ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮದಲ್ಲಿ ಘಟನೆ; ಆರೋಪಿಯಿಂದ ತಪ್ಪೊಪ್ಪಿಗೆ
ಹನೂರು: ಬಡಾವಣೆಯ ಚರಂಡಿಯಲ್ಲಿನ ಹೂಳು ಮತ್ತು ಕಸ-ಕಡ್ಡಿಗಳನ್ನು ತೆರವುಗೊಳಿಸಿಲ್ಲ. ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿಲ್ಲ ಎಂದು ಆರೋಪಿಸಿ ವ್ಯಕ್ತಿಯೋರ್ವ ಗ್ರಾಮ ಪಂಚಾಯಿತಿ ಕಚೇರಿಗೆ ಮುಳ್ಳು ಹಾಕಿರುವ ಘಟನೆ ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮದಲ್ಲಿ ಜರುಗಿದೆ.
ಅಜ್ಜೀಪುರ ಗ್ರಾಮದ ನಿವಾಸಿ ಮನ್ನಾದೇಗೌಡ ಎಂಬವರು ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಮುಳ್ಳು ಹಾಕಿರುವವರು.
ಅಜ್ಜೀಪುರ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದ ವನ್ನಿಕುಲ ಕ್ಷತ್ರಿಯ ಬಡಾವಣೆಯಲ್ಲಿನ ಚರಂಡಿಗಳೆಲ್ಲ ಕಸ ಕಡ್ಡಿಗಳಿಂದ ತುಂಬಿಕೊಂಡು ಗಬ್ಬುನಾರುತ್ತಿವೆ. ಇದರಿಂದ ನೀರು ಸರಾಗವಾಗಿ ಮುಂದೆ ಹೋಗದೆ ಇರುವುದರಿಂದ ಕೊಳಚೆ ನೀರಿನಲ್ಲಿ ಸೊಳ್ಳೆಗಳು ಹಾಗೂ ಇನ್ನಿತರ ಕ್ರಿಮಿಕೀಟಗಳು ಉತ್ಪತ್ತಿಯಾಗುತ್ತಿರುವುದರಿಂದ ಈ ಭಾಗದ ಜನ ಸಾಂಕ್ರಾಮಿಕ ಭೀತಿಯಲ್ಲಿದ್ದಾರೆ. ಚರಂಡಿ ಸ್ವಚ್ಛಗೊಳಿಸುವಂತೆ ಹಾಗೂ ಗ್ರಾಮದ ಮುಖ್ಯರಸ್ತೆಯಲ್ಲಿ ಗುಂಡಿಗಳು ಬಿದ್ದಿರುವುದರಿಂದ ವಿದ್ಯಾರ್ಥಿಗಳು ಹಾಗೂ ವಯೋವೃದ್ಧರಿಗೆ ಅನುಕೂಲ ಕಲ್ಪಿಸುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಬೇಸತ್ತು ಮುಳ್ಳು ಹಾಕಿದ್ದೇನೆ ಎಂದು ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಕಚೇರಿಗೆ ಮುಳ್ಳು ಹಾಕಿರುವ ವಿಚಾರ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ೧೧೨ ಪೊಲೀಸರು ಮುಳ್ಳು ಹಾಕಿದ್ದ ವ್ಯಕ್ತಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಈ ವೇಳೆ ಪೊಲೀಸರು ನಿಮ್ಮ ಯಾವುದೇ ಸಮಸ್ಯೆಗಳಿದ್ದರೂ ಲಿಖಿತವಾಗಿ ಗ್ರಾಮ ಪಂಚಾಯಿತಿಗೆ ದೂರು ನೀಡಬೇಕು. ಅದನ್ನು ಬಿಟ್ಟು ಇಂತಹ ಕೆಲಸವನ್ನು ಮಾಡಬಾರದು. ಮತ್ತೊಮ್ಮೆ ಇದು ಮುಂದುವರಿದರೆ ನಿಮ್ಮ ವಿರುದ್ಧ ಕಾನೂನುಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಗ್ರಾಮ ಪಂಚಾಯಿತಿಯವರು ಯಾವುದೇ ದೂರು ನೀಡದೇ ಇರುವುದರಿಂದ ತಪ್ಪೊಪ್ಪಿಗೆ ಬರೆದುಕೊಟ್ಟ ನಂತರ ಪೊಲೀಸರು ವಾಪಸ್ ತೆರಳಿದ್ದಾರೆ.
” ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಒಳಪಡುವ ರಸ್ತೆ ಗುಂಡಿ ಮುಚ್ಚಲುನಮಗೆ ಅವಕಾಶವಿಲ್ಲ, ಚರಂಡಿಗಳನ್ನು ಸ್ವಚ್ಛ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ. ಪಂಚಾಯಿತಿಗೆ ಮುಳ್ಳು ಹಾಕಿರುವ ಮನ್ನಾದೇಗೌಡರವರು ಪಂಚಾಯಿತಿಗೆ ಲಿಖಿತವಾಗಿ ಯಾವುದೇ ಮನವಿ ನೀಡಿಲ್ಲ.”
ನಂದೀಶ್, ಪಿಡಿಒ, ಅಜ್ಜೀಪುರ
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…