Andolana originals

ಮಹದೇಶ್ವರ ಬೆಟ್ಟದತ್ತ ಹರಕೆ ಹೊತ್ತ ಭಕ್ತರ ಪಾದಯಾತ್ರೆ

ಮಹಾಶಿವರಾತ್ರಿ ಪ್ರಯುಕ್ತ ಪ್ರಾಧಿಕಾರದಿಂದ ಪಾದಯಾತ್ರಿಕಗಳಿಗೆ ಸಕಲ ವ್ಯವಸ್ಥೆ; ಅನೇಕರಿಂದ ಅನ್ನಸಂತರ್ಪಣೆ
ಮಹಾದೇಶ್ ಎಂ. ಗೌಡ

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮ. ಬೆಟ್ಟಕ್ಕೆ ಸಾವಿರಾರು ಜನರು ಪಾದಯಾತ್ರೆಯ ಮೂಲಕ ಆಗಮಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪಾದಯಾತ್ರೆ ಮೂಲಕ ಬರುವ ಭಕ್ತಾದಿಗಳಿಗೆ ಎಲ್ಲಾ ರೀತಿಯ ಸೌಲಭ್ಯ ಗಳನ್ನು ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ೩ ದಿನಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕನಕಪುರ, ರಾಮನಗರ, ಬಿಡದಿ, ಚನ್ನಪಟ್ಟಣ ಗ್ರಾಮದವರು ಕಾವೇರಿ ನದಿ ಸಂಗಮದ ಮೂಲಕ ಆಗಮಿಸುತ್ತಿದ್ದಾರೆ. ಇದಲ್ಲದೆ ಮಂಡ್ಯ ಜಿಲ್ಲೆಯ ವಿವಿಧ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಪಾದಯಾತ್ರೆಯ ಮೂಲಕ ಬರುತ್ತಿದ್ದಾರೆ.

ಕಳೆದ ೨ ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ಭಕ್ತಾದಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾ ಗುವ ನಿರೀಕ್ಷೆ ಇದೆ. ಹರಕೆ ಹೊತ್ತ ಭಕ್ತಾದಿಗಳು ಹಗಲು- ರಾತ್ರಿ, ಚಳಿ- ಬಿಸಿಲು ಲೆಕ್ಕಿಸದೆ ಶ್ರೀ ಕ್ಷೇತ್ರದತ್ತ ಪಾದಯಾತ್ರೆ ಬೆಳೆಸಿದ್ದಾರೆ. ಕಾವೇರಿ ನದಿ ದಾಟಿ ಬರುವ ಪಾದಯಾತ್ರಿಕರಿಗೆ ತಾಲ್ಲೂಕಿನ ಶಾಗ್ಯ ಗ್ರಾಮದ ಬಳಿ ಗ್ರಾಮಸ್ಥರು ಸರದಿಯ ರೂಪದಲ್ಲಿ ಹಣವನ್ನು ಸಂಗ್ರಹಿಸಿ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈಗಾಗಲೇ ಆಹಾರ ಪದಾರ್ಥಗಳು ಸಿದ್ಧವಾಗಿದ್ದು, ಪಾದಯಾತ್ರೆಯಲ್ಲಿ ಬರುವ ಭಕ್ತಾದಿಗಳಿಗೆ ನೆರಳಿನ ವ್ಯವಸ್ಥೆ ಮಾಡಿದ್ದಾರೆ.

೨೦ ಟ್ಯಾಂಕ್ ಅಳವಡಿಕೆ: ಬೆಟ್ಟಕ್ಕೆ ಬರುವ ಪಾದ ಯಾತ್ರಿಕರ ಅನುಕೂಲಕ್ಕಾಗಿ ತಾಳಬೆಟ್ಟದಿಂದ ಮಲೆ ಮ. ಬೆಟ್ಟದವರೆಗೆ ಸುಮಾರು ೨೦ ಕಡೆ ಒಂದು ಸಾವಿರ ಲೀಟರ್ ಸಾಮರ್ಥ್ಯದ ಮಿನಿ ಟ್ಯಾಂಕ್‌ಗಳನ್ನು ಇಡ ಲಾಗಿದ್ದು ಸಮ ರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ತಾಳಬೆಟ್ಟದಲ್ಲಿ ತಾತ್ಕಾಲಿಕ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲಾಗಿದೆ.ಐವತ್ತಕ್ಕೂ ಹೆಚ್ಚು ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲಾಗಿದೆ.

ಪಾದಯಾತ್ರೆಯ ಮೂಲಕ ಶ್ರೀ ಕ್ಷೇತ್ರಕ್ಕೆ ಬರುತ್ತಿರುವ ದೇವರ ಗುಡ್ಡರು, ಮಹದೇಶ್ವರ ಭಕ್ತರು ಕಂಸಾಳೆ ಬಾರಿಸುತ್ತಾ ಮಾದಪ್ಪನ ಮಹಿಮೆಯ ಹಾಡನ್ನು ಹಾಡುತ್ತಾ ಭಕ್ತಿ ಭಾವದಿಂದ ತೆರಳುತ್ತಿದ್ದರೆ, ಯುವಕರು ತಮಟೆ ಬಾರಿಸುತ್ತ ಅಲ್ಲಲ್ಲಿ ಕುಣಿದು ಕುಪ್ಪಳಿಸುತ್ತಾ ಸಾಗುತ್ತಿದ್ದಾರೆ.

ಮ. ಬೆಟ್ಟಕ್ಕೆ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾದಯಾತ್ರಿಕರು ಆಗಮಿಸುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಾವೇರಿ ನದಿಯ ನೀರಿನ ಪ್ರಮಾಣ ಕಡಿಮೆ ಮಾಡಲು ಡಿಸಿಎಂ ಈಗಾಗಲೇ ಸೂಚನೆ ನೀಡಿದ್ದಾರೆ.

ಕನಕಪುರ ತಹಸಿಲ್ದಾರ್ ಮಂಜುನಾಥ್ ನೇತೃತ್ವದಲ್ಲಿ ಕಂದಾಯ, ಅರಣ್ಯ, ಗ್ರಾಪಂ, ಅಗ್ನಿಶಾಮಕ, ಪೊಲೀಸ್ ಇಲಾಖೆಯವರು ಸೇರಿದಂತೆ ಇನ್ನೂರಕ್ಕೂ ಹೆಚ್ಚು ಸಿಬ್ಬಂದಿಗಳು ಕಾವೇರಿ ನದಿ ದಾಟುವ ಸ್ಥಳದಲ್ಲಿ ಅಗತ್ಯ ಬಂದೋಬಸ್ತ್ ಮಾಡಿದ್ದಾರೆ. ಎಸ್‌ಟಿಆರ್‌ಎಫ್, ಎನ್ ಡಿಆರ್ ಎಫ್ ತಂಡದ ಸಿಬ್ಬಂದಿ ಸಹ ಬೊಮ್ಮಸಂದ್ರದ ಬಳಿಯೇ ಠಿಕಾಣಿ ಹೂಡಿದ್ದಾರೆ.

ನದಿ ದಾಟಿಸುತ್ತಿರುವ ಸಿಬ್ಬಂದಿ
೨ ವರ್ಷಗಳ ಹಿಂದೆ ಬೆಟ್ಟಕ್ಕೆ ಆಗಮಿಸುತ್ತಿದ್ದ ಪಾದಯಾತ್ರಿಕರಲ್ಲಿ ನೀರಿನ ಸೆಳೆತಕ್ಕೆ ಸಿಕ್ಕಿ ೫ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಈ ಬಾರಿ ಮುಂಜಾಗ್ರತಾ ಕ್ರಮವಾಗಿ ಬೊಮ್ಮಸಂದ್ರದಿಂದ ನದಿ ಮೂಲಕ ನಡೆದುಕೊಂಡು ಬರುತ್ತಿರುವ ಪಾದಯಾತ್ರಿಕರಿಗೆ ಎಡ ಹಾಗೂ ಬಲಬದಿಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಹಗ್ಗ ಹಿಡಿದುಕೊಂಡಿದ್ದು ಮಧ್ಯದಲ್ಲಿ ಪಾದಯಾತ್ರಿಕರನ್ನು ಸುರಕ್ಷಿತವಾಗಿ ದಾಟಿಸುತ್ತಿದ್ದಾರೆ.

ಈಗಾಗಲೇ ಪಾದಯಾತ್ರಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ. ಉಯ್ಯಂಬಳ್ಳಿ ಗ್ರಾಮ ಪಂಚಾಯಿತಿ ಹಾಗೂ ಮುಖಂಡರಾದ ಜಗದೀಶ್, ಕುಮಾರ್ ಅವರ ಸಹಕಾರದಿಂದ ಏಳಗಳ್ಳಿ ಗ್ರಾಮದಲ್ಲಿ ದಾಸೋಹದ ವ್ಯವಸ್ಥೆ ಕಲ್ಪಿಸಲಾಗಿದೆ. -ರವಿ, ಗ್ರಾಪಂ ಮಾಜಿ ಅಧ್ಯಕ್ಯ

 

ಆಂದೋಲನ ಡೆಸ್ಕ್

Recent Posts

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

37 mins ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

1 hour ago

ಶಿಕ್ಷಕರ ನೇಮಕಾತಿ ಶೀಘ್ರ : ಸಿಎಂ ಭರವಸೆ

ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ…

1 hour ago

ಒಕ್ಕಲಿಗರ ಮೇಲೆ ಪ್ರೀತಿ ಪ್ರದರ್ಶನಕ್ಕೆ ಇದು ಸಕಾಲ ಎಂದು ಸಿದ್ದರಾಮಯ್ಯ ಕಾಲೆಳೆದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ…

1 hour ago

ಗಾಂಜಾ ಮಾರಾಟಕ್ಕೆ ಯತ್ನ : ಬಂಧನ

ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…

2 hours ago

ʻಮನ್‌ ಕಿ ಬಾತ್‌ʼನಲ್ಲಿ ಕರ್ನಾಟಕದ ರೈತರನ್ನು ಪ್ರಶಂಸಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…

2 hours ago