Andolana originals

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ

ನವೀನ್‌ ಡಿಸೋಜ
ಮಡಿಕೇರಿ: ಈ ಬಾರಿಯ ದೀರ್ಘಕಾಲದ ಮಳೆ ಮತ್ತು ನಿರಂತರ ಹವಾಮಾನ ಏರುಪೇರಿನಿಂದಾಗಿ ಕಾಫಿ ಮಾತ್ರವಲ್ಲದೆ ಕೊಡಗು ಜಿಲ್ಲೆಯ ಮತ್ತೊಂದು ಪ್ರಮುಖ ತೋಟಗಾರಿಕಾ ಬೆಳೆಯಾದ ಕಾಳುಮೆಣಸಿಗೂ ಸಮಸ್ಯೆಯಾಗಿದೆ. ಉತ್ತರ ಕೊಡಗು ಭಾಗದಲ್ಲಿ ಬೆಳೆ ನಷ್ಟ ಸಂಭವಿಸಿದ್ದು, ಒಟ್ಟಾರೆ ಉತ್ಪಾದನೆಯ ಅಂದಾಜು ಶೇ.೩೦ರಷ್ಟು ಉತ್ಪಾದನೆ ಕುಸಿದಿದೆ ಎಂದು ಅಂದಾಜಿಸಲಾಗಿದೆ.

ವಿರಾಜಪೇಟೆ, ಪಾಲಿಬೆಟ್ಟ ದಕ್ಷಿಣ ಭಾಗದಲ್ಲಿ ಕಾಳುಮೆಣಸು ಬೆಳೆಗೆ ದೊಡ್ಡ ಮಟ್ಟದಲ್ಲಿ ಸಮಸ್ಯೆಯಾಗಿಲ್ಲ. ಆದರೆ, ಉತ್ತರದ ಸೋಮವಾರಪೇಟೆ, ಶನಿವಾರಸಂತೆ, ಶಾಂತಹಳ್ಳಿ, ಸೂರ್ಲಬ್ಬಿ, ಸುಂಟಿಕೊಪ್ಪ ಮುಂತಾದ ಭಾಗಗಳು ಹೆಚ್ಚು ಕಾಳುಮೆಣಸು ಬೆಳೆಯುವ ಪ್ರದೇಶಗಳಾಗಿದ್ದು, ಪ್ರತಿಕೂಲ ಹವಾಮಾನದಿಂದ ಈ ಭಾಗದ ಬೆಳೆಗಾರರಿಗೆ ನಷ್ಟ ಉಂಟಾಗಿದೆ.

ಮೇ ತಿಂಗಳಿನಿಂದಲೇ ಮಳೆ ಆರಂಭವಾದ ಹಿನ್ನೆಲೆಯಲ್ಲಿ ಕೆಲವೆಡೆ ಕಾಳುಮೆಣಸಿನ ಇಡೀ ಬಳ್ಳಿ ಕೊಳೆರೋಗಕ್ಕೆ ತುತ್ತಾಗಿ ನಾಶವಾಗಿದ್ದರೇ ಕೆಲವೆಡೆ ಮೆಣಸಿನ ಚಿಗುರು ಗೊನೆ ಕೊಳೆತು ಉದುರುತ್ತಿದೆ. ಈ ಬಾರಿಯ ಇಳುವರಿ ಕುಸಿಯಲು ಇದು ಕೂಡ ಪ್ರಮುಖ ಕಾರಣವಾಗಿದೆ. ಜಿಲ್ಲೆಯಲ್ಲಿ ಈ ಬಾರಿ ಕಾಳುಮೆಣಸು ಉತ್ಪಾದನೆಯಲ್ಲಿ ಶೇ. ೩೦ರಷ್ಟು ಕುಂಠಿತವಾಗಿದೆ ಎಂದು ಐಸಿಎಆರ್‌ನ ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಡಾ. ಎಸ್. ಜೆ ಅಂಕೇಗೌಡ ತಿಳಿಸಿದ್ದಾರೆ.

ಇದನ್ನೂ ಓದಿ:-ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಜಿಲ್ಲೆಯ ಎಲ್ಲೆಡೆ ಕಾಫಿ ತೋಟಗಳಲ್ಲಿ ಕಾಳುಮೆಣಸು ಬೆಳೆಯನ್ನು ಬೆಳೆಯಲಾಗುತ್ತಿದ್ದು, ಒಟ್ಟು ೫೯ ಸಾವಿರದ ೯೬೨ ಹೆಕ್ಟೇರ್ ಪ್ರದೇಶದಲ್ಲಿ ಕಾಳು ಮೆಣಸಿನ ಬೆಳೆಯಿದೆ. ಈ ಪೈಕಿ ವಾರ್ಷಿಕವಾಗಿ ಸರಾಸರಿ ೨೪,೬೨೪ ಮೆಟ್ರಿಕ್‌ಟನ್ ಮೆಣಸಿನ ಉತ್ಪಾದನೆ ಮಾಡಲಾಗುತ್ತಿದೆ. ಈ ಬಾರಿ ಶೇ. ೭೦ ಅಥವಾ ಅದಕ್ಕಿಂತ ಕಡಿಮೆ ಪ್ರಮಾಣದ ಉತ್ಪಾದನೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ತಡವಾಗಿ ಮರ ಸವರುವಿಕೆ (ನೆರಳು ತೆಗೆಯುವುದು) ಮಾಡಿದವರಿಗೆ ಹೆಚ್ಚು ನಷ್ಟ ಸಂಭವಿಸಿದೆ. ಕೆಲವೆಡೆ ಬಳ್ಳಿಯೇ ಸಂಪೂರ್ಣವಾಗಿ ನಾಶವಾಗಿದ್ದು, ಹೊಸದಾಗಿ ನಾಟಿ ಮಾಡುವ ಪರಿಸ್ಥಿತಿ ಎದುರಾಗಿದೆ ಎಂದು ಡಾ. ಅಂಕೇಗೌಡ ಆತಂಕ ವ್ಯಕ್ತಪಡಿಸಿದ್ದಾರೆ.

ಕಾಫಿ ತೋಟಗಳಲ್ಲಿ ನೆರಳು ತೆಗೆಯುವ ಸಮಯ ಕಾಳು ಮೆಣಸು ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಫೆಬ್ರವರಿ, ಮಾರ್ಚ್ ತಿಂಗಳಲ್ಲಿಯೇ ನೆರಳು ತೆಗೆದು ನೀರಾವರಿ ವ್ಯವಸ್ಥೆ ಮಾಡಿಕೊಂಡವರಿಗೆ ಈ ಬಾರಿ ದೊಡ್ಡ ಮಟ್ಟದ ನಷ್ಟ ಸಂಭವಿಸಿಲ್ಲ. ಆದರೆ ಏಪ್ರಿಲ್ ತಿಂಗಳಲ್ಲಿ ನೆರಳು ತೆಗೆದು ಬಿಸಿಲಿಗಾಗಿ ಕಾದವರಿಗೆ ಮೇ ತಿಂಗಳಲ್ಲಿ ಬಿಸಿಲಿಲ್ಲದಾದ ಪರಿಣಾಮ ಹೆಚ್ಚು ಸಮಸ್ಯೆ ಉಂಟಾಗಿದೆ.

ಕಾಯಿಕಟ್ಟುವ ಮೊದಲೇ ಮೆಣಸಿನ ದಾರಗಳು ಉದುರಿಹೋಗಿದ್ದು, ಈಗ ಮತ್ತೆ ಹೊಸ ದಾರಗಳು ಕಾಣಿಸಿಕೊಂಡಿವೆ. ಇಂತಹ ಕಡೆ ಈ ಸಾಲಿನಲ್ಲಿ ಬೆಳೆ ಇಲ್ಲವಾಗಿದೆ. ಹೀಗಾಗಿ ಕೆಲವು ಬೆಳೆಗಾರರು ಗಿಡಗಳನ್ನು ಸಂಪೂರ್ಣವಾಗಿ ತೆಗೆದು ಅಲ್ಪಾವಽಯ ತಳಿಗಳನ್ನು ಬೆಳೆಯುವ ಚಿಂತನೆಯಲ್ಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

4 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

4 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

5 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

5 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

5 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

6 hours ago