Andolana originals

ಅಂಗನವಾಡಿ ಶಿಥಿಲ ಕಟ್ಟಡದ ಪಿಲ್ಲರ್ ಕುಸಿತ

ಮಹಾದೇಶ್ ಎಂ.ಗೌಡ

ಹನೂರು: ಸ್ವಲ್ಪದರಲ್ಲೇ ಪಾರಾದ ಮಕ್ಕಳು; ಬೇರೆಡೆಗೆ ಸ್ಥಳಾಂತರ ಮಾಡುವವರೆಗೂ ಮಕ್ಕಳನ್ನು ಕಳಿಸಲ್ಲ ಎನ್ನುತ್ತಿರುವ ಪೋಷಕರು

ಹನೂರು: ತಾಲ್ಲೂಕು ಕೇಂದ್ರ ಸ್ಥಾನದ ಅಂಗನವಾಡಿ ೧ರ ಕಟ್ಟಡ ಬಳಕೆಗೆ ಯೋಗ್ಯವಿಲ್ಲದಿದ್ದರೂ ತಾತ್ಕಾಲಿಕವಾಗಿ ಪ್ರಾರಂಭಿಸಿದ ಒಂದು ವಾರದಲ್ಲಿಯೇ ಕಟ್ಟಡದ ಮುಂಭಾಗದ ಪಿಲ್ಲರ್ ಬಿದ್ದು ಸಂಭವಿಸಬಹುದಾದ ದೊಡ್ಡ ಅನಾಹುತ ಸ್ವಲ್ಪದರಲ್ಲಿಯೇ ತಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಹನೂರು ಪಟ್ಟಣದ ಅಂಗನವಾಡಿ ೧ನೇ ಕೇಂದ್ರ ಲೋಕೋಪಯೋಗಿ ಇಲಾಖೆ ವಸತಿಗೃಹದ ಆವರಣ ದಲ್ಲಿರುವ ಹಳೇ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಹತ್ತು ವರ್ಷಗಳಿಂದ ಕಾರ್ಯಾಚರಿಸುತ್ತಿದೆ. ಆದರೆ, ಈ ಕಟ್ಟಡವನ್ನು ಕಳೆದ ಜನವರಿ ತಿಂಗಳಿನಲ್ಲಿ ತಾಲ್ಲೂಕು ಅಭಿಲೇಖಾಲಯ ಕಚೇರಿಗೆ ಹಸ್ತಾಂತರ ಮಾಡಿದ ನಂತರ ಅಂಗನವಾಡಿ ಒಂದನೇ ಕೇಂದ್ರವನ್ನು ಪಟ್ಟಣದ ಸರ್ಕಾರಿ ಉನ್ನತೀಕರಿಸಿದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದ ಹಳೆಯ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿತ್ತು.

ಅಂಗನವಾಡಿ ಒಂದನೇ ಕೇಂದ್ರದಲ್ಲಿ ೨೦ ಮಕ್ಕಳು ದಾಖಲಾಗಿದ್ದು, ಪ್ರತಿದಿನ ಮಕ್ಕಳು ಎಂದಿನಂತೆ ಅಂಗನವಾಡಿ ಕೇಂದ್ರಕ್ಕೆ ಆಗಮಿಸುತ್ತಿದ್ದರು. ಬಳಕೆಗೆ ಯೋಗ್ಯವಿಲ್ಲದಿದ್ದರೂ ಸುಮಾರು ೪೦ ವರ್ಷಗಳಿಗೂ ಹಳೆಯದಾದ ಕಟ್ಟಡಕ್ಕೆ ಹಿರಿಯ ಅಧಿಕಾರಿಗಳ ಒತ್ತಡಕ್ಕೆ ಮಣಿದು ಅಂಗನವಾಡಿ ಕಾರ್ಯಕರ್ತೆ ಒಲ್ಲದ ಮನಸ್ಸಿನಿಂದಲೇ ಸ್ಥಳಾಂತರ ಮಾಡಿದ್ದರು.

ಈ ಕಟ್ಟಡವು ಸಂಪೂರ್ಣ ಬಿರುಕು ಬಿಟ್ಟಿದ್ದು, ನೆಲಕ್ಕೆ ಹಾಕಲಾಗಿದ್ದ ಗಾರೆಯೆಲ್ಲಾ ಕಿತ್ತು ಬಂದಿದೆ. ಸ್ಥಳಾಂತರವಾದ ನಂತರ ಅಂಗನವಾಡಿ ಕಾರ್ಯಕರ್ತೆ ಇಂದಿರಾ ಕ್ಯಾಂಟೀನ್ ಕಾಮಗಾರಿ ನಡೆಯುತ್ತಿದ್ದ ಗುತ್ತಿಗೆದಾರರಿಗೆ ಮನವಿ ಮಾಡಿ ಬಿರುಕು ಬಿಟ್ಟಿದ್ದ ಗೋಡೆ ಹಾಗೂ ನೆಲಹಾಸಿಗೆ ಸಿಮೆಂಟ್ ಹಾಕಿಸಿದ್ದರು.

ಆದರೆ ಕಟ್ಟಡ ಹಳೆಯದಾಗಿರುವುದರಿಂದ ೪ ದಿನಗಳ ಹಿಂದೆ ಕಟ್ಟಡದ ಮುಂಭಾಗದ ಒಂದು ಪಿಲ್ಲರ್ ಇದ್ದಕ್ಕಿದ್ದಂತೆ ಕುಸಿದಿದೆ. ಒಂದೊಮ್ಮೆ ವಿದ್ಯಾರ್ಥಿಗಳು ಮೂತ್ರ ವಿಸರ್ಜನೆಗೆ ಅಥವಾ ಆಟವಾಡುವ ಸಂದರ್ಭದಲ್ಲಿ ಬಿದ್ದು ಯಾವುದಾದರೂ ಮಕ್ಕಳಿಗೆ ಅನಾಹುತ ಸಂಭವಿಸಿದ್ದರೆ ಇದಕ್ಕೆ ಯಾರು ಹೊಣೆ ಎಂದು ಪೋಷಕರು ಪ್ರಶ್ನೆ ಮಾಡಿದ್ದಾರೆ. ಅಂಗನವಾಡಿ ಕೇಂದ್ರದ ಮುಂಭಾಗದಲ್ಲಿದ್ದ ಪಿಲ್ಲರ್ ಬಿದ್ದ ನಂತರ ಕಟ್ಟಡಕ್ಕೆ ಆಧಾರವಾಗಿ ಎರಡು ಮರದ ಬೊಂಬುಗಳನ್ನು ನಿಲ್ಲಿಸಿ, ಅಂಗನವಾಡಿ ಪ್ರಾರಂಭಿಸಿದ್ದರು.

ಆದರೆ ಅಂಗನವಾಡಿ ಕೇಂದ್ರಕ್ಕೆ ಮಕ್ಕಳನ್ನು ಕರೆ ತರುತ್ತಿದ್ದ ಪೋಷಕರು ಇಂದೋ ನಾಳೆಯೋ ಬೀಳುವ ಈ ಕಟ್ಟಡಕ್ಕೆ ನಮ್ಮ ಮಕ್ಕಳನ್ನು ಕಳುಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ ನಂತರ ಅಂಗನವಾಡಿ ಕಾರ್ಯಕರ್ತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಮಾಡಿ, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬೇರೆ ಕಟ್ಟಡ ನೀಡುವಂತೆ ಮನವಿ ಮಾಡಿದ್ದರು. ಅವರು ಕೂಡ ಬೇರೆ ಕೊಠಡಿ ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಇನ್ನೂ ಕೊಠಡಿ ವ್ಯವಸ್ಥೆ ಆಗದೆ ಇರುವುದರಿಂದ ಎರಡು ದಿನಗಳಿಂದ ಅಂಗನವಾಡಿ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ.

ತಾತ್ಕಾಲಿಕ ಅಂಗನವಾಡಿ ಕೇಂದ್ರದಲ್ಲಿ ಅವ್ಯವಸ್ಥೆ:  ಪಟ್ಟಣದ ಅಂಗನವಾಡಿ ಒಂದನೇ ಕೇಂದ್ರವನ್ನು ಸರ್ಕಾರಿ ಉನ್ನತೀಕರಿಸಿದ ಮಾದರಿ ಪ್ರಾಥಮಿಕ ಶಾಲೆಗೆ ಸ್ಥಳಾಂತರ ಮಾಡಲಾಗಿದೆ. ಆದರೆ ಇರುವ ಒಂದೇ ಕೊಠಡಿಯಲ್ಲಿ ಪಾಠ ಕಲಿಯಬೇಕು. ಅಡುಗೆ ಸಾಮಗ್ರಿಗಳನ್ನು ದಾಸ್ತಾನು ಇಟ್ಟು ಇಲ್ಲಿಯೇ ಮಧ್ಯಾಹ್ನದ ಊಟ ಸಿದ್ಧಪಡಿಸಿ ಮಕ್ಕಳಿಗೆ ವಿತರಿಸಬೇಕು. ಇದರಿಂದ ಮಕ್ಕಳಿಗೆ ಪ್ರತಿದಿನ ತೊಂದರೆಯಾಗಿದೆ.

ಸ್ವಂತ ಕಟ್ಟಡವಿಲ್ಲ:  ಹನೂರು ಪಟ್ಟಣ ವ್ಯಾಪ್ತಿಯಲ್ಲಿ ಅನೇಕ ಸರ್ಕಾರಿ ನಿವೇಶನಗಳಿದ್ದರೂ ಒಂದು ಅಂಗನವಾಡಿ ಕಟ್ಟಡಕ್ಕೆ ನಿವೇಶನ ಮಂಜೂರು ಮಾಡಿಕೊಡುವಲ್ಲಿ ಸಂಬಂಧಪಟ್ಟ ಕಂದಾಯ ಇಲಾಖೆಯವರು ವಿಫಲರಾಗಿದ್ದಾರೆ. ಪಟ್ಟಣದ ಅರಣ್ಯ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ನಿವೇಶನಗಳಿದೆ. ಈ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ನಿವೇಶನ ಮಂಜೂರು ಮಾಡಿಕೊಡಬಹುದು.

” ಹನೂರು ಪಟ್ಟಣದ ಅಂಗನವಾಡಿ ಒಂದನೇಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡಿರುವುದು ಗಮನಕ್ಕೆ ಬಂದಿಲ್ಲ,. ಈ ಕೂಡಲೇ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿ ಸೂಕ್ತ ಕ್ರಮ ವಹಿಸಲಾಗುವುದು. ಪಟ್ಟಣದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣ ಮಾಡಲು ನಿವೇಶನ ಮಂಜೂರಾದ ತಕ್ಷಣವೇ ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗುವುದು.”

ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಚಾ.ನಗರ.

” ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇಂದೋ ನಾಳೆಯೋ ಬೀಳುವ ಸ್ಥಿತಿಯಲ್ಲಿರುವ ಕಟ್ಟಡದಲ್ಲಿ ಅಂಗನವಾಡಿ ಪ್ರಾರಂಭಿಸಿದ್ದಾರೆ. ಹೀಗಾಗಿ ನಮ್ಮ ಮಕ್ಕಳ ಸುರಕ್ಷತೆ ಹಾಗೂ ಭವಿಷ್ಯದ ದೃಷ್ಟಿಯಿಂದ ಬೇರೆ ಕಟ್ಟಡಕ್ಕೆ ಸ್ಥಳಾಂತರ ಮಾಡುವವರೆಗೂ ನಮ್ಮ ಮಗುವನ್ನು ಅಂಗನವಾಡಿಗೆ ಕಳುಹಿಸುವುದಿಲ್ಲ.”

ಮಹಾದೇವಸ್ವಾಮಿ, ಪೋಷಕರು 

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

13 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago