Andolana originals

6 ಉಪಕೇಂದ್ರಗಳಲ್ಲಿ ಸೌರ ವಿದ್ಯುತ್ ಘಟಕ ಸ್ಥಾಪನೆಗೆ ಸಿದ್ಧತೆ

ನವೀನ್ ಕುಮಾರ್

ಪಿರಿಯಾಪಟ್ಟಣ: ಪಿಎಂ ಕುಸುಮ್ ಸಿ ಸೌರ ವಿದ್ಯುತ್ ಯೋಜನೆಯಡಿ ವಿದ್ಯುತ್ ಉತ್ಪಾದನೆಯ ಗುರಿ

ಪಿರಿಯಾಪಟ್ಟಣ: ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ವಿದ್ಯುತ್ ಅಭಾವ ನೀಗಿಸಲು ಪಿಎಂ ಕುಸುಮ್-ಸಿ ಸೌರ ವಿದ್ಯುತ್ ಯೋಜನೆಯಡಿ ೬ ಸೌರ ವಿದ್ಯುತ್ ಘಟಕಗಳ ಸ್ಥಾಪನೆಗೆ ಭರದ ಸಿದ್ಧತೆ ನಡೆಯುತ್ತಿದೆ.

ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್ ) ವತಿಯಿಂದ ತಾಲ್ಲೂಕು ವ್ಯಾಪ್ತಿಯ ೬ ವಿದ್ಯುತ್ ಉಪ ಕೇಂದ್ರಗಳಲ್ಲಿ ಪಿಎಂ ಕುಸುಮ್-ಸಿ ಯೋಜನೆಯಡಿ ಸೌರ ವಿದ್ಯುತ್ ಪೂರೈಕೆ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ.

೧೪೭ ಕೋಟಿ ರೂ. ಯೋಜನೆ: ಇತ್ತೀಚೆಗೆ ಮುಖ್ಯಮಂತ್ರಿಗಳು ಪಿರಿಯಾಪಟ್ಟಣಕ್ಕೆ ಆಗಮಿಸಿ ಈ ಯೋಜನೆಗೆ ಚಾಲನೆ ನೀಡಿದ್ದು, ಈಗಾಗಲೇ ತಾಲ್ಲೂಕಿನಲ್ಲಿ ೨೧೬ ಎಕರೆ ಭೂಮಿಯನ್ನು ಗುರುತಿಸಿ ಈ ಯೋಜನೆಗೆ ಮೀಸಲಿರಿ ಸಲಾಗಿದೆ. ಒಟ್ಟು ೧೪೭ ಕೋಟಿ ರೂ. ವೆಚ್ಚದ ಯೋಜನೆ ಇದಾಗಿದೆ.

೪೨ ಮೆಗಾವ್ಯಾಟ್ ಗುರಿ: ಪಿರಿಯಾಪಟ್ಟಣದ ಬೆಟ್ಟದಪುರ ಕೇಂದ್ರಕ್ಕೆ ೭.೩೨೮, ಪಿರಿಯಾಪಟ್ಟಣ ವಿದ್ಯುತ್ ಉಪ ಕೇಂದ್ರಕ್ಕೆ ೧೪.೮೭, ಬೈಲಕುಪ್ಪೆಗೆ ೫.೦೫೭, ರಾವಂದೂರಿಗೆ ೪.೬೭, ಕಣಗಾಲು ವಿದ್ಯುತ್ ಉಪ ಕೇಂದ್ರಕ್ಕೆ ೭.೩೮, ಕಂಪಲಾಪುರ ವಿದ್ಯುತ್ ಉಪ ಕೇಂದ್ರಕ್ಕೆ ೨.೫೪ ಮೆಗಾವ್ಯಾಟ್ ಸೌರ ವಿದ್ಯುತ್ ಪೂರೈಕೆಯಾಗಲಿದೆ. ಒಟ್ಟಾರೆ ೪೨ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹೊಂದಲಾಗಿದೆ.

ಬೇಸಿಗೆಯಲ್ಲಿ ರೈತರಿಗೆ ಅನುಕೂಲ: ತಾಲ್ಲೂಕಿನಲ್ಲೇ ಸೌರ ವಿದ್ಯುತ್ ಉತ್ಪಾದನೆ ಆಗುವುದರಿಂದ ಬೇಸಿಗೆ ಅವಽಯಲ್ಲೂ ರೈತರಿಗೆ ೭ ಗಂಟೆಗಳ ಸಂಪೂರ್ಣ ವಿದ್ಯುತ್ ಪೂರೈಸಲು ಸಹಕಾರಿಯಾಗಲಿದೆ.

೨೫ ಸಾವಿರ ರೂ. ನೆಲಬಾಡಿಗೆ: ಈಗಾಗಲೇ ಗುರುತಿಸಿರುವ ೨೧೬ ಎಕರೆ ಪ್ರದೇಶವನ್ನು ಖಾಸಗಿ ಕಂಪೆನಿಗಳಿಗೆ ನೀಡಲಿದ್ದು, ಪ್ರತಿ ಎಕರೆಗೆ ೨೫,೦೦೦ ರೂ.ವರೆಗೆ ನೆಲಬಾಡಿಗೆ ಪಡೆಯಲಾಗುತ್ತದೆ. ಇದರಿಂದ ಸರ್ಕಾರಕ್ಕೆ ಆದಾಯ ಕೂಡ ಬರಲಿದೆ.

ಪ್ರಸ್ತುತ ವಿದ್ಯುತ್ ಅನ್ನು ಪ್ರತಿ ಯೂನಿಟ್‌ಗೆ ಸರಾಸರಿ ೭ ರೂ. ನೀಡಿ ಖರೀದಿಸಲಾಗುತ್ತಿದ್ದು, ದೂರದ ಫೀಡರ್‌ಗಳಿಂದ ವಿದ್ಯುತ್ ಖರೀದಿ ಸಲು ಹೆಚ್ಚಿನ ಹಣ ನೀಡಬೇಕಾಗುತ್ತದೆ. ಈ ಯೋಜನೆ ಸಂಪೂರ್ಣ ಜಾರಿಯಾದರೆ ಸರಾಸರಿ ೩.೫ ರೂ.ಗಳಿಗೆ ೧ ಯೂನಿಟ್ ವಿದ್ಯುತ್ ಖರೀದಿ ಮಾಡಬಹುದಾಗಿದೆ. ಈ ಕುರಿತು ಖಾಸಗಿ ಕಂಪೆನಿಗಳೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲಾಗುತ್ತಿದೆ.

ಸಚಿವ ಕೆ.ವೆಂಕಟೇಶ್ ಅವರು ಈಗಾಗಲೇ ಕುಸುಮ್ ಸಿ ಯೋಜನೆ ಅನುಷ್ಠಾನ ಸಂಬಂಧ ಹಿರಿಯ ಅDiಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಕಾರ್ಯಗತಗೊಳಿಸುತ್ತಿದ್ದಾರೆ. ಒಟ್ಟಾರೆ ಯೋಜನೆ ಜಾರಿಯಾದರೆ ತಾಲ್ಲೂಕಿನಲ್ಲಿ ರೈತರಿಗೆ ಹೆಚ್ಚು ಅನುಕೂಲವಾಗಲಿದೆ.

” ಸಚಿವರ ಆದೇಶದಂತೆ ಕುಸುಮ್ ಸಿ ಯೋಜನೆ ಜಾರಿಗೆ ಅಗತ್ಯವಾದ ೨೧೬ ಎಕರೆ ಭೂಮಿಯನ್ನು ಈಗಾಗಲೇ ಗುರುತಿಸಿ ಸೆಸ್ಕ್‌ಗೆ ನೀಡಲಾಗಿದೆ.”

-ನಿಸರ್ಗ ಪ್ರಿಯಾ, ತಹಸಿಲ್ದಾರ್.

” ಈಗಾಗಲೇ ಬಹುತೇಕ ಜಾಗ ನೀಡಲಾಗಿದ್ದು, ಹೆಚ್ಚಿನ ಜಾಗ ದೊರಕದಿರುವ ಫೀಡರ್ ಪ್ರದೇಶಗಳಲ್ಲಿ ರೈತರ ಜಮೀನುಗಳನ್ನು ಲೀಸ್‌ಗೆ ಪಡೆದು ವಿದ್ಯುತ್ ಉತ್ಪಾದನೆಗೆ ಮುಂದಾಗಲಾಗುವುದು. ಇದರಿಂದ ರೈತರಿಗೂ ಹೆಚ್ಚಿನ ಅನುಕೂಲವಾಗಲಿದೆ.”

-ಗುರುಬಸವರಾಜು, ಎಇಇ, ಸೆಸ್ಕ್

ಆಂದೋಲನ ಡೆಸ್ಕ್

Recent Posts

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ…

8 mins ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

36 mins ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

44 mins ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

52 mins ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

4 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

5 hours ago