Andolana originals

ಪ್ರಾಸಿಕ್ಯೂಷನ್‌ಗೆ ಅನುಮತಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50:50 ಅನುಪಾತ ನಿವೇಶನ ಹಂಚಿಕೆ ಹಗರಣ

ರಾಜ್ಯಪಾಲರದು ಕಾನೂನು ಬಾಹಿರ ನಡೆ: ಸಿಎಂ
ಮೈಸೂರು ಸೇರಿದಂತೆ ಹಲವೆಡೆ ಕಾಂಗ್ರೆಸ್ ಪ್ರತಿಭಟನೆ
ಹೋರಾಟಕ್ಕೆ ಸಂದ ಜಯ ಎಂದ ಬಿಜೆಪಿ
ಮುಖ್ಯಮಂತ್ರಿ ರಾಜೀನಾಮೆಗೆ ಬಿಜೆಪಿ ನಾಯಕರ ಆಗ್ರಹ
ಸಿಎಂ ಬೆನ್ನಿಗೆ ನಿಂತ ಕಾನೂನು ಸಮರಕ್ಕೆ
ಸಚಿವರು, ಶಾಸಕರು | ಸಿದ್ದರಾಮಯ್ಯ ಸರಣಿ ಸಭೆ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಅಕ್ರಮವಾಗಿ ನಿವೇಶನ ಪಡೆದ ಆರೋಪಕ್ಕೆ ಗುರಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಕೊನೆಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.

ಸಿಎಂ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 218ರಡಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭು ಶಂಕರ್ ಅವರು ಹೊರಡಿಸಿರುವ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮುಂದಿನ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಈ ಮಧ್ಯೆ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಮತ್ತೊಂದೆಡೆ ಬಿಜೆಪಿ ನಾಯಕರು ರಾಜ್ಯಪಾಲರ ನಡೆ ಯನ್ನು ಸ್ವಾಗತಿಸಿದ್ದು, ಸಿಎಂರಾಜೀನಾಮೆಗೆ ಒತ್ತಾಯಿಸಿದ್ದಾರೆ. ರಾಜ್ಯಪಾಲರು ಸಿಎಂ ಪ್ರಾಸಿ ಕ್ಯೂಷನ್‌ ಗೆ ಅನುಮತಿ ನೀಡಿ ರುವುದು ನಮ್ಮ ಹೋರಾಟಕ್ಕೆ ಸಂದ ಜಯ ಎಂದು ಬಿಜೆಪಿ ಬಣ್ಣಿಸಿದೆ.

ಸರ್ಕಾರದ ವಿರುದ್ಧ ಬಿಜೆಪಿ ಷಡ್ಯಂತ್ರ
ಇದು ದೊಡ್ಡ ಪ್ರಮಾಣದ ಷಡ್ಯಂತ್ರ. ಚುನಾಯಿತ ಸರ್ಕಾರವನ್ನು ಕಿತ್ತು ಹಾಕುವ ಹುನ್ನಾರ. ಇದರಲ್ಲಿ ಬಿಜೆಪಿ, ಜಾ.ದಳ ಪಕ್ಷಗಳು ಕೈಜೋಡಿಸಿವೆ. ರಾಜ್ಯಪಾಲರ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿ ಕಾನೂನು ಸಮರ ನಡೆಸುತ್ತೇವೆ. ಕಾಂಗ್ರೆಸ್‌ ಹೈಕಮಾಂಡ್ ನಾಯಕರು, ಪಕ್ಷದ ಶಾಸಕರು, ಸಚಿವರು ನನ್ನ ಬೆಂಬಲ ಕಿದ್ದಾರೆ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಾನು ಕಾನೂನುಬದ್ಧವಾಗಿದ್ದೇನೆ. ಅವರು ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. -ಸಿದ್ದರಾಮಯ್ಯ, ಮುಖ್ಯಮಂತ್ರಿ

ಕಾಂಗ್ರೆಸ್ ನಾಯಕರಿಂದ ವಾಗ್ದಾಳಿ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ರಾಜ್ಯಪಾಲರಿಗೆ ನೀಡಿರುವ ದೂರಿನ ಆಧಾರದ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಒಂದು ದೂರನ್ನು ಆರ್‌ಟಿಐ ಕಾರ್ಯ ಕರ್ತ ಟಿ.ಜೆ. ಅಬ್ರಹಾಂ ನೀಡಿದ್ದರೆ, ಮತ್ತೊಂದನ್ನು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಇತ್ತೀಚೆಗೆ ಸಲ್ಲಿಸಿದ್ದಾರೆ. ಸಿದ್ದರಾಮಯ್ಯನವರು ಎಷ್ಟೇ ಸಮರ್ಥಿಸಿ ಕೊಂಡರೂ, ಕಾನೂನುಬದ್ಧವಾಗಿಯೇ ಪಡೆದಿದ್ದೇನೆ ಎಂದು ಹೇಳಿದರೂ ಕೂಡ ಮುಡಾದಿಂದ ಅವರ ಪತ್ನಿಗೆ ಹಂಚಿಕೆಯಾದ 14 ನಿವೇಶನಗಳಲ್ಲಿ ಕಾನೂನು ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಅಂದು ಬಿಎಸ್‌ವೈ ಇಂದು ಸಿದ್ದರಾಮಯ್ಯ: ರಾಜ್ಯದ ಇತಿಹಾಸದಲ್ಲೇ ಹಾಲಿ ಸಿಎಂ ವಿರುದ್ಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಅಭಯ ತನಿಖೆಗೆ ರಾಜ್ಯಪಾಲರು ಸಮ್ಮತಿಸಿದ ಎರಡನೇ ಪ್ರಕರಣ ಇದಾಗಿದೆ. ಈ ಹಿಂದೆ ಅಕ್ರಮ ಡಿ ನೋಟಿಫಿಕೇಶನ್ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ 2011ರಲ್ಲಿ ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್‌ರವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಆಗ ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತು.

ಖರ್ಗೆ ಭೇಟಿಯಾದ ಸಿಎಂ, ಡಿಸಿಎಂ
ಬೆಂಗಳೂರು: ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದು, ರಾಜಕೀಯ ಬೆಳವಣಿಗೆಗಳ ಮಾಹಿತಿ ಪಡೆದರು. ಶನಿವಾರ ಸಂಜೆ ಸದಾಶಿವನಗರದ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಚರ್ಚೆ ಮಾಡಿದರು.

ಹೈಕಮಾಂಡ್‌ ಅಭಯ
ಪ್ರಾಸಿಕ್ಯೂಷನ್ ಸಂಬಂಧ ಎಐಸಿಸಿ ನಾಯಕರು ಸಿಎಂ ಸಿದ್ದರಾಮಯ್ಯಗೆ ದೂರವಾಣಿ ಕರೆ ಮಾಡಿ ಮಾತನಾಡಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣು ಗೋಪಾಲ್, ಕರ್ನಾಟಕದ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕರೆ ಮಾಡಿದ್ದು ಸಿದ್ದರಾಮಯ್ಯಗೆ ಅಭಯ ನೀಡಿದ್ದಾರೆ. ನಿಮ್ಮ ಜತೆ ನಾವಿದ್ದೇವೆ, ಧೈರ್ಯವಾಗಿರಿ. ಕಾನೂನು ಹೋರಾಟ ನಡೆಸೋಣ ಅಂತ ಹೇಳಿದ್ದಾರೆ.

ಸಂಪುಟ ನಿರ್ಣಯ ವಿಶ್ವಾಸಾರ್ಹವಲ್ಲ: ಗೆಲ್ಲೋಟ್
ಬೆಂಗಳೂರು: ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ಕೋರಿರುವ ಅರ್ಜಿ ತಿರಸ್ಕರಿಸುವಂತೆ ಸಲಹೆ ನೀಡಲು ಆ.1ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯವು ವಿಶ್ವಾಸ ಮೂಡಿಸುವಂತಿಲ್ಲ. ಸಿಎಂ ಸಲಹೆಯಂತೆ ನೇಮಕಗೊಂಡ ಸಂಪುಟ ಸದಸ್ಯರು ನೋಟಿಸ್ ಹಿಂಪಡೆ ಯುವಂತೆ ಮತ್ತು ಅರ್ಜಿಯನ್ನು ತಿರಸ್ಕರಿಸುವಂತೆ ಸಲಹೆ ನೀಡಿ ದ್ದಾರೆ. ಇದು ವಿಶ್ವಾಸ ಮೂಡಿಸುವ ನಿರ್ಣಯವಲ್ಲ ಎಂದು ರಾಜ್ಯ ಪಾಲ ಥಾವರ್‌ ಚಂದ್ ಗೆಹೋಟ್ ಹೇಳಿದ್ದಾರೆ.

ಸರ್ಕಾರದ ಅಸ್ಥಿರತೆಗೆ ಷಡ್ಯಂತ್ರ
ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆ ಯುತ್ತಿದೆ. ಇಡೀ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ, ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಯಾವುದೇ ಒತ್ತಡಕ್ಕೆ
ಮಣಿಯುವುದಿಲ್ಲ.
-ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ

ಕಲಾಪದಲ್ಲಿ ಸ್ಪಷ್ಟನೆ ಕೊಡದ ಸಿಎಂ
ಮುಡಾ ಹಗರಣದ ವಿರುದ್ಧ ನಮ್ಮ ಪಾದ ಯಾತ್ರೆ ಹೋರಾಟ ಯಶಸ್ವಿಯಾಗಿದೆ. ಮುಡಾ ಪ್ರಕರಣದಲ್ಲಿದ್ದ ಅನುಮಾನಗಳಿಗೆ ವಿಧಾನಸಭೆಯಲ್ಲಿ ಸ್ಪಷ್ಟನೆ ಕೊಡಲು ಸಿದ್ದರಾಮಯ್ಯಗೆ ಅವಕಾಶವಿತ್ತು. ಆದರೆ ಸ್ಪಷ್ಟನೆ ಕೊಡದೆ ವಿಧಾನಸಭೆ ಕಲಾಪದಿಂದ ಓಡಿಹೋದರು. ಸಾಮಾಜಿಕ ಕಾರ್ಯಕರ್ತರು ಪ್ರಾಸಿಕ್ಯೂಷನ್‌ಗೆ ಮನವಿ ಮಾಡಿದ್ದರು. ಈಗ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ.

-ಆರ್.ಅಶೋಕ್, ಪ್ರತಿಪಕ್ಷ ನಾಯಕ

ಆಂದೋಲನ ಡೆಸ್ಕ್

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

8 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago