Andolana originals

ರಾಜ್ಯಾದ್ಯಂತ 242 ಗ್ರಂಥಾಲಯ ಸ್ಥಾಪನೆಗೆ ಸಿದ್ಧತೆ

ಪ್ರಶಾಂತ್ ಎಸ್.

ರಾಷ್ಟ್ರಿಯ ಡಿಜಿಟಲ್ ಲೈಬ್ರರಿ ಯೋಜನೆಯಡಿ ತಯಾರಿ

ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಗ್ರಂಥಾಲಯ

ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಸ್ಥಳ ಗುರುತು

ಯೋಜನೆಗೆ ಒಟ್ಟು ೨.೪ ಕೋಟಿ ರೂ. ಬಿಡುಗಡೆ

ಡಿಜಿಟಲ್ ಮೂಲಸೌಕರ್ಯಕ್ಕೆ ಚಿಂತನೆ

ಮೈಸೂರು: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ ಯುವಜನರು, ವಿದ್ಯಾರ್ಥಿಗಳಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ರಾಜ್ಯಾದ್ಯಂತ ೨೪೨ ಗ್ರಂಥಾಲಯಗಳನ್ನು ಸ್ಥಾಪಿಸಲು ಮುಂದಾಗಿದೆ.

ಡಿಜಿಟಲ್ ಮೂಲಸೌಕರ್ಯಕ್ಕೆ ಚಿಂತನೆ ಗ್ರಾಮೀಣ ಪ್ರದೇಶದಲ್ಲಿ ಪುಸ್ತಕ ಸಂಸ್ಕೃತಿಯನ್ನು ಉತ್ತೇಜಿಸಿ, ವಯಸ್ಸಿಗೆ ತಕ್ಕಂತೆ ಓದುವ ಸಾಮಗ್ರಿಗಳನ್ನು ಒದಗಿಸುವುದಕ್ಕೆ ರಾಷ್ಟ್ರೀಯ ಡಿಜಿಟಲ್ ಲೈಬ್ರರಿಯಲ್ಲಿ ಏಕೀಕೃತ ಡಿಜಿಟಲ್ ಪ್ಲಾಟ್ ಫಾರ್ಮ್‌ಗಳಲ್ಲಿ ವಿವಿಧ ಕಲಿಕಾ ಸಂಪನ್ಮೂಲಗಳು ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಗ್ರಾ ಪಂ ಮಟ್ಟದಲ್ಲಿ ಡಿಜಿಟಲ್ ಮೂಲ ಸೌಕರ್ಯಗಳ ಜತೆಗೆ ಹೊಸದಾಗಿ ಗ್ರಂಥಾ ಲಯಗಳನ್ನು ಆರಂಭಿಸಲು ಚಿಂತಿಸಲಾಗಿದೆ.

ಪುಸ್ತಕ ಸರಬರಾಜು: ಪ್ರತಿ ಗ್ರಂಥಾಲಯಕ್ಕೆ ಮಂಜೂರಾದ ೧ ಲಕ್ಷ ರೂ.ಗಳಲ್ಲಿ ಶೇ.೫೦ರಷ್ಟು ಮೊದಲ ಕಂತಿನ ಹಣವನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನ್ಯಾಷನಲ್ ಬುಕ್ ಟ್ರಸ್ಟ್ ಆಫ್ ಇಂಡಿಯಾ, ಕೇಂದ್ರ ಶಿಕ್ಷಣ ಸಚಿವಾಲಯದಿಂದ ಪ್ರಕಟಗೊಂಡ ಪುಸ್ತಕಗಳನ್ನು ಖರೀದಿಸಲು ಆದೇಶ ನೀಡಲಾಗಿದೆ.ಪ್ರಸ್ತುತ ಪುಸ್ತಕ ಸರಬರಾಜು ಪ್ರಕ್ರಿಯೆ ಪ್ರಗತಿಯಲ್ಲಿದೆ.

ಈಗಾಗಲೇ ಗ್ರಾಪಂ ಗ್ರಂಥಾಲಯವಿರುವ ಮತ್ತು ಗ್ರಾಮದಲ್ಲಿ ಗ್ರಂಥಾಲಯ ಹೊಂದಿರುವ ಶಾಲೆಗಳನ್ನು ಹೊರತುಪಡಿಸಿ, ವಸತಿ ಪ್ರದೇಶಕ್ಕೆ ಹತ್ತಿರವಿರುವಂತೆ ಕಟ್ಟಡಗಳನ್ನು ಆಯ್ಕೆ ಮಾಡಲಾಗಿದೆ. ಇನ್ನು ಪ್ರತಿ ಗ್ರಂಥಾಲಯಕ್ಕೆ ತಲಾ ೧ ಲಕ್ಷ ರೂ. ವೆಚ್ಚದಲ್ಲಿ ಪೀಠೋಪಕರಣಗಳನ್ನು ಖರೀದಿಸಲು ಮಾರ್ಗಸೂಚಿಯಲ್ಲಿ ಅವಕಾಶವಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ಪೀಠೋಪಕರಣ ಖರೀದಿಸಿ ಗ್ರಂಥಾಲಯಗಳನ್ನು ಆರಂಭಿಸಲಾಗುವುದು.

” ಜಿಲ್ಲೆಯಲ್ಲಿ ೨೮೫ ಗ್ರಂಥಾಲಯಗಳನ್ನು ಸ್ಥಾಪಿಸಲು ಗುರಿ ನೀಡಲಾಗಿದ್ದು, ಅದರಲ್ಲಿ ೨೪೨ ಗ್ರಂಥಾಲಯಗಳನ್ನು ಆರಂಭಿಸಲು ಸ್ಥಳ ಗುರುತಿಸಲಾಗಿದೆ. ಅನುದಾನ ಕೂಡ ಬಿಡುಗಡೆಯಾಗಿದೆ. ಇನ್ನೂ ಹೆಚ್ಚುವರಿಯಾಗಿ ಗ್ರಂಥಾಲಯ ಆರಂಭಿಸಲು ಅವಕಾಶವಿದ್ದು, ಸ್ಥಳಾವಕಾಶ ಸಿಕ್ಕರೆ ಸೂಕ್ತ ರೀತಿಯಲ್ಲಿ ಕ್ರಮವಹಿಸಲಾಗುವುದು.”

ದೀಪಾ, ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಜಿಲ್ಲಾ ಪಂಚಾಯಿತಿ, ಮೈಸೂರು

” ಗ್ರಾಮೀಣ ಭಾಗದಲ್ಲಿ ಗ್ರಂಥಾಲಯಗಳು ಹೆಚ್ಚಾದರೆ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಉಪಯೋಗವಾಗುತ್ತದೆ. ಬೆಳಿಗ್ಗೆಯಿಂದ ಕೆಲಸ ಮಾಡಿ ಸಾಯಂಕಾಲ ಬಿಡುವು ಮಾಡಿಕೊಂಡು ಒಂದಿಷ್ಟು ಪುಸ್ತಕಗಳನ್ನು ಓದಿದರೆ ಜ್ಞಾನಾರ್ಜನೆ ಜೊತೆಗೆ ಹೊಸ ವಿಷಯಗಳನ್ನೂ ತಿಳಿದುಕೊಳ್ಳಬಹುದು.”

ಕುಮಾರಿ ನಾಯಕ್, ವಿದ್ಯಾರ್ಥಿನಿ

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

5 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

6 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

7 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

7 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

7 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

7 hours ago