯಿಂದ ರಾಜ್ಯಕ್ಕೆ ಯಾರೇ ಬಂದರೂ ಅವರಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮಾಡಿಕೊಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಹೊರ ರಾಜ್ಯದವರಿಗೆ ಯಾವುದೇ ಕಾರಣಕ್ಕೂ ಪಾನ್‌ಕಾರ್ಡ್, ಆಧಾರ್ ಕಾರ್ಡ್, ರೇಷನ್‌ಕಾರ್ಡ್ ನೀಡ ಬಾರದು. ಸರೋಜಿನಿ ಮಹಿಷಿ ವರದಿಯನ್ನು ಯಥಾವತ್ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ಮಂಡ್ಯ ಜಿಲ್ಲಾ ಸಂಚಾಲಕ ಸಲ್ಮಾನ್, ರಾಮನಗರ ಜಿಲ್ಲಾ ಕಾರ್ಯದರ್ಶಿ ಚಿಕ್ಕವೆಂಕಟಪ್ಪ, ರಾಮಣ್ಣ, ಮಂಡ್ಯ ಕೃಷ್ಣ, ಚಂದ್ರಶೇಖರಯ್ಯ ಉಪಸ್ಥಿತರಿದ್ದರು.