Andolana originals

ಇಡ್ಲಿ ಮೇಲೆ ಪ್ಲಾಸ್ಟಿಕ್: ಮೈಸೂರಲ್ಲೂ ಪತ್ತೆ

59 ಪ್ರಕರಣ ಪತ್ತೆ; 8 ಮಂದಿಗೆ ದಂಡ; 51 ಮಂದಿಗೆ ನೋಟಿಸ್
ಕೆ.ಬಿ.ರಮೇಶನಾಯಕ
ಮೈಸೂರು: ಇಡ್ಲಿ ತಯಾರಿಕೆಯಲ್ಲಿ ಬಟ್ಟೆ ಬದಲು ಕ್ಯಾನ್ಸರ್‌ಕಾರಕ ಪ್ಲಾಸ್ಟಿಕ್ ಹಾಳೆಗಳನ್ನು ಬಳಸುತ್ತಿರುವುದು ಕಂಡುಬಂದಿದ್ದು, ತಪಾಸಣೆ ವೇಳೆ ಜಿಲ್ಲೆಯಲ್ಲಿ 59 ಮಂದಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದನ್ನು ಪತ್ತೆ ಹಚ್ಚಲಾಗಿದೆ.

ರಾಜ್ಯ ಸರ್ಕಾರದ ಖಡಕ್‌ ಸೂಚನೆ ಮೇರೆಗೆ ತಪಾಸಣೆಗೆ ಇಳಿದಿರುವ ಜಿಲ್ಲೆಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು, ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಹಾಳೆ ಬಳಸುತ್ತಿರುವವರಿಗೆ ಚಾಟಿ ಬೀಸಿದ್ದಾರೆ.

ಮೈಸೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ರಸ್ತೆಬದಿ ಫಾಸ್ಟ್‌ಫುಡ್‌ಗಳು ಮತ್ತು ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲಿಸಿದಾಗ 59 ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಳೆ ಬಳಸುತ್ತಿರುವುದು ಪತ್ತೆಯಾಗಿದ್ದು, ಈ ಪೈಕಿ 8 ಮಂದಿ ಮಾಲೀಕರಿಗೆ ದಂಡ ವಿಧಿಸಲಾಗಿದೆ.

ಬೆಂಗಳೂರಿನಲ್ಲಿ ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಇದರಿಂದಾಗಿ ಕ್ಯಾನ್ಸರ್ ರೋಗಕ್ಕೆ ಎಡೆ ಮಾಡಿಕೊಟ್ಟಿದೆ ಎಂದುತಜ್ಞರು ವರದಿ ನೀಡಿದ್ದ ವಿಚಾರ ಬೆಳಕಿಗೆ ಬಂದಿತ್ತು. ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಎಲ್ಲಾ ಕಡೆಗಳಲ್ಲಿ ತಪಾಸಣೆ ನಡೆಸುವಂತೆ ಆದೇಶ ನೀಡಿದ್ದರು.

ಅದರಂತೆ, ಸೋಮವಾರದಿಂದ ಶನಿವಾರದವರೆಗೆ ಮೈಸೂರು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ತಪಾಸಣೆ ನಡೆಸಿರುವ ಅಧಿಕಾರಿಗಳಿಗೆ ರಸ್ತೆಬದಿ ಫಾಸ್ಟ್ ಫುಡ್, ಇಡ್ಲಿ ತಯಾರಿಕೆಗೆ ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದು ಪತ್ತೆಯಾಗಿದೆ.

ಮೈಸೂರು ನಗರದಲ್ಲಿ ಅತಿ ಹೆಚ್ಚು ಫಾಸ್ಟ್‌ಫುಡ್‌ಗಳಲ್ಲಿ ಪ್ಲಾಸ್ಟಿಕ್ ಹಾಳೆ ಬಳಸುತ್ತಿದ್ದು, 59 ಜನರಲ್ಲಿ 8 ಮಂದಿಗೆ ಕನಿಷ್ಠ ಒಂದು ಸಾವಿರ ರೂ.ನಿಂದ ನಾಲ್ಕು ಸಾವಿರ ರೂ.ತನಕ ದಂಡ ವಿಧಿಸಲಾಗಿದೆ. 51 ಮಂದಿ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ವರದಿಗಾಗಿ ನಿರೀಕ್ಷೆ: ಹಸಿರು ಬಟಾಣಿಯಲ್ಲಿ ಕೃತಕ ಬಣ್ಣ ಬಳಸಿರುವ ಬಗ್ಗೆ ತಪಾಸಣೆ ನಡೆಸಲಾಗುತ್ತಿದ್ದು,ಮೈಸೂರಿನ ಚಾಟ್ ಸೆಂಟರ್‌ಗಳಲ್ಲಿ ಸ್ಯಾಂಪಲ್ ಪಡೆದುಕೊಂಡು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಐದು ಕಡೆಗಳಲ್ಲಿ ತಪಾಸಣೆ ಮಾಡಿ ಸಂಗ್ರಹಿಸಿರುವುದರಲ್ಲಿ ಏನಾದರೂ ಕೃತಕ ಬಣ್ಣ ಇರುವುದು ಪತ್ತೆಯಾದರೆ ತಕ್ಷಣವೇ ಅಂತಹವುಗಳನ್ನು ಸೀಜ್ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಸರಬರಾಜು ಮಾಡುವ ಮಾಲೀ ಕರ ಮೇಲೂ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

ಕಲ್ಲಂಗಡಿ ಹಣ್ಣಿನತ್ತ ಕಣ್ಣು: ಬಿಸಿಲ ಬೇಗೆಗೆ ತಂಪು ನೀಡುವ ಕಲ್ಲಂಗಡಿ ಹಣ್ಣನ್ನು ಎಲ್ಲೆಂದರಲ್ಲಿ ಮಾರಾಟ ಮಾಡಲಾಗುತ್ತಿದ್ದು, ಯಾವುದೇ ಕ್ಷಣದಲ್ಲಿ ತಪಾಸಣೆ ನಡೆಸಿ ಸ್ಯಾಂಪಲ್ ಸಂಗ್ರಹಿಸಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ಕಲ್ಲಂಗಡಿ ಹಣ್ಣು ತಪಾಸಣೆಗೆ ಸೂಚನೆ ನೀಡಿದ್ದರೂ ಮೈಸೂರಿನಲ್ಲಿ ಈ ತನಕ ಪರೀಕ್ಷೆ ಮಾಡಿಲ್ಲ. ಹಾಗಾಗಿ, ಸೋಮವಾರದ ನಂತರ ಅಲ್ಲಲ್ಲಿ ಟನ್‌ಗಟ್ಟಲೆ ಸಂಗ್ರಹ ಮಾಡಿಕೊಂಡು ಉಂಡೆ ಲೆಕ್ಕದಲ್ಲಿ ಮಾರಾಟ ಮಾಡುವ ಕಡೆಗಳಲ್ಲಿ ತಪಾಸಣೆ ಮಾಡಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಅಂಕಿತ ಅಧಿಕಾರಿ ಡಾ.ಎ.ಎನ್.ಕಾಂತರಾಜು ಹೇಳಿದರು.

ಒಂದು ವಾರದಿಂದ ಮೈಸೂರು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ 5 ಹಸಿರು ಬಟಾಣಿ ಮಾದರಿಗಳನ್ನು ಸಂಗ್ರಹಿಸಿ, ವಿಶ್ಲೇಷಣೆಗಾಗಿ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಮತ್ತು ಮುಂದಿನ ಕ್ರಮಗಳಿ ಗಾಗಿ ವರದಿಗೆ ಕಾಯುತ್ತಿದ್ದೇವೆ. ಕಲ್ಲಂಗಡಿ ಹಣ್ಣಿ ನಲ್ಲಿ ಕೃತಕ ಬಣ್ಣ ಬಳಸಿರುವ ಬಗ್ಗೆ ಸ್ಯಾಂಪಲ್ ಪಡೆಯಲು ತಪಾಸಣೆ ನಡೆಸಲಿದ್ದೇವೆ. –ಡಾ.ಎ.ಎನ್.ಕಾಂತರಾಜು, ಅಂಕಿತ ಅಧಿಕಾರಿ,
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ.

ಆಂದೋಲನ ಡೆಸ್ಕ್

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

2 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

2 hours ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

2 hours ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

2 hours ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

2 hours ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

3 hours ago