Categories: Andolana originals

ಎಂಸಿಡಿಸಿಸಿಬಿ ಆಡಳಿತ ಮಂಡಳಿಯತ್ತ ರಾಜಕಾರಣಿಗಳ ಕಣ್ಣು

ಕೆ.ಬಿ.ರಮೇಶನಾಯಕ

ಸಹಕಾರ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿರುವ ಶಾಸಕ ಅನಿಲ್ ಚಿಕ್ಕಮಾದು

ಬೆಂಬಲಿಗರಿಗೆ ನಾಮನಿರ್ದೇಶಿತ ಸದಸ್ಯ ಸ್ಥಾನಕೊಡಿಸಲು ಮಾಜಿ ಶಾಸಕರ ಯತ್ನ 

ಮೈಸೂರು: ಗ್ರಾಮೀಣ ಪ್ರದೇಶದ ಸಹಸ್ರಾರು ರೈತರಿಗೆ ಆರ್ಥಿಕವಾಗಿ ಬೆನ್ನಿಗೆ ನಿಂತಿರುವ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಚುನಾವಣೆಗೆ ಅಧಿಸೂಚನೆ ಹೊರಡಿಸಲು ದಿನಗಣನೆ ಶುರುವಾಗಿದ್ದರೆ, ಎಂಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯತ್ತ ರಾಜಕಾರಣಿಗಳ ಕಣ್ಣು ಬಿದ್ದಿದೆ.

ಕಳೆದ ಐದು ದಶಕಗಳಿಂದ ಸಹಕಾರ ಕ್ಷೇತ್ರದಲ್ಲಿ ತಮ್ಮದೇ ಆದ ಪ್ರಾಬಲ್ಯ ಹೊಂದಿರುವ ಜಿ.ಟಿ.ದೇವೇಗೌಡರ ಪುತ್ರ ಶಾಸಕ ಜಿ.ಡಿ.ಹರೀಶ್ ಗೌಡ ನಾಗಾಲೋಟವನ್ನು ತಡೆಯಲು ಕೆಲವರು ಆಂತರಿಕವಾಗಿ ಎದುರಾಳಿಗಳನ್ನು ಒಂದುಗೂಡಿಸುವ ಕೆಲಸ ಮಾಡಿದರೆ, ಹೊಸ ಮುಖಗಳು ಚುನಾವಣೆಗೆ ಸ್ಪರ್ಧಿಸಲು ಮಾನಸಿಕವಾಗಿ ಸಜ್ಜಾಗಿವೆ. ಚುನಾವಣೆಗೆ ಅಧಿಸೂಚನೆ  ಹೊರಡಿಸಿದ ಬಳಿಕ ಯಾರ್ಯಾರು ಸ್ಪರ್ಧಿಸುತ್ತಾರೆ ಎಂಬುದು ಅಧಿಕೃತವಾಗಿ ಬಹಿರಂಗವಾಗಲಿದೆ.

ಸಹಕಾರ ಕ್ಷೇತ್ರದಲ್ಲಿ ಜಿಲ್ಲಾ ಸಹಕಾರ ಬ್ಯಾಂಕ್ಗಳು ಅತ್ಯಂತ ಪ್ರಮುಖ ಪಾತ್ರವಹಿಸಿಕೊಂಡು ಬಂದಿವೆ. ಸಹಕಾರ ಕ್ಷೇತ್ರದ ಮೂಲಕವೇ ಅನೇಕ ರಾಜಕಾರಣಿಗಳು ಶಾಸಕರು, ಸಚಿವರಾಗಿ ತಮ್ಮ ಹಿಡಿತವನ್ನು ಸಾಧಿಸಿದ್ದಾರೆ. ಇದರಲ್ಲಿ ಮೈಸೂರು ಪ್ರಾಂತ್ಯದ ಜಿ.ಟಿ.ದೇವೇಗೌಡರು ತಮ್ಮ ಪ್ರಾಬಲ್ಯವನ್ನು ಇಂದಿಗೂ ಉಳಿಸಿಕೊಂಡಿದ್ದಾರೆ. ಅದೇ ರೀತಿ ಜಿ.ಡಿ.ಹರೀಶ್‌ಗೌಡ ಅವರು ಕಳೆದ ಬಾರಿ ಹುಣಸೂರು ತಾಲ್ಲೂಕಿನಿಂದ ಆಯ್ಕೆಯಾಗಿ ಐದು ವರ್ಷಗಳ ಕಾಲ ಆಡಳಿತ ನಡೆಸುವ ಜತೆಗೆ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರಾಗಿಯೂ ಆಯ್ಕೆಯಾಗಿ ಗಮನ ಸೆಳೆದಿದ್ದರು.

ಎಂಸಿಡಿಸಿಸಿ ಬ್ಯಾಂಕ್‌ನ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯನ್ನು ಜೂನ್ ೧೫ರೊಳಗೆ ನಡೆಸಬೇಕಿರುವ ಕಾರಣ ಯಾವುದೇ ಕ್ಷಣದಲ್ಲಿ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಈಗಾಗಲೇ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಚುನಾವಣಾ ಪ್ರಕ್ರಿಯೆ ಸಿದ್ಧತೆ ಆರಂಭಿಸಿದ್ದಾರೆ.

ಇದಲ್ಲದೆ ಮತದಾನದ ಹಕ್ಕನ್ನು ಹೊಂದುವುದಕ್ಕೆ ಡೆಲಿಗೇಷನ್(ಪ್ರತಿನಿಧಿ) ಆಯ್ಕೆ ಮಾಡಿ ಬ್ಯಾಂಕ್ ಮತದಾರರ ಪಟ್ಟಿಗೆ ಕಳುಹಿಸಲಾಗಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್‌ಗಳಿಂದ ಪ್ರತಿನಿಧೀಯನ್ನು ಆಯ್ಕೆ ಮಾಡು ವುದಕ್ಕಾಗಿಯೇ ದೊಡ್ಡಮಟ್ಟದಲ್ಲಿ ಲಾಬಿ ನಡೆದಿದೆ. ತಮ್ಮ ಪರವಾಗಿ ಮತಚಲಾಯಿಸುವಂತಹ ವ್ಯಕ್ತಿಗಳನ್ನೇ ಗಮನಿಸಿ ಆಯ್ಕೆ ಮಾಡಿರುವುದು ಕೂಡ ಚುನಾವಣೆ ಹೊತ್ತಲ್ಲಿ ಪರಿಣಾಮ ಬೀರುವುದಕ್ಕೆ ಸಾಧ್ಯವಾಗಿದೆ.

ಅನಿಲ್ ಚಿಕ್ಕಮಾದು ಪ್ರವೇಶ: ಸಹಕಾರ ಕ್ಷೇತ್ರದಿಂದ ದೂರ ಉಳಿದಿದ್ದ ಎಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಈ ಬಾರಿ ಚುನಾವಣೆಗೆ ಸ್ಪರ್ದಿಸಲು ಸಜ್ಜಾಗಿದ್ದಾರೆ. ಈಗಾಗಲೇ ಎಚ್.ಡಿ.ಕೋಟೆ ತಾಲ್ಲೂಕಿನ ನಾಗನಹಳ್ಳಿ ಪ್ರಾಥಮಿಕ ಸಹಕಾರ ಪತ್ತಿನ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿದ್ದು, ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಣಕ್ಕಿಳಿಯಲು ಡೆಲಿ ಗೇಷನ್ ಅರ್ಹತೆಯನ್ನು ಗಳಿಸಿದ್ದಾರೆ. ಸಹಕಾರ ಕ್ಷೇತ್ರದ ಸಚಿವರಾಗಿರುವ ಕೆ.ಎನ್.ರಾಜಣ್ಣ ಅವರು ಆತ್ಮೀಯರಾಗಿರುವ ಕಾರಣ ಮುಂದಿನ ದಿನಗಳಲ್ಲಿ ಅಫೆಕ್ಸ್ ಬ್ಯಾಂಕ್ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳನ್ನು ಗಳಿಸಲು ನೆರ ವಾಗಬಹುದು ಎನ್ನುವ ನಿರೀಕ್ಷೆಯಲ್ಲಿ ಅಖಾಡಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

ಬೆಂಬಲಿಗರಿಗೆ ಸ್ಥಾನಕೊಡಿಸಲು ಕಸರತ್ತು: ಹುಣಸೂರು ಕ್ಷೇತ್ರದಲ್ಲಿ ಹಾಲಿ ಶಾಸಕ ಜಿ.ಡಿ.ಹರೀಶ್ ಗೌಡರ ಗುಂಪನ್ನು ಸೋಲಿಸಲು ವಿಫಲವಾದ ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಚುನಾವಣೆಯ ಬಳಿಕ ತಮ್ಮ ಆಪ್ತರಿಗೆ ನಾಮನಿರ್ದೇಶಿತ ಸದಸ್ಯ ಸ್ಥಾನವನ್ನು ಕೊಡಿಸಲು ಮುಂದಾಗಿದ್ದಾರೆ. ಹುಣಸೂರು ತಾಲ್ಲೂಕಿನ ಪಿಎಸಿಸಿ ಬ್ಯಾಂಕ್‌ಗಳಲ್ಲಿ ತಮ್ಮ ಹಿಡಿತ ಸಾಽಸಲು ಎಂಸಿಡಿಸಿಸಿ ಬ್ಯಾಂಕ್‌ನಲ್ಲಿ ತಮ್ಮವರನ್ನು ಕೂರಿಸಬೇಕೆಂಬ ಚಿಂತನೆಯಲ್ಲಿ ಇರುವ ಎಚ್.ಪಿ. ಮಂಜುನಾಥ್, ಬ್ಯಾಂಕಿನ ಆಡಳಿತ ಮಂಡಳಿ ಚುನಾವಣೆ ಯಲ್ಲೂ ಬೆಂಬಲಿಗರನ್ನು ಕಣಕ್ಕಿಳಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಹನೂರು ಕ್ಷೇತ್ರದ ಮಾಜಿ ಶಾಸಕ ಆರ್. ನರೇಂದ್ರ ಅವರು ಪುನರಾಯ್ಕೆಗಾಗಿ ಸ್ಪರ್ಧಿಸುತ್ತಿದ್ದರೆ, ಚಾಮರಾಜನಗರ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಮೊದಲ ಬಾರಿಗೆ ಕಣಕ್ಕಿಳಿಯುತ್ತಿರುವುದು ಮತ್ತಷ್ಟು ರಂಗು ಪಡೆಯಲಿದೆ.

ಈಗಾಗಲೇ ಪುಟ್ಟರಂಗಶೆಟ್ಟಿ ಅವರ ಪುತ್ರಿ ಮೈಮುಲ್ ನಿರ್ದೇಶಕರಾಗಿದ್ದಾರೆ. ಉಳಿದಂತೆ ಮಾಜಿ ಶಾಸಕಿ ಸುನೀತಾ ವೀರಪ್ಪಗೌಡ, ಮುಡಾ ಮಾಜಿ ಅಧ್ಯಕ್ಷ ಸಿ.ಬಸವೇಗೌಡ, ಜಿಪಂ ಮಾಜಿ ಸದಸ್ಯ ಬಿ.ಎನ್.ಸದಾನಂದ, ಎಸ್.ಎಂ.ಕೆಂಪಣ್ಣ ಸ್ಪರ್ಧಿಸುವುದು ನಿಶ್ಚಿತವಾಗಿದೆ. ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್ ಅವರು ಕೂಡ ಈ ಬಾರಿ ತಮ್ಮ ಬಣವನ್ನು ಗೆಲ್ಲಿಸಿಕೊಳ್ಳಲು ಸದ್ದಿಲ್ಲದೆ ತಯಾರಿ ಮಾಡುತ್ತಿದ್ದು, ಯಾರ‍್ಯಾರು ಸ್ಪರ್ಧೆ ಮಾಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಮೌನಕ್ಕೆ ಶರಣಾದ ಜಿಟಿಡಿ: ಇತ್ತೀಚಿನ ದಿನಗಳಲ್ಲಿ ಮೌನಕ್ಕೆ ಶರಣಾಗಿರುವ ಶಾಸಕ ಜಿ.ಟಿ.ದೇವೇಗೌಡರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ತಮ್ಮ ಪುತ್ರ ಜಿ.ಡಿ.ಹರೀಶ್‌ಗೌಡರಿಗೆ ಅನುಕೂಲವಾಗುವ ರೀತಿಯಲ್ಲಿ ಒಳಗೊಳಗೆ ರಣತಂತ್ರ ಹೆಣೆಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಆತ್ಮೀಯತೆ ಹೊಂದಿರುವ ಕಾರಣ ಚುನಾವಣೆಯಿಂದ ದೂರ ಉಳಿಯಬಹುದು ಎನ್ನಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

30 mins ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

33 mins ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

35 mins ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

39 mins ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

47 mins ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

52 mins ago