ಕೆ.ಬಿ.ರಮೇಶನಾಯಕ
‘ಒಟ್ಟಾಗಿ ಕೈಜೋಡಿಸಿ ಶುಚಿಗೊಳಿಸಿ’ ಎಂಬ ಘೋಷವಾಕ್ಯದೊಂದಿಗೆ ಸರ್ವೇಕ್ಷಣೆ
ಮೈಸೂರು: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ವತಿಯಿಂದ ದೇಶಾದ್ಯಂತ ೨೦೨೫-೨೬ನೇ ಸಾಲಿಗೆ ನಡೆಸಲಿರುವ ಸ್ವಚ್ಛ ಸರ್ವೇಕ್ಷಣೆಗೆ ಟೂಲ್‌ಕಿಟ್ ಬಿಡುಗಡೆಯಾಗಿದ್ದು, ಈ ಬಾರಿ ‘ಒಟ್ಟಾಗಿಕೈಜೋಡಿಸಿ ಶುಚಿಗೊಳಿಸಿ’ ಎಂಬ ಘೋಷ ವಾಕ್ಯದೊಂದಿಗೆ ಸರ್ವೇಕ್ಷಣೆ ನಡೆಯಲಿದೆ.
ಅರಮನೆ ನಗರಿ ಮೈಸೂರೂ ಕಳೆದ ಬಾರಿ ಸೂಪರ್ ಸ್ವಚ್ಛ ಲೀಗ್ ಪ್ರಶಸ್ತಿ ಪಡೆದುಕೊಂಡಿದ್ದು, ಈ ಪ್ರಶಸ್ತಿ ಪಡೆದ ದೇಶದ ಕೆಲವೇ ಕೆಲವು ನಗರಗಳ ಪೈಕಿ ಮೈಸೂರು ಒಂದು ಎಂಬುದು ಹೆಗ್ಗಳಿಕೆ ವಿಚಾರ. ಈ ಬಾರಿ ಯೂ ಸ್ವಚ್ಛತೆಯಲ್ಲಿ ದೇಶದ ಗಮನ ಸೆಳೆಯಲು ಸಾಂಸ್ಕೃತಿಕ ನಗರಿ ಮತ್ತೊಮ್ಮೆ ಸಜ್ಜುಗೊಳ್ಳುತ್ತಿದೆ.
ಕಳೆದ ಬಾರಿ ರೆಡ್ಯೂಸ್(ಕಡಿಮೆ ಮಾಡು), ರೀಯೂಸ್(ಮರು ಬಳಕೆ) ಮತ್ತು ರೀ ಸೈಕಲ್ (ಪುನರ್ಬಳಕೆ) ಥೀಮ್‌ನಡಿ ಸ್ವಚ್ಛ ಸರ್ವೇಕ್ಷಣೆ ನಡೆದಿತ್ತು. ಈ ಬಾರಿ ‘ಒಟ್ಟಾಗಿ ಕೈಜೋಡಿಸಿ ಶುಚಿಗೊಳಿಸಿ’ ಥೀಮ್ ಅಡಿಯಲ್ಲಿ ಸ್ವಚ್ಛ ಸರ್ವೇಕ್ಷಣೆ ನಡೆಯಲಿದೆ. ಈ ಬಾರಿ ಅಂಕಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲದಿದ್ದರೂ ಸ್ವಚ್ಛ ಸರ್ವ ಕ್ಷಣ ತಂಡ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ನಡೆಸುವ ಮೌಲ್ಯಮಾಪನಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ.
೧೨,೫೦೦ ಅಂಕಗಳಿಗೆ ಸ್ಪರ್ಧೆ: ಕಳೆದ ಬಾರಿಯಂತೆ ಈ ಬಾರಿಯೂ ೧೨,೫೦೦ ಅಂಕಗಳಿಗೆ ಸ್ಪರ್ಧೆ ನಡೆಯಲಿದೆ. ೧ರಿಂದ ೪ ಹಂತಗಳಿಗೆ ಒಟ್ಟು ೧೦,೫೦೦ ಅಂಕಗಳನ್ನು ಹಂಚಿಕೆ ಮಾಡಲಾಗಿದೆ. ಉಳಿದ ೨,೦೦೦ ಅಂಕಗಳ ಪೈಕಿ ಒಡಿಎಫ್, ಒಡಿಎಫ್ +, ಒಡಿಎಫ್++, ವಾಟರ್+ಗೆ ೧,೦೦೦ ಅಂಕಗಳು, ತ್ಯಾಜ್ಯ ಮುಕ್ತ ನಗರಕ್ಕೆ ೧,೦೦೦ ಅಂಕಗಳನ್ನು ಹಂಚಿಕೆ ಮಾಡಲಾಗಿದೆ. ೧ ರಿಂದ ೪ ರವರೆಗಿನ ಹಂತಗಳಲ್ಲಿ ಬರುವ ೧೦,೫೦೦ ಅಂಕಗಳನ್ನು ೧೦ ವಿಭಾಗಗಳಿಗೆ ಹಂಚಿಕೆ ಮಾಡಲಾಗಿದೆ.
ವಿಜಿಬಲ್ ಕ್ಲೀನ್ಲಿನೆಸ್(ಬಡಾವಣೆ, ವಾಣಿಜ್ಯ ಪ್ರದೇಶಗಳನ್ನು ದಿನನಿತ್ಯ ಶುಚಿಗೊಳಿಸುವುದು ಹಾಗೂ ಇತ್ಯಾದಿ)ಗೆ ೧,೫೦೦ ಅಂಕಗಳು, ತ್ಯಾಜ್ಯದ ವಿಂಗಡಣೆ, ಸಂಗ್ರಹಣೆ ಹಾಗೂಸಾಗಣೆಗೆ ೧,೦೦೦, ಘನತ್ಯಾಜ್ಯ ನಿರ್ವಹಣೆಗೆ ೧,೫೦೦, ಆಕ್ಸಸಸ್ ಟು ಸ್ಯಾನಿಟೇಷನ್ (ಶೌಚಗೃಹಗಳ ಉತ್ತಮ ನಿರ್ವಹಣೆ)ಗೆ ೧,೦೦೦, ಮಲಿನ ನೀರಿನ ನಿರ್ವಹಣೆಗೆ ೧,೦೦೦, ತ್ಯಾಜ್ಯ ವಿಲೇವಾರಿ ಸೇವೆಗಳ ಯಾಂತ್ರೀಕರಣಕ್ಕೆ ೫೦೦, ಅಡ್ವೋಕೆಸಿ ಆಫ್ ಸ್ವಚ್ಛತಾ (ಸ್ವಚ್ಛತಾ ಆಪ್ ಬಳಕೆ, ಸ್ವಚ್ಛತೆ ಕುರಿತು ಜನಜಾಗೃತಿ ಹಾಗೂ ಇತ್ಯಾದಿ)ಗೆ ೧,೫೦೦, ಇಕೋ ಸಿಸ್ಟಮ್ ಸ್ಟ್ರೆಂಥ ನಿಂಗ್ ಅಂಡ್ ಇನ್‌ಸ್ಟಿಟ್ಯೂಷನಲ್ ಪ್ಯಾರಾ ಮೀಟರ್ಸ್ (ಅ ನೈರ್ಮಲ್ಯ ಸೃಷ್ಟಿಸುವ ವರಿಗೆ ದಂಡ ವಿಧಿಸುವುದು, ಸ್ವಚ್ಛ ವಾರ್ಡ್ ರ‍್ಯಾಂಕಿಂಗ್)ಗೆ ೧,೦೦೦, ನೈರ್ಮಲ್ಯ ಕಾರ್ಮಿಕರ ಕಲ್ಯಾಣಕ್ಕೆ ೫೦೦, ಸಿಟಿಜನ್ ಫೀಡ್‌ಬ್ಯಾಕ್‌ಗೆ ೧೦೦೦ ಅಂಕಗಳನ್ನು ಹಂಚಿಕೆ ಮಾಡಲಾಗಿದೆ.
ಮೈಸೂರಿಗೆ ಸಂದಿರುವ ಪ್ರಶಸ್ತಿಗಳು: ಸ್ವಚ್ಛತಾ ರ‍್ಯಾಂಕಿಂಗ್ ಜತೆಗೆ ಇದುವರೆಗೆ ಹಲವು ಪ್ರಶಸ್ತಿಗಳನ್ನು ಮೈಸೂರು ನಗರ ರಾಷ್ಟ್ರಮಟ್ಟದಲ್ಲಿ ಪಡೆದುಕೊಂಡಿದೆ. ೨೦೧೮, ೨೦೨೦ ಮತ್ತು ೨೦೨೨ರಲ್ಲಿ ಮಧ್ಯಮ ನಗರ ವಿಭಾಗದಲ್ಲಿ(೩ರಿಂದ ೧೦ ಲಕ್ಷ ಜನಸಂಖ್ಯೆ) ದೇಶದ ನಂ.೧ ಸ್ವಚ್ಛನಗರಿ ಪಟ್ಟವನ್ನು ಪಡೆಯಿತು. ೨೦೨೧ರಲ್ಲಿ ದೇಶದ ನಂ.೧ ‘ಸ್ವಯಂ ಸುಸ್ಥಿರ ನಗರ’ (ಸೆಲ್ಛ್ ಸಸ್ಟೈನಬಲ್ ಸಿಟಿ) ಪ್ರಶಸ್ತಿ, ಸಫಾಯಿ ಮಿತ್ರ ಸುರಕ್ಷಾ ಪ್ರಶಸ್ತಿ, ಪೌರಕಾರ್ಮಿಕರ ಸಮವಸ್ತ್ರ ವಿನ್ಯಾಸ ಪ್ರಶಸ್ತಿ, ೨೦೧೯ರಿಂದ ೨೦೨೪ವರೆಗೆ ನಿರಂತರವಾಗಿ ಫೈವ್‌ಸ್ಟಾರ್ ರ‍್ಯಾಂಕಿಂಗ್‌ನೊಂದಿಗೆ ತ್ಯಾಜ್ಯ ಮುಕ್ತ ನಗರ, ಬಯಲು ಶೌಚಮುಕ್ತ ನಗರ ಪ್ರಶಸ್ತಿ, ೨೦೨೪ರಲ್ಲಿ ವಾಟರ್ ಪ್ಲಸ್ ನಗರ ಪ್ರಶಸ್ತಿಯನ್ನು ಪಡೆದುಕೊಂಡಿರುವುದನ್ನು ಗಮನಿಸಬಹುದಾಗಿದೆ.
ಸ್ವಚ್ಛತೆಯಲ್ಲಿ ಮೈಸೂರಿನ ಸಾಧನೆ: ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ೨೦೧೫, ೨೦೧೬ರಲ್ಲಿ ದೇಶದ ನಂ.೧ ಸ್ವಚ್ಛ ನಗರಿ ಯಾಗಿ ಹೊರ ಹೊಮ್ಮಿತ್ತು. ಆ ನಂತರ೨೦೧೭ರಲ್ಲಿ ೫ನೇ ಸ್ಥಾನ, ೨೦೧೮ರಲ್ಲಿ ೮, ೨೦೧೯ರಲ್ಲಿ ೩, ೨೦೨೦ರಲ್ಲಿ ೫, ೨೦೨೧ ರಲ್ಲಿ ೧೧, ೨೦೨೨ರಲ್ಲಿ ೮, ೨೦೨೩ರಲ್ಲಿ ೨೭ನೇ ಸ್ಥಾನ ಪಡೆದಿತ್ತು. ೨೦೨೪-೨೫ರಲ್ಲಿ ಸೂಪರ್ ಸ್ವಚ್ಛ ಲೀಗ್ ಪ್ರಶಸ್ತಿ ಪಡೆದುಕೊಂಡಿತ್ತು. ಸೂಪರ್ ಸ್ವಚ್ಛ ಲೀಗ್ ಪ್ರಶಸ್ತಿ ಪಡೆದ ನಗರಗಳನ್ನು ರ‍್ಯಾಕಿಂಗ್ ವ್ಯಾಪ್ತಿಗೆ ಒಳಪಡಿಸಲಿಲ್ಲ.
” ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೀಡಿರುವ ಟೂಲ್‌ಕಿಟ್‌ಗೆ ಅನುಸಾರವಾಗಿ ನಗರದಲ್ಲಿ ಈ ಬಾರಿಯ ಸ್ವಚ್ಛ ಸರ್ವೇಕ್ಷಣೆಗೆ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಕಳೆದ ಬಾರಿ ಸೂಪರ್ ಸ್ವಚ್ಛ ಲೀಗ್ ಪ್ರಶಸ್ತಿ ಪಡೆದು ದೇಶದ ಗಮನ ಸೆಳೆದಿದ್ದೇವೆ. ಈ ಬಾರಿಯೂ ಸ್ವಚ್ಛತೆಯಲ್ಲಿ ದೇಶದ ಗಮನ ಸೆಳೆಯಲು ನಗರದ ಜನರು ಸ್ವಚ್ಛತೆಗೆ ಹೆಚ್ಚಿನ ಸಹಕಾರ ನೀಡಬೇಕು. ಅದೇ ರೀತಿ ಸ್ವಚ್ಛ ಸರ್ವೇಕ್ಷಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು.”
-ಡಾ.ಎನ್.ವೆಂಕಟೇಶ್, ಆರೋಗ್ಯಾಧಿಕಾರಿ, ನಗರಪಾಲಿಕೆ
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಸನಿಹದಲ್ಲಿರುವ ತೊಳಸಿಕೆರೆ ಗ್ರಾಮದ ದುಮ್ಮತಂಬಡಿ ಅವರಿಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ…
ನಂಜನಗೂಡು : ʻಹತ್ತೂರು ಜಾತ್ರೆಗೆ ಸುತ್ತೂರು ಜಾತ್ರೆʼ ಸಮ ಎಂಬ ಗಾದೆ ಹೊಂದಿರುವ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಾತ್ರಾ…
ಕಿಕ್ಕೇರಿ : ಗ್ರಾಮೀಣ ಬದುಕಿನ ಸವಾಲುಗಳ ನಡುವೆ ಬೆಳೆದ ರೈತನ ಮಗಳು ತನ್ನ ಅಕ್ಷರಾಸಕ್ತಿಯಿಂದ ಇಡೀ ತಾಲ್ಲೂಕಿನ ಹೆಮ್ಮೆಯ ಮಗಳಾಗಿ…
ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ…
ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು…
ಮೈಸೂರು : ಕೃಷಿ ಪದ್ಧತಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆ ಕಡಿಮೆ ಮಾಡಿ ಹಸಿರೆಲೆ ಹಾಗೂ ಜೈವಿಕ ಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ…