Andolana originals

ಸೆ. 13, 14ರಂದು ಹಿಂದಿ ಹೇರಿಕೆ ವಿರುದ್ಧ ಜನಾಂದೋಲನ

ಮಂಡ್ಯ: ಹಿಂದಿ ದಿವಸ ಹೇರಿಕೆ, ಹಿಂದಿ ದಬ್ಬಾಳಿಕೆಯನ್ನು ಖಂಡಿಸಿ ಕದಂಬ ಸೈನ್ಯ ವತಿಯಿಂದ ಸೆ. 13 ಮತ್ತು 14ರಂದು ಜನಾಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ತಿಳಿಸಿದರು.

ನಮಗೆ ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ಸೂತ್ರ ಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಅಧಿಕಾರಿಗಳು ಹಿಂದಿ ಪರ ಕೆಲಸ ಮಾಡುತ್ತಿದ್ದಾರೆ ಎಂದು ಖಂಡಿಸಿದ ಅವರು, ಎಡ ಮತ್ತು ಬಲಪಂಥಿಯರು, ರಾಷ್ಟ್ರೀಯ ವಾದಿಗಳು ಹಿಂದಿ ಹೇರಿಕೆಗೆ ಬೆಂಬಲ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಮಿಳುನಾಡು, ಕೇರಳ, ಆಂಧ್ರ ಪ್ರದೇಶ ರಾಜ್ಯಗಳಲ್ಲಿ ಹಿಂದಿ ಹೇರಿಕೆ ಯನ್ನು ವಿರೋಽಸುತ್ತಿದ್ದಾರೆ. ಆದರೆ, ನಮ್ಮಲ್ಲಿ ವಿರೋಽಸುತ್ತಿಲ್ಲ. ಇದರಿಂದ ಕನ್ನಡ ಭಾಷೆಗೆ ದೊಡ್ಡ ಅಪಾಯವಿದೆ ಎಂದು ಎಚ್ಚರಿಸಿದರು. ಕೇಂದ್ರ ಸರ್ಕಾರ, ರೈಲ್ವೆ, ವಿಮಾನ, ಬ್ಯಾಂಕುಗಳು ಸೇರಿದಂತೆ ಎಲ್ಲಾ ಕಡೆ ಹಿಂದಿ ಭಾಷಿಗರಿಗೆ ಶೇ. ೮೦ರಷ್ಟು ಉದ್ಯೋಗ ನೀಡಲಾಗುತ್ತಿದೆ. ಕನ್ನಡ ನಾಡಿನಲ್ಲಿ ಕನ್ನಡಿಗರನ್ನು ವಂಚಿಸುತ್ತಿ ದ್ದರೂ, ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ ವಹಿಸಿದೆ ಎಂದು ದೂರಿದರು.

ಸೆ. 13 ಮತ್ತು 14ರಂದು ವಿಜಯ ಪುರ, ಬಾಗಲಕೋಟೆ ಸೇರಿ ದಂತೆ ವಿವಿಧೆಡೆ ಕದಂಬ ಸೈನ್ಯದ ವತಿಯಿಂದ ಜನಾಂದೋಲನ ಕಾರ್ಯಕ್ರಮ ನಡೆಸುವುದಾಗಿ ತಿಳಿಸಿದರು. ಸಂಘಟನೆಯ ರಾಜ್ಯ ಸಂಚಾಲಕ ಎಸ್. ಶಿವಕುಮಾರ್ ಮಾತನಾಡಿ, ರಾಜಕಾರಣಿಗಳಿಗೆ ಅಽಕಾರ ಮಾತ್ರ ಬೇಕಿದೆ, ಹಿಂದಿ ಹೇರಿಕೆ ವಿಚಾರದಲ್ಲಿ ಏನೂ ಮಾಡುತ್ತಿಲ್ಲ. ಬೇರೆ ಕಡೆಯಿಂದ ರಾಜ್ಯಕ್ಕೆ ಯಾರೇ ಬಂದರೂ ಅವರಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮಾಡಿಕೊಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಹೊರ ರಾಜ್ಯದವರಿಗೆ ಯಾವುದೇ ಕಾರಣಕ್ಕೂ ಪಾನ್‌ಕಾರ್ಡ್, ಆಧಾರ್ ಕಾರ್ಡ್, ರೇಷನ್‌ಕಾರ್ಡ್ ನೀಡ ಬಾರದು. ಸರೋಜಿನಿ ಮಹಿಷಿ ವರದಿಯನ್ನು ಯಥಾವತ್ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ಮಂಡ್ಯ ಜಿಲ್ಲಾ ಸಂಚಾಲಕ ಸಲ್ಮಾನ್, ರಾಮನಗರ ಜಿಲ್ಲಾ ಕಾರ್ಯದರ್ಶಿ ಚಿಕ್ಕವೆಂಕಟಪ್ಪ, ರಾಮಣ್ಣ, ಮಂಡ್ಯ ಕೃಷ್ಣ, ಚಂದ್ರಶೇಖರಯ್ಯ ಉಪಸ್ಥಿತರಿದ್ದರು.

 

andolana

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago