Mysore
17
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಹನೂರು: ಇಂದು, ನಾಳೆ ವಿದ್ಯುತ್‌ ವ್ಯತ್ಯಯ

ಹನೂರು: ಪಟ್ಟಣದ ಮುಖ್ಯ ರಸ್ತೆಯ ಅಗಲೀಕರಣ ಕಾಮಗಾರಿ ಹಿನ್ನೆಲೆ ವಿದ್ಯುತ್‌ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 23 ಹಾಗೂ 24 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹನೂರು ಉಪವಿಭಾಗದ ಹನೂರು 66/ 11 ಕೆವಿ ವಿದ್ಯುತ್‌ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹನೂರು ಟೌನ್ ಫೀಡರ್‌ನ ವ್ಯಾಪ್ತಿಯಲ್ಲಿ ಮೇ 23 ಹಾಗೂ 24ರಂದು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ.

Tags:
error: Content is protected !!