ಸರಗೂರು: ತಾಲ್ಲೂಕಿನ ಚಾಮುಂಡೇಶ್ವರಿ ವಿದ್ಯುತ್ ಸರಬ ರಾಜು ನಿಗಮದಿಂದ ಇಲ್ಲಿನ 66/11 ಕೆ. ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಸರಗೂರು ಮತ್ತು ಬಿ. ಮಟಕೆರೆ ಫೀಡರ್‌ಗಳಲ್ಲಿ ತ್ರೈಮಾಸಿಕ ಕಾರ್ಯ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಶುಕ್ರವಾರ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಬಿ. ಮಟಕೆರೆ, ಹೆಗ್ಗನೂರು, ಬಿದರಹಳ್ಳಿ, ಎನ್. ಬೇಗೂರು, ಹಾದನೂರು, ಎಂ. ಸಿ. ತಳಲು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ರೈತರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಕೆ. ದೀಪಕ್ ತಿಳಿಸಿದ್ದಾರೆ.