ಪ್ರಶಾಂತ್.ಎಸ್
ದುರಸ್ತಿಗೆ ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ, ಅಪಘಾತವಾದರೆ ಸಾವು ಗ್ಯಾರಂಟಿ
ಮೈಸೂರು: ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾದ ಡಾ.ರಾಜ್ ಕುಮಾರ್ ರಸ್ತೆ ತುಂಬೆಲ್ಲಾ ಗುಂಡಿಗಳು ಬಿದ್ದಿದ್ದು, ನಾಲ್ಕು ವರ್ಷಗಳಿಂದಲೂ ಅಪಾಯಕ್ಕೆ ಆಹ್ವಾನ ನೀಡುತ್ತಿವೆ.
ಶಕ್ತಿನಗರ,ಯರಗನಹಳ್ಳಿ, ಶಿಕ್ಷಕರ ಬಡಾವಣೆ, ರಾಘವೇಂದ್ರ ನಗರ ಸೇರಿದಂತೆ ಅಂದಾಜು ೭ ಕಿ.ಮೀ. ಇರುವ ಈ ರಸ್ತೆ ಕಾವೇರಿ ವೃತ್ತದಿಂದ ಯರಗನಹಳ್ಳಿಯ ಸಿದ್ದಪ್ಪಾಜಿ ದೇವಸ್ಥಾನದವರೆಗೆ ಸುಮಾರು ೫೦೦ ಮೀ.ವರೆಗಿನ ರಸ್ತೆಯಲ್ಲಿ ಹಲವು ದಿನಗಳಿಂದ ಗುಂಡಿ ಬಿದ್ದಿದೆ. ಈ ಬಗ್ಗೆ ಸ್ಥಳೀಯರು ಅನೇಕ ಬಾರಿ ನಗರಪಾಲಿಕೆ, ಮೈಸೂರು ಅಭಿವೃದ್ಧಿ ಪ್ರಾಧಿಕಾರ, ಸ್ಥಳೀಯ ಜನಪ್ರತಿನಿಧಿಗಳಿಗೆ ದೂರು ನೀಡಿದ್ದಾರೆ. ಆದರೆ, ಈವರೆಗೂ ಗುಂಡಿ ಮುಚ್ಚಿ ರಸ್ತೆ ಸರಿಪಡಿಸುವ ಕಾರ್ಯವಾಗಿಲ್ಲ.
ಪರಿಹಾರಕ್ಕೆ ನ್ಯಾಯಾಲಯದ ಮೊರೆ : ಡಾ.ರಾಜ್ ಕುಮಾರ್ ರಸ್ತೆಯಲ್ಲಿ ಕೆಲವು ಸ್ಥಳಗಳು ರೆವಿನ್ಯೂ ಬಡಾವಣೆ ವ್ಯಾಪ್ತಿಗೆ ಬರುತ್ತವೆ. ಈ ಭಾಗ ದಲ್ಲಿವಾಸಿಸುತ್ತಿರುವ ಕೆಲವು ನಿವಾಸಿಗಳು ರಸ್ತೆ ಜಾಗ ನಮಗೆ ಸೇರಿದ್ದು, ನಮಗೆ ಪರಿಹಾರ ನೀಡಿಲ್ಲ ಎಂದು ನ್ಯಾಯಾಲಯದ ಮೊರೆ ಹೋಗಿದ್ದಾರೆ. ನ್ಯಾಯಾಲಯ ಪೂರಕ ದಾಖಲೆಗಳನ್ನು ನೀಡುವಂತೆ ಹೇಳಿದೆ. ಆದರೆ ಇದು ವರೆಗೂ ದಾಖಲೆಗಳನ್ನು ನೀಡಿಲ್ಲ. ದಾಖಲೆಗಳನ್ನು ಸಲ್ಲಿಸದಿರುವುದರಿಂದ ಇದುವರೆಗೂ ಪರಿಹಾರ ನೀಡಿಲ್ಲ. ಹಾಗಾಗಿ ರಸ್ತೆ ಸಮಸ್ಯೆ ಹಾಗೆಯೇ ಉಳಿದಿದೆ ಎನ್ನಲಾಗಿದೆ.
ರೆವಿನ್ಯೂ ಬಡಾವಣೆ ಆಗಿರುವುದೇ ಸಮಸ್ಯೆಗೆ ಕಾರಣ: ಡಾ.ರಾಜ್‌ಕುಮಾರ್ ರಸ್ತೆ ರೆವಿನ್ಯೂ ಬಡಾವಣೆಗೆ ಸೇರಿದೆ. ಇದೇ ಕಾರಣದಿಂದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ ಎಂದು ಹೇಳಲಾಗಿದೆ. ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ ಎಂಬ ಕಾರಣದಿಂದ ಸಂಬಂಧಪಟ್ಟವರು ರಸ್ತೆ ದುರಸ್ತಿಗೆ ಮುಂದಾಗುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿಸ್ತುತಾರೆ. ರಸ್ತೆಯನ್ನು ಡಾಂಬರೀಕರಣಗೊಳಿಸಲು ಹಾಗೂ ಗುಂಡಿ ಮುಚ್ಚಲು ನ್ಯಾಯಾಲಯ ತಡೆಯಾಜ್ಞೆ ನೀಡಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಹರಿಸಿ ಸಮಸ್ಯೆ ಬಗೆಹರಿಸುವ ಮೂಲಕ ಸಾರ್ವಜನಿಕರ ಸಮಸ್ಯೆಗೆ ತೆರೆ ಎಳೆಯಬೇಕಾಗಿದೆ.
ಅಭಿವೃದ್ಧಿಗೆ ನ್ಯಾಯಾಲಯದ ತಡೆಯಾಜ್ಞೆ ಇಲ್ಲ : ಈ ರಸ್ತೆಯನ್ನು ಡಾಂಬರೀಕರಣಗೊಳಿಸಲು ಹಾಗೂ ಗುಂಡಿಮುಚ್ಚಲು ನ್ಯಾಯಾಲಯ ತಡೆಯಾಜ್ಞೆ ನೀಡಿಲ್ಲ. ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಅಭಿವೃದ್ಧಿಪಡಿಸಬೇಕಿದೆ. ರೆವಿನ್ಯೂ ಬಡಾವಣೆ ಆಗಿರುವುದರಿಂದ ಅಭಿವೃದ್ಧಿ ಮಾಡಲು ಆಗುವುದಿಲ್ಲ ಎನ್ನುವುದಾದರೆ ನಗರದ ಇತರ ರೆವಿನ್ಯೂ ಬಡಾವಣೆಗಳ ರಸ್ತೆಯನ್ನು ಅಭಿವೃದ್ಧಿ ಮಾಡಿಲ್ಲವೇ ಎಂದು ಇಲ್ಲಿನ ನಿವಾಸಿಗಳು ಪ್ರಶ್ನೆ ಮಾಡುತ್ತಾರೆ. ಬೇರೆ ಬಡಾವಣೆಗಳ ರಸ್ತೆಗಳನ್ನು ಅಭಿವೃದ್ಧಿ ಮಾಡಿರುವಂತೆಯೇ ಈ ರಸ್ತೆಯನ್ನು ಅಭಿವೃದ್ಧಿ ಮಾಡುವಂತೆ ನಿವಾಸಿಗಳು ಆಗ್ರಹಿಸುತ್ತಾರೆ.
” ಡಾ ರಾಜ್ ಕುಮಾರ್ ರಸ್ತೆಯಲ್ಲಿರುವ ಕೆಲಭಾಗಗಳು ರೆವಿನ್ಯೂ ಬಡಾವಣೆ ವ್ಯಾಪ್ತಿಗೆ ಬರುತ್ತವೆ. ಈ ಭಾಗದ ಹಲವರು ರಸ್ತೆ ಜಾಗ ನಮಗೆ ಸೇರಿದ್ದು, ಅದಕ್ಕೆ ಪರಿಹಾರ ದೊರೆತಿಲ್ಲ ಎಂದು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಪ್ರಕರಣದ ವಿಚಾರಣೆ ಮುಗಿದಿದ್ದು ಅಂತಿಮ ಹಂತಕ್ಕೆ ಬಂದಿದೆ. ತೀರ್ಪು ಬಂದ ನಂತರ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ರಸ್ತೆ ಅಭಿವೃದ್ಧಿಗೆ ೧ ಕೋಟಿ ರೂ . ಅನುದಾನಕ್ಕೆ ಅನುಮೋದನೆ ಸಿಕ್ಕಿದೆ.”
– ಯೋಗಾನಂದ , ಅಭಿವೃದ್ಧಿ ಅಧಿಕಾರಿ, ನಗರಪಾಲಿಕೆ ವಲಯ ಕಚೇರಿ ೯
” ಬಹಳ ದಿನಗಳಿಂದ ಈ ಗುಂಡಿಮಯ ರಸ್ತೆಯಲ್ಲಿ ಬೈಕ್ ಸವಾರರು ಹಾಗೂ ಪಾದಚಾರಿಗಳಿಗೆ ಸಾಕಷ್ಟು ಸಮಸ್ಯೆ ಉಂಟಾಗಿದೆ.ಪ್ರತಿದಿನ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಈ ರಸ್ತೆ ದಾಟಿ ಬೇರೆ ರಸ್ತೆಗೆ ಹೋಗಲು ಹರಸಾಹಸ ಪಡುವಂತಾಗಿದೆ.ಕೋರ್ಟ್‌ನಲ್ಲಿ ಕೇಸ್ ಇದೆ ಎಂಬ ನೆಪವೊಡ್ಡಿ ರಸ್ತೆ ದುರಸ್ತಿಪಡಿಸಲು ಮುಂದಾಗಿಲ್ಲ. ಇದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ನರಕಯಾತನೆ ಅನುಭವಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಲಿ.”
-ಮಂಜುನಾಥ್, ಯರಗನಹಳ್ಳಿ ನಿವಾಸಿ
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…